The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಜೈವಿಕ ವಿಂಗಡಣೆ ಅಥವಾ ಜೀವಶಾಸ್ತ್ರದಲ್ಲಿ ವೈಜ್ಞಾನಿಕ ವಿಂಗಡಣೆಯು ಜಾತಿ ಮತ್ತು ಪ್ರಜಾತಿಯಂತಹ ಜೈವಿಕ ವರ್ಗದ ಅನುಸಾರವಾಗಿ ಸಾವಯವಗಳನ್ನು ಗುಂಪುಕೂಡಿಸಲು ಮತ್ತು ವರ್ಗೀಕರಿಸಲು ಜೀವವಿಜ್ಞಾನಿಗಳಿಂದ ಬಳಸಲ್ಪಡುವ ಒಂದು ವಿಧಾನ. ಜೈವಿಕ ವಿಂಗಡನೆಯು ವೈಜ್ಞಾನಿಕ ವರ್ಗೀಕರಣದ ಒಂದು ಪ್ರಕಾರ, ಆದರೆ ಇದಕ್ಕೆ ಮತ್ತು ವೈಜ್ಞಾನಿಕ ಆಧಾರವಿಲ್ಲದ ಪ್ರಚಲಿತ ವರ್ಗೀಕರಣಕ್ಕೆ (ಫೋಕ್ ಟ್ಯಾಕ್ಸಾನಮಿ) ವ್ಯತ್ಯಾಸವಿದೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವುಟೆಂಪ್ಲೇಟು:Fn ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಚಕ್ರಮುನಿಯ ತವರೂರು ಮಲೇಷಿಯಾ.ಸತ್ವಯುತ ಸಸ್ಯಮೂಲ ಆಹಾರಗಳಲ್ಲಿ ಪ್ರಕೃತಿಯ ಅಮೂಲ್ಯ ಕೊಡುಗೆಗಳಲ್ಲಿ ಚಕ್ರಮುನಿಯೂ ಒಂದು.ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿರುವುದರಿಂದ "ಬಹುಜೀವಸತ್ವಗಳ ಹಸಿರು" (ಮಲ್ಟಿವಿಟಮಿನ್ ಪ್ಲಾಂಟ್) ಎಂದು ಕರೆಯಲಾಗುತ್ತದೆ. ಚಕ್ರಮುನಿಯ ಎಲೆ,ಚಿಗುರು ಮತ್ತು ಕಾಂಡವನ್ನು ಹಸಿಯಾಗಿ ಇಲ್ಲವೇ ಬೇಯಸಿ ತಿನ್ನಬಹುದು.ಎಲೆಗಳು ಬೇಯಿಸಿದ ನಂತರ ಹುಳಿಯಾಗಿರುತ್ತವೆ.ಇಂಡೋನೇಷಿಯಾದಲ್ಲಿ ಇದನ್ನು ಹುದುಗು ಬಂದ ಅಕ್ಕಿಯ ಜೊತೆ ಬೇಯಿಸಿ ತಿನ್ನುತ್ತಾರೆ.ಕನ್ಯಾಕುಮಾರಿ ಜಿಲ್ಲೆಯಲ್ಲಿ ಇದನ್ನು ಪಶುಗಳ ಮತ್ತು ಕೋಳಿಗಳ ಆಹಾರ ತಯಾರಿಕೆಗಾಗಿ ಬಳಸುತ್ತಾರೆ.ಉತ್ತಮ ಪೌಷ್ಟಿಕತೆ ಮತ್ತು ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಪ್ರತಿ ಮನೆಯ ಮತ್ತು ಶಾಲೆಯ ತೋಟಗಳಲ್ಲಿ ಬೆಳೆಸಿ ಉಪಯೋಗಿಸಿದರೆ ಮಹಿಳೆಯರ ಮತ್ತು ಮಕ್ಕಳಲ್ಲಿನ ಜೀವಸತ್ವಗಳ ಕೊರತೆಯನ್ನು ನೀಗಿಸಬಹುದಾಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು (ತುಳು: ಕುಡ್ಲ; ಕೊಂಕಣಿ: ಕೊಡಿಯಾಲ್; ಬ್ಯಾರಿ: ಮೈಕಾಲ; ಆಂಗ್ಲ: ಮ್ಯಾಂಗಲೋರ್; ಮಲಯಾಳ೦: ಮ೦ಗಲಾಪುರ೦) ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಥವಾ ಕಾಂಗ್ರೆಸ್(ಐ) ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಇಂದು ಇರುವ ರಾಜಕೀಯ ಪಕ್ಷಗಳಲ್ಲಿ ಅತ್ಯಂತ ಹಳೆಯದು, ಮತ್ತು ಅತ್ಯಂತ ದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದು. ೧೮೮೫ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷ, ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೊರಾಟದಲ್ಲಿ ಮುಂಚೂಣಿಯಲ್ಲಿದ್ದು ಹಾಗು ಸ್ವಾತಂತ್ರ್ಯದ ನಂತರ ಭಾರತದ ಆಡಳಿತವನ್ನು ಅತಿ ಹೆಚ್ಚು ಕಾಲ ವಹಿಸಿದೆ. ೧೪ ನೆಯ ಲೋಕ ಸಭೆಯಲ್ಲಿ (೨೦೦೪-೨೦೦೯) ೧೪೫ ಸ್ಥಾನಗಳನ್ನು ಹೊಂದಿದ್ದು ಸದ್ಯಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಪಕ್ಷ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಸರ್ಪಗಂಧ (Serpent wood)ಒಂದು ಔಷದೀಯ ಸಸ್ಯ.ಇದು ಒಂದು ಸಣ್ಣ ಸಸ್ಯ.ಉಜ್ವಲ ಹಸಿರಿನ ಹೊಳಪಿನ ಎಲೆಗಳು.ಕೆಂಪು ಪುಷ್ಪ ಪತ್ರದ ಬಿಳಿಛಾಯೆಯ ಹೂಗಳು.ಕರ್ನಾಟಕದಲ್ಲಿ ತೇವ ಪರ್ಣಪಾತಿ ಹಾಗೂ ಮಿಶ್ರಪರ್ಣಪಾತಿ ಅರಣ್ಯಭಾಗದಲ್ಲಿ ಕೆಳಭಾಗದಲ್ಲಿ ಬೆಳೆಯುವುದು.ಇದುಚೀನಾದೇಶದಲ್ಲಿ ಕೂಡಾ ಔಷದೀಯ ಸಸ್ಯವಾಗಿ ಬಳಕೆಯಲ್ಲಿದೆ.ಹಿಮಾಲಯ ಶ್ರೇಣಿ,ನೇಪಾಳ,ಶ್ರೀಲಂಕಾ,ಮ್ಯಾನ್ಮಾರ್ ಗಳಲ್ಲಿಯೂ ಕಂಡುಬರುತ್ತದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಮಾನವನ ಕಣ್ಣು ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಪ್ರಜ್ಞಾತ್ಮಕ ಜ್ಞಾನೇಂದ್ರಿಯವಾಗಿರುವ ಕಣ್ಣು, ದೃಷ್ಟಿಗೆ ಅವಕಾಶ ನೀಡುತ್ತದೆ. ಅಕ್ಷಿಪಟದಲ್ಲಿರುವ ರಾಡ್(ಕಣ್ಣಿನ ಪಾಪೆಯ ದಂಡ) ಮತ್ತು ಕೋನ್ (ಅಕ್ಷಿಪಟದಲ್ಲಿರುವ ಶಂಕುವಿನಾಕಾರದ ರಚನೆ) ಕೋಶಗಳು, ವಿವಿಧ ಬಣ್ಣಗಳು ಮತ್ತು ಅವುಗಳ ಗಾಢತೆಯನ್ನು ಗ್ರಹಿಸುವುದು ಸೇರಿದಂತೆ ಜಾಗೃತ ಬೆಳಕಿನ ಗ್ರಹಿಕೆ ಮತ್ತು ದೃಷ್ಟಿಗೆ ಅವಕಾಶ ಕಲ್ಪಿಸುತ್ತದೆ.
ಅರ್ಥಶಾಸ್ತ್ರವು ಸರಕುಗಳ ಮತ್ತು ಸೇವೆಗಳ ಉತ್ಪಾದನೆ, ಹಂಚುವಿಕೆ ಮತ್ತು ಬಳಕೆಗಳನ್ನು ಅಧ್ಯಯನ ಮಾಡುವ ಒಂದು ಸಮಾಜ ವಿಜ್ಞಾನ. ಪ್ರಚಲಿತ ಆರ್ಥಿಕ ವಿನ್ಯಾಸಗಳು, ಭೌತಿಕ ವಿಜ್ಞಾನಗಳಿಗೆ ಹೆಚ್ಚಿನ ಸಮಾನ ಧರ್ಮವುಳ್ಳ ಒಂದು ಪ್ರಾಯೋಗಿಕ ಹಾದಿ ಬಳಸುವ ಒಂದು ಅಪೇಕ್ಷೆಗೆ ಬದ್ಧವಾಗಿ, ೧೯ನೇ ಶತಮಾನದಲ್ಲಿ ತಡವಾಗಿ ರಾಜಕೀಯ ಆರ್ಥಿಕ ವ್ಯವಸ್ಥೆಯ ವಿಶಾಲವಾದ ವ್ಯಾಪ್ತಿಯಿಂದ ಹೊರಹೊಮ್ಮಿದವು. ಆಧುನಿಕ ಅರ್ಥಶಾಸ್ತ್ರದ ಬಹಳಷ್ಟನ್ನು ನಿರೂಪಿಸುವ ಒಂದು ವ್ಯಾಖ್ಯಾನ ಲಾಯನಲ್ ರಾಬಿನ್ಸ್ರ ಒಂದು ೧೯೩೨ರ ಪ್ರಬಂಧದಲ್ಲಿದೆ: "ಮಾನವೀಯ ವರ್ತನೆಯನ್ನು ಪರ್ಯಾಯ ಉಪಯುಕ್ತತೆಗಳಿರುವ ಮಿತಿಗಳು ಮತ್ತು ದುರ್ಲಭವಾದ ಸಾಧನಗಳ ನಡುವಣ ಒಂದು ಸಂಬಂಧವಾಗಿ ಅಧ್ಯಯನಮಾಡುವ ವಿಜ್ಞಾನ." ವಿರಳತೆಯು ಲಭ್ಯವಾದ ಸಂಪನ್ಮೂಲಗಳು ಎಲ್ಲ ಬೇಕುಗಳನ್ನು ಮತ್ತು ಆವಶ್ಯಕತೆಗಳನ್ನು ನೆರವೇರಿಸಲು ಸಾಕಾಗುವುದಿಲ್ಲ ಎಂದು ಸೂಚಿಸುತ್ತದೆ.