The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ದಕ್ಷಿಣ ಕನ್ನಡ ಮಂಗಳೂರು ಮತ್ತು ಕೇರಳದ ಕ್ವಿಲಾನ್ ಬೀದಿಗಳಲ್ಲಿ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ಗೇರುಬೀಜದ ಕಾರ್ಖಾನೆಗಳಿಗೆ ಹೋಗುವ ಮತ್ತು ಬರುವ ಅಸಂಖ್ಯ ಮಹಿಳೆಯರನ್ನು ಕಾಣಬಹುದು. ಅವರ ಚತುರ ಹಸ್ತಗಳು ಗೇರುಬೀಜದ ಸಿಪ್ಪೆಗಳನ್ನು ಸುಲಿದು,ಬೀಜಗಳನ್ನು ವಿಂಗಡಿಸುವುವು.ಹೀಗೆ ಸಂಸ್ಕರಿಸಲಾದ ಬೀಜಗಳಲ್ಲಿ ಹೆಚ್ಚಿನಂಶವನ್ನು ರಫ಼್ತು ಮಾಡಲಾಗುತ್ತದೆ. ಕಚ್ಚಾ ಗೇರುಬೀಜವನ್ನು ಹುರಿದು, ಹೊಟ್ಟು ತೆಗೆದು ಸಿಪ್ಪೆ ಸುಲಿದುಹಾಕಿ ವರ್ಗೀಕರಿಸಲಾಗುವುದು.೨೪ ವರ್ಗಗಳ ಬೀಜಗಳಿವೆ.ಸಂಸ್ಕರಿಸಿದ ಬೀಜಗಳನ್ನು ಪ್ಯಾಕ್ ಮಾಡಿ ತಲಾ ೨೫ ಪೌಂಡ್ ಗಳ ಟಿನಗಳಲ್ಲಿ ತುಂಬಿ ರಫ಼್ತಿಗೆ ಒದಗಿಸಲಾಗುವುದು.ಪ್ಯಾಕಿಂಗ್ ಅಲ್ಲಿ ಅನುಸರಿಸಲಾಗುತ್ತಿರುವ "ವಿಟಾಪ್ಯಾಕ್"ವಿಧಾನದಿಂದ ಬೀಜಗಳನ್ನು ದೀರ್ಘ ಕಾಲದವರೆಗೆ ಸಂಗ್ರಹಿಸಬಹುದು.
ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
ಜೈವಿಕ ವಿಂಗಡಣೆ ಅಥವಾ ಜೀವಶಾಸ್ತ್ರದಲ್ಲಿ ವೈಜ್ಞಾನಿಕ ವಿಂಗಡಣೆಯು ಜಾತಿ ಮತ್ತು ಪ್ರಜಾತಿಯಂತಹ ಜೈವಿಕ ವರ್ಗದ ಅನುಸಾರವಾಗಿ ಸಾವಯವಗಳನ್ನು ಗುಂಪುಕೂಡಿಸಲು ಮತ್ತು ವರ್ಗೀಕರಿಸಲು ಜೀವವಿಜ್ಞಾನಿಗಳಿಂದ ಬಳಸಲ್ಪಡುವ ಒಂದು ವಿಧಾನ. ಜೈವಿಕ ವಿಂಗಡನೆಯು ವೈಜ್ಞಾನಿಕ ವರ್ಗೀಕರಣದ ಒಂದು ಪ್ರಕಾರ, ಆದರೆ ಇದಕ್ಕೆ ಮತ್ತು ವೈಜ್ಞಾನಿಕ ಆಧಾರವಿಲ್ಲದ ಪ್ರಚಲಿತ ವರ್ಗೀಕರಣಕ್ಕೆ (ಫೋಕ್ ಟ್ಯಾಕ್ಸಾನಮಿ) ವ್ಯತ್ಯಾಸವಿದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿತವಾಗಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಈ ಬಳ್ಳಿಯು ಬೀಳು ಭೂಮಿಯಲ್ಲಿ ಮತ್ತು ಹಾದಿಬದಿಯಲ್ಲಿ ಬೆಳೆಯುತ್ತದೆ.ದುಂಡನೆಯ ಬಳ್ಳಿಕಾಂಡವು ಬೇಲಿಗಿಡಗಳ ಮೇಲೆ ಇಲ್ಲವೆ ನೆಲದ ಮೇಲೆ ಹಬ್ಬಿಬೆಳೆಯುತ್ತದೆ.ಸರಳವಾದ ಉದ್ದ-ಅಂಡಾಕಾರದ ಮತ್ತು ಸ್ವಲ್ಪ ದಪ್ಪನೆಯ ಎಲೆಗಳು ಕಾಂಡದ ಮೇಲೆ ಅಭಿಮುಖವಾಗಿ ಜೋಡಣೆಯಾಗಿರುತ್ತವೆ.ಎಲೆಯ ಮೇಲ್ಭಾಗ ಹೊಳಪಿನಿಂದ ಕೂಡಿರುತ್ತದೆ ಮತ್ತು ಕೆಳಭಾಗದಲ್ಲಿ ಸೂಕ್ಷ್ಮಮೃದು ರೋಮಗಳಿರುತ್ತವೆ.ಎಲೆಯ ಕಂಕುಳದಲ್ಲಿ ಛತ್ರಿಯಾಕಾರದ ಪುಷ್ಪಮಂಜರಿಯಲ್ಲಿ ಎಕ್ಕದ ಹೂವನ್ನು ಹೋಲುವ ಹಳದಿ ಬಣ್ಣದ ಹೂಗಳಿರುತ್ತವೆ.ಒಂದು ಹೂತೊಟ್ಟಿನ ಮೇಲೆ ಎರಡು ಕಾಯಿಗಳು ಅಭಿಮುಖವಾಗಿ ಜೋಡಣೆಯಾಗಿರುತ್ತವೆ.
ಭಾರತದ ತವರಿನ ಪುಂಡಿ,ರಷ್ಯಾ,ದಕ್ಷಿಣ ಆಫ್ರಿಕ,ಮಧ್ಯ ಮತ್ತು ಉತ್ತರ ಅಮೇರಿಕ,ಜಾವ,ಫಿಲಿಪೀನ್ಸ್,ಕೊರಿಯಾ,ಚೀನಾ ಮತ್ತು ಫಾರ್ಮೋಸಾಗಳಲ್ಲಿ ಸಾಗುವಳಿಯಲ್ಲಿದೆ .ಭಾರತದಲ್ಲಿ ಕರ್ನಾಟಕ,ಆಂಧ್ರ,ಮಹಾರಾಷ್ಟ್ರ,ಮಧ್ಯಪ್ರದೇಶ ಮತ್ತು ಬಿಹಾರಗಳಿಂದ ಹಿಡಿದು ಹಿಮಾಲಯದ ೩೦೦೦ ಅಡಿ ಎತ್ತರದವರೆಗೂ ವ್ಯಾಪಿಸಿದೆ.ಕರ್ನಾಟಕದ ಬೆಳಗಾಂ,ಬಿಜಾಪುರ,ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಗುವಳಿಯಲ್ಲಿದೆ.ಗೋಗು,ಪಿಂಡಿಸೊಪ್ಪು,ಪುಂಡಿ,ಪುಂತ್ರಿಕೆ ಇತರ ಹೆಸರುಗಳು.೧೦೦ ಗ್ರಾಂ.ಸೊಪ್ಪಿನ ಭಾಗದಲ್ಲಿ ಈ ಪೋಷಕಾಂಶಗಳಿವೆ:
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.