The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹೊಸತು : 'ನೆಮ್ಮದಿಯ ನಾಳೆ ನಮ್ಮದು' ಎಂಬ ಆಶಯದೊಂದಿಗೆ ನವಕರ್ನಾಟಕ ಪ್ರಕಾಶನ ಸಂಸ್ಥೆ ಪ್ರಕಟಿಸುತ್ತಿರುವ ತಿಂಗಳ ಪತ್ರಿಕೆ. ನವಕರ್ನಾಟಕ ಪ್ರಕಾಶನದಿಂದ ಪ್ರಕಟವಾಗುತ್ತಿರುವ 'ಹೊಸತು' ತಿಂಗಳ ಪತ್ರಿಕೆ ಅದರ ಮುಖ ಪುಟದಲ್ಲಿ 'ನೆಮ್ಮದಿಯ ನಾಳೆ ನಮ್ಮದು' ಎಂಬ ಘೋಷವಾಕ್ಯದಿಂದ ಪ್ರಕಟವಾಗುತ್ತಿದೆ. ಕಳೆದ ೧೬ ವರ್ಷಗಳಿಂದ ಸಾಮಾಜಿಕ, ರಾಜಕೀಯ, ಆರ್ಥಿಕ, ಕೃಷಿ, ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ತತ್ವಜ್ಞಾನಕ್ಕೆ ಸಂಬಂಧ ಪಟ್ಟ ಹಲವಾರು ವಿಷಯಗಳ ಕುರಿತು ಉನ್ನತ ಮಟ್ಟದ ಲೇಖನಗಳನ್ನು ಪ್ರಕಟಿಸುತ್ತಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.