The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜೈವಿಕ ವಿಂಗಡಣೆ ಅಥವಾ ಜೀವಶಾಸ್ತ್ರದಲ್ಲಿ ವೈಜ್ಞಾನಿಕ ವಿಂಗಡಣೆಯು ಜಾತಿ ಮತ್ತು ಪ್ರಜಾತಿಯಂತಹ ಜೈವಿಕ ವರ್ಗದ ಅನುಸಾರವಾಗಿ ಸಾವಯವಗಳನ್ನು ಗುಂಪುಕೂಡಿಸಲು ಮತ್ತು ವರ್ಗೀಕರಿಸಲು ಜೀವವಿಜ್ಞಾನಿಗಳಿಂದ ಬಳಸಲ್ಪಡುವ ಒಂದು ವಿಧಾನ. ಜೈವಿಕ ವಿಂಗಡನೆಯು ವೈಜ್ಞಾನಿಕ ವರ್ಗೀಕರಣದ ಒಂದು ಪ್ರಕಾರ, ಆದರೆ ಇದಕ್ಕೆ ಮತ್ತು ವೈಜ್ಞಾನಿಕ ಆಧಾರವಿಲ್ಲದ ಪ್ರಚಲಿತ ವರ್ಗೀಕರಣಕ್ಕೆ (ಫೋಕ್ ಟ್ಯಾಕ್ಸಾನಮಿ) ವ್ಯತ್ಯಾಸವಿದೆ.
ವಿಜ್ಞಾನದ ಇತಿಹಾಸ ಎಂದರೆ ನೈಸರ್ಗಿಕ ವಿಶ್ವವನ್ನು ಮನುಷ್ಯರು ಅರ್ಥಮಾಡಿಕೊಳ್ಳುವಿಕೆಯ ಐತಿಹಾಸಿಕ ಬೆಳವಣಿಗೆಯ ಅಧ್ಯಯನ ಎನ್ನಬಹುದು. 20ನೇ ಶತಮಾನದ ಕೊನೆಯವರೆಗೆ ವಿಜ್ಞಾನದ ಇತಿಹಾಸ, ವಿಶೇಷವಾಗಿ ಭೌತಿಕ ಮತ್ತು ಜೀವಶಾಸ್ತ್ರೀಯ ವಿಜ್ಞಾನಗಳು ತಪ್ಪು ಸಿದ್ಧಾಂತಗಳ ಮೇಲೆ ನೈಜ ಸಿದ್ಧಾಂತಗಳ ವಿಜಯವನ್ನು ಸಾರುವ ನಿರೂಪಣೆಗಳ ಹಾಗೆ ಕಾಣಲಾಗುತ್ತಿತ್ತು. ವಿಜ್ಞಾನವು ನಾಗರಿಕತೆಯ ಪ್ರಗತಿಯ ಒಂದು ಬಹುಮುಖ್ಯ ಆಯಾಮವೆಂದೇ ಚಿತ್ರಿತವಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಮಾನವ ಜಾತಿಯ ಉತ್ಪತ್ತಿಯನ್ನು ವಿವರಿಸುವ ಜೀವ ವಿಕಾಸದ ಭಾಗವೇ ಮಾನವನ ವಿಕಾಸ. ಹಲವಾರು ಶತಮಾನಗಳಿಂದ ಹಲವರು ಮಾನವ ಮತ್ತಿತರ ವಾನರ ಜಾತಿಗಳಲ್ಲಿನ ಹೋಲಿಕೆಗಳನ್ನು ಗಮನಿಸಿದ್ದೂ ಹಾಗು ಜೀವ ವಿಕಾಸದ ಬಗ್ಗೆ ಯೋಚಿಸಿದ್ದಾದರೂ ಈ ವಾದವನ್ನು ನಿಶ್ಚಿತವಾಗಿ ಹಾಗು ವಿಸ್ತಾರವಾಗಿ ೧೮೫೯ರಲ್ಲಿ ಬಣ್ಣಿಸಿದವರು ಚಾರ್ಲ್ಸ್ ಡಾರ್ವಿನ್ರವರು. ಇದನಂತರ ಮಾನವನ ಪೂರ್ವಜರ ಪರಿಶೋಧನೆಗೆ ಹೆಚ್ಚು ಒತ್ತು ಸಿಕ್ಕಿತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ತಂತ್ರಾಂಶ ಪರೀಕ್ಷೆ ಎಂಬುದು ಒಂದು ಕ್ರಮಬದ್ಧವಾದ ಪರೀಕ್ಷೆಯಾಗಿದ್ದು, ಪರೀಕ್ಷೆಗೆ ಒಳಪಟ್ಟಿರುವ ಉತ್ಪನ್ನ ಅಥವಾ ಸೇವೆಯ ಗುಣಮಟ್ಟದ ಕುರಿತಾದ ಮಾಹಿತಿಯನ್ನು ಮಧ್ಯಸ್ಥಗಾರರಿಗೆ ಒದಗಿಸಲು ಇದನ್ನು ನಡೆಸಲಾಗುತ್ತದೆ. ವ್ಯವಹಾರದ ಅಸ್ತಿತ್ವವು ತಂತ್ರಾಂಶದ ಅನುಷ್ಠಾನದ ಅಪಾಯಗಳನ್ನು ಗ್ರಹಿಸುವುದಕ್ಕೆ ಮತ್ತು ಅರ್ಥಮಾಡಿಕೊಳ್ಳುವುದಕ್ಕೆ ಅನುವು ಮಾಡಿಕೊಡುವ ದೃಷ್ಟಿಯಿಂದ, ತಂತ್ರಾಂಶದ ಒಂದು ವಸ್ತುನಿಷ್ಠ, ಸ್ವತಂತ್ರ ನೋಟವನ್ನೂ ಸಹ ತಂತ್ರಾಂಶ ಪರೀಕ್ಷೆಯು ಒದಗಿಸುತ್ತದೆ. ತಂತ್ರಾಂಶದ ದೋಷಗಳನ್ನು ಕಂಡುಹಿಡಿಯುವ ಆಶಯದೊಂದಿಗಿನ ಒಂದು ಕಾರ್ಯಸೂಚಿ ಅಥವಾ ಅನ್ವಯಿಕೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆಯು ಸದರಿ ಪರೀಕ್ಷಾ ಕೌಶಲಗಳಲ್ಲಿ ಸೇರಿಕೊಂಡಿದೆಯಾದರೂ, ಕೌಶಲಗಳು ಅಷ್ಟಕ್ಕೇ ಸೀಮಿತಗೊಂಡಿಲ್ಲ.
ಕರ್ನಾಟಕ ಸರ್ಕಾರದ ಮುಂಗಡ ಪತ್ರ-2015-2016
ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಖ್ಯಮಂತ್ರಿಯಾದ ಹಣಕಾಸು ಸಚಿವ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ಬಜೆಟ್ 2015-16ರಲ್ಲಿ ಈ ಅವಧಿಯ ಮೂರನೇ ಹಾಗೂ ಒಟ್ಟಾರೆಯಾಗಿ ಹತ್ತನೆ ಬಜೆಟ್ಅನ್ನು 2015 ಮಾರ್ಚ್ 13ರಂದು ಮಂಡಿಸಿದ್ದಾರೆ. ಕರ್ನಾಟಕದ ಬಜೆಟ್ 2015-16 ರ ಬಜೆಟ್ ಗಾತ್ರ ₹ 1,42,534 ಕೋಟಿ ರೂಪಾಯಿ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.