The most-visited ಕನ್ನಡ Wikipedia articles, updated daily. Learn more...
ಬ್ಲಾಗ್ (ವೆಬ್ಲಾಗ್ ಎಂಬುದರ ಹ್ರಸ್ವ ರೂಪ)ಅಂತರ್ಜಾಲದ ಒಂದು ವಿಧವಾಗಿದ್ದು, ಸಾಮಾನ್ಯವಾಗಿ ಪ್ರತ್ಯೇಕ ಖಾಸಗಿ ವ್ಯಕ್ತಿಗಳಿಂದ ನಿರ್ವಹಿಸಲ್ಪಡುವ ತಾಣವಾಗಿರುತ್ತದೆ. ಇದರಲ್ಲಿ ಪ್ರತಿಕ್ರಿಯಾತ್ಮಕ ಲೇಖನಗಳು, ಕಾರ್ಯಕ್ರಮಗಳ ವಿವರಣೆ, ಗ್ರಾಫಿಕ್ಸ್, ವಿಡಿಯೋ ಮೊದಲಾದವುಗಳನ್ನು ನಿರಂತರವಾಗಿ ದಾಖಲಿಸಲಾಗುತ್ತದೆ. ಹೀಗೆ ದಾಖಲಿಸಲಾಗುವ ಲೇಖನಗಳು ಸಾಮಾನ್ಯವಾಗಿ ಹಿಮ್ಮುಖ ಕ್ರಮಾಂಕದಲ್ಲಿ ಪ್ರದರ್ಶನಗೊಳ್ಳುತ್ತವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಎಲ್ಲಾದರೂ ಇರು ಏಂತಾದರೂ ಇರು ಏಂದೆಂದಿಗೂ ನೀ ಕನ್ನಡವಾಗಿರೂ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಕನ್ನಡವೇ ಕನ್ನಡಿಗರ ಶಕ್ತಿ ಗರ್ವದಿಂದ ಘರ್ಜಿಸು ನಾ ಕನ್ನಡಿಗನೆಂದು. ಕನ್ನಡ ಚಿತ್ರರಂಗವು ಕರ್ನಾಟಕದಲ್ಲಿ ರಚಿಸಲಾಗುವ ಚಲನಚಿತ್ರಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ ರಂಗಭೂಮಿಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು ತುಳು ಹಾಗು ಕೊಂಕಣಿ ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. ೧೯೩೪ರಲ್ಲಿ ತೆರೆ ಕಂಡ "ಸತಿ ಸುಲೋಚನ" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.೧೯೫೪ರಲ್ಲಿ ಬಿಡುಗಡೆ ಹೊಂದಿದ "ಬೇಡರ ಕಣ್ಣಪ್ಪ" ಈ ಚಿತ್ರರಂಗದ ಪ್ರಮುಖ ನಟರಾದ ರಾಜಕುಮಾರ್ ಅವರ ಮೊದಲ ಚಿತ್ರ.
'ಶಬ್ದ ಮಾಲಿನ್ಯ (ಅಥವಾ ' ವಾತಾವರಣದಲ್ಲಿನ ಸದ್ದು)ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ (ವಾಕರಿಕೆ) ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು
ಈ ಲೇಖನದಲ್ಲಿ ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳ ಪಟ್ಟಿ ಮಾಡಲಾಗಿದೆ. ಭಾರತವು ೨೮ ರಾಜ್ಯ ಮತ್ತು ೭ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ರಾಜ್ಯಗಳು ತಮ್ಮ ಸ್ವಂತ ಸರ್ಕಾರಗಳನ್ನು ರಚಿಸಿಕೊಳ್ಳುತ್ತವೆ.