The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:पञ्चतन्त्र(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಜೈವಿಕ ವಿಂಗಡಣೆ ಅಥವಾ ಜೀವಶಾಸ್ತ್ರದಲ್ಲಿ ವೈಜ್ಞಾನಿಕ ವಿಂಗಡಣೆಯು ಜಾತಿ ಮತ್ತು ಪ್ರಜಾತಿಯಂತಹ ಜೈವಿಕ ವರ್ಗದ ಅನುಸಾರವಾಗಿ ಸಾವಯವಗಳನ್ನು ಗುಂಪುಕೂಡಿಸಲು ಮತ್ತು ವರ್ಗೀಕರಿಸಲು ಜೀವವಿಜ್ಞಾನಿಗಳಿಂದ ಬಳಸಲ್ಪಡುವ ಒಂದು ವಿಧಾನ. ಜೈವಿಕ ವಿಂಗಡನೆಯು ವೈಜ್ಞಾನಿಕ ವರ್ಗೀಕರಣದ ಒಂದು ಪ್ರಕಾರ, ಆದರೆ ಇದಕ್ಕೆ ಮತ್ತು ವೈಜ್ಞಾನಿಕ ಆಧಾರವಿಲ್ಲದ ಪ್ರಚಲಿತ ವರ್ಗೀಕರಣಕ್ಕೆ (ಫೋಕ್ ಟ್ಯಾಕ್ಸಾನಮಿ) ವ್ಯತ್ಯಾಸವಿದೆ.
ಭಾರತ ದೇಶದ ಪಂಚ ವಾರ್ಷಿಕ ಯೋಜನೆಗಳು
ಭಾರತ ಸರ್ಕಾರ ಇಲ್ಲಿಯವರೆಗೆ ೧೧ ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.
ಮೈಕೆಲ್ಯಾಂಜೆಲೊ ವಿ ಲೊಡೊವಿಕೊ ಬುವೊನರೊಟಿ ಸಿಮೊನಿ (೬ ಮಾರ್ಚ್ ೧೪೭೫ – ೧೮ ಫೆಬ್ರವರಿ ೧೫೬೪), ಮೈಕೆಲ್ಯಾಂಜೆಲೊ ಎಂದೇ ಪ್ರಸಿದ್ಧನಾಗಿದ್ದ ಇಟಲಿಯ ನವೋದಯದ ಅವಧಿಯ ಓರ್ವ ವರ್ಣಚಿತ್ರ ಕಲಾವಿದ, ಶಿಲ್ಪಿ, ವಾಸ್ತುಶಿಲ್ಪಿ, ಕವಿ, ಮತ್ತು ಎಂಜಿನಿಯರ್. ಕಲೆಗಳಿಂದ ಆಚೆಗೆ ಆತ ಮಾಡಿದ ಕೆಲವೊಂದು ಪ್ರವೇಶಗಳ ಹೊರತಾಗಿಯೂ, ಆತ ಆಯ್ದುಕೊಂಡ ಕ್ಷೇತ್ರಗಳಲ್ಲಿ ಕಂಡುಬಂದ ಅವನ ಬಹುಮುಖ ಪ್ರತಿಭೆಯು ಅತ್ಯಂತ ಉತ್ಕೃಷ್ಟ ಮಟ್ಟದಲ್ಲಿತ್ತು. ಇದರಿಂದಾಗಿ ಮೂಲಕಲ್ಪನೆಯ ನವೋದಯದ ಮನುಷ್ಯನೆಂಬ ಶೀರ್ಷಿಕೆಯ ನೀಡುವಿಕೆಗೆ ಸಂಬಂಧಿಸಿದಂತೆ ಅವನ ಪ್ರತಿಸ್ಪರ್ಧಿ ಹಾಗೂ ಇಟಲಿಯ ಸಹವರ್ತಿಯಾದ ಲಿಯೋನಾರ್ಡೊ ಡ ವಿನ್ಸಿಯೊಂದಿಗೆ ಅವನನ್ನು ಅನೇಕಬಾರಿ ಓರ್ವ ಸ್ಪರ್ಧಿಯಂತೆ ಅಥವಾ ಪೈಪೋಟಿಗಾರನಂತೆ ಪರಿಗಣಿಸಲಾಗುತ್ತದೆ.
ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಥ ಪರಂಪರೆಯ 72ನೇ ಪೀಠಾಧ್ಯಕ್ಷರಾದ ಅನ್ನ ದಾಸೋಹಿ, ಶಿಕ್ಷಣ ಸಂತ ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು 20 ಜುಲೈ 1969ರಲ್ಲಿ ಜನಿಸಿದರು. ಪೂರ್ವಾಶ್ರಮದಲ್ಲಿ ನಾಗರಾಜು ಎಂಬ ಹೆಸರಿನಿಂದ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿದ್ದ ಇವರನ್ನು ಅಧ್ಯಾತ್ಮದ ಸೆಳೆತ ಶ್ರೀಮಠಕ್ಕೆ ಕರೆದುಕೊಂಡು ಬಂದಿತು. 1994-95ರಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೀಠಾಧ್ಯಕ್ಷರಾಗುವ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಲಿಂಗಮ್ಮ ಎಂದು ಕರೆಯಲ್ಪಡುತ್ತಿದ್ದ ಮಹಾ ಮಹಿಮೆ ದಾನಮ್ಮ ದೇವಿ ಹುಟ್ಟಿದ್ದು ಈಗಿನ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಉಮರಾಣಿ ಎಂಬ ಸಣ್ಣ ಗ್ರಾಮದಲ್ಲಿ. ಈಗಿನ ಕರ್ನಾಟಕದ ವಿಜಯಪುರದಿಂದ ಉತ್ತರಕ್ಕೆ ೨೦ ಮೈಲಿ ದೂರವಿರುವ ಈ ಸ್ಥಳ ಹನ್ನೆರಡನೆ ಶತಮಾನದ ಆಸು ಪಾಸಿಗೆ ಕನ್ನಡ ಭಾಷಿಗರಿಂದ ಕೂಡಿತ್ತು. ಇಂತಹ ಕನ್ನಡ ಭಾಷಿಗ ರೈತಾಪಿ ವರ್ಗಕ್ಕೆ ಸೇರಿದ ಅನಂತರಾಯ ಮತ್ತು ಶಿರಸಮ್ಮ ದಂಪತಿಗಳಿಗೆ ಜನಿಸಿದ ಮಗಳೇ ಲಿಂಗಮ್ಮ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.