The most-visited ಕನ್ನಡ Wikipedia articles, updated daily. Learn more...
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
'ನಮ್ ರೇಡಿಯೋ', ಇದು ಕನ್ನಡದ ಮೊದಲ ಅಂತರ್ಜಾಲ ರೇಡಿಯೋ. ಇದರಲ್ಲಿ ಕನ್ನಡದ ಸಿನೇಮಾ ಹಾಡುಗಳು,ಭಕ್ತಿಗೀತೆ,ಭಾವಗೀತೆ, ರಂಗಗೀತೆ,ಜನಪದ ಗೀತೆ,ಮಾಹಿತಿಗಳು,ಸಂಸ್ಕೃತಿ ಸಂಬಂಧಿಸಿದ ವಿಷಯಗಳು,ನಾಟಕಗಳು,ಸಂವಾದಗಳು,ಸಂದರ್ಶನ ಹೀಗೆ ಮುಂತಾದ ಕಾರ್ಯಕ್ರಮಗಳು ಪ್ರಸಾರವಾಗುತ್ತದೆ. ಫೆಬ್ರವರಿ ೨೯,೨೦೧೬ ರಂದು ಅಧಿಕೃತವಾಗಿ ಚಾಲನೆಗೊಂಡ 'ನಮ್ ರೇಡಿಯೋ' ಅದಕ್ಕೂ ಮೊದಲು ಸುಮಾರು ಎರಡು ತಿಂಗಳುಗಳ ಕಾಲ ಪರೀಕ್ಷಾರ್ಥವಾಗಿ,ಪ್ರಾಯೋಗಿಕವಾಗಿ ಪ್ರಸಾರಗೊಂಡಿತ್ತು.ನಮ್ ರೇಡಿಯೋ ವನ್ನು www.nammradio.com ಜಾಲತಾಣದಲ್ಲಿ ಕೇಳಬಹುದಾಗಿದೆ.ಹಾಗು ಸದ್ಯದಲ್ಲೇ ಆಪ್ ಕೂಡ ಹೊರಬರಲಿದೆ.
ಮೊಬೈಲ್ ಫೋನ್ (ಚರ ದೂರವಾಣಿ) (ಇದನ್ನು ಸೆಲ್ಫೋನ್ ಅಥವಾ ಹ್ಯಾಂಡ್ಫೋನ್ ಎಂತಲೂ ಕರೆಯಲಾಗಿದೆ)ಎಂಬುದು ಸಂವಹನಕ್ಕೆ ಬಳಸಲಾಗುವ ಒಂದು ವಿದ್ಯುನ್ಮಾನ ಉಪಕರಣ ಸಾಧನ. ಸೆಲ್ ಸೈಟ್ಸ್ ಎನ್ನಲಾದ 'ವಿಶಿಷ್ಟ ಬೇಸ್ ಸ್ಟೇಷನ್'ಗಳ 'ಸೆಲ್ಯುಲರ್ ಜಾಲ'ದ ಮೂಲಕ ಮೊಬೈಲ್ ದೂರಸಂವಹನ(ಸೆಲ್ ಸೈಟ್ಸ ಎಂದೂ ಕರೆಯಲಾಗುತ್ತದೆ) ( ಮೊಬೈಲ್ ಫೋನ್ ವ್ಯವಸ್ಥೆ, [[]]ಪಠ್ಯ ಸಂದೇಶ,ಮಾಹಿತಿ ಅಥವಾ ದತ್ತಾಂಶ ರವಾನೆ) ಮಾಡಲು ಈ ದೂರವಾಣಿಯನ್ನು ಬಳಸಲಾಗುತ್ತದೆ. ಮೊಬೈಲ್ಗಳು ನಿಸ್ತಂತು (ಕಾರ್ಡ್ಲೆಸ್) ದೂರವಾಣಿಗಳಿಗಿಂತ ಭಿನ್ನವಾಗಿವೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಸಿಗುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಅಂತಾರಾಷ್ಟ್ರೀಯ ಪುನಾರಚನೆ ಮತ್ತು ಅಭಿವೃದ್ಧಿ ಬ್ಯಾಂಕು (ಐ.ಬಿ.ಆರ್.ಡಿ)
ಅಂತಾರಾಷ್ಟ್ರೀಯ ಪುನಾರಚನೆ ಮತ್ತು ಅಭಿವೃದ್ಧಿ ಬ್ಯಾಂಕು ವಿಶ್ವಬ್ಯಾಂಕು ಎಂದು ಪ್ರಖ್ಯಾತಿ ಪಡೆದಿರುವ ಈ ಸಂಸ್ಥೆ ಅಂತಾರಾಷ್ಟ್ರೀಯ ದ್ರವ್ಯನಿಧಿಯೊಂದಿಗೆ ವಿಶ್ವಸಂಸ್ಥೆಯ ಒಂದು ಅಂಗವಾಗಿ ಸ್ಥಾಪಿತವಾಯಿತು (ಐ.ಬಿ.ಆರ್.ಡಿ). ಇದು ಅಂತಾರಾಷ್ಟ್ರೀಯಮಟ್ಟದ ಬಂಡವಾಳದ ಸಮಸ್ಯೆಗಳನ್ನು ನಿರ್ವಹಿಸುತ್ತದೆ. 1946ರ ಜೂನ್ ತಿಂಗಳಿನಲ್ಲಿ ತನ್ನ ವ್ಯವಹಾರವನ್ನು ಪ್ರಾರಂಭಿಸಿ ಅರುವತ್ತಕ್ಕೂ ಹೆಚ್ಚು ವರ್ಷಗಳಿಂದ ಕೆಲಸ ಮಾಡುತ್ತಿದ್ದು 185 ರಾಷ್ಟ್ರಗಳ ಸದಸ್ಯತ್ವವನ್ನು ಹೊಂದಿದೆ.