The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪೆಂಟಗನ್ ಅನ್ನುವುದು ವರ್ಜಿನಿಯದ ಅರ್ಲಿಂಗ್ಟನ್ ಪ್ರದೇಶದಲ್ಲಿದ್ದ, ಯುನೈಡೆಡ್ ಸ್ಟೇಟ್ಸ್ನ ರಕ್ಷಣೆ ವಿಭಾಗದ ಕೇಂದ್ರ ಕಾರ್ಯಸ್ಥಾನವಾಗಿದೆ. U.S. ಮಿಲಿಟರಿನ ಸಾಂಕೇತಿಕವಾಗಿದ್ದ, "ಪೆಂಟಗನ್ನ್ನು" ಬಹುತೇಕವಾಗಿ ಅದು ಒಂದು ಕಟ್ಟಡ ಅನ್ನುವುದಕ್ಕಿಂತಲು, ಅಸಹಜ ಲಕ್ಷಣವಾಗಿ ರಕ್ಷಣೆಯ ವಿಭಾಗವನ್ನು ಪ್ರಸ್ತಾಪಿಸಲು ಉಪಯೋಗಿಸಲಾಗುತ್ತದೆ. ಇದನ್ನು ಅಮೆರಿಕಾದ ವಾಸ್ತುಶಿಲ್ಪಿ ಜಾರ್ಜ್ ಬೆರ್ಗ್ಸ್ಟ್ರೋಮ್ (1876–1955) ವಿನ್ಯಾಸಿಸಿದರು, ಮತ್ತು ಫಿಲಡೆಲ್ಫಿಯ, ಪೆನ್ಸಿಲ್ವಾನಿಯ, ಸಾರ್ವತ್ರಿಕ ಗುತ್ತಿಗೆದಾರ ಜಾನ್ ಮೆಕ್ಶೈನ್ ಇವರಿಂದ ನಿರ್ಮಿಸಲಾಯಿತು, ಸೆಪ್ಟೆಂಬರ್ 11, 1941ರಂದು ನೆಲವನ್ನು ನಿರ್ಮಾಣಕ್ಕಾಗಿ ವಿಚ್ಛಿನ್ನ ಗೊಳಿಸಿದ ನಂತರ, ಜನವರಿ 15, 1943ರಂದು ಕಟ್ಟಡವನ್ನು ಲೋಕಹಿತಕ್ಕಾಗಿ ಸಮರ್ಪಿಸಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ದುರ್ಗೆ ಅಂದರೆ "ದುರ್ಗಮ", ದೇವಿಯ ಅತ್ಯಂತ ಪ್ರಸಿದ್ಧ ಅವತಾರ ಮತ್ತು ಹಿಂದೂ ದೇವತಾಸಂಗ್ರಹದಲ್ಲಿ ಶಕ್ತಿ ದೇವತೆಯ ಮುಖ್ಯ ರೂಪಗಳ ಪೈಕಿ ಒಬ್ಬಳು. ದುರ್ಗೆಯ ಪ್ರಾಚೀನ ರೂಪವು ಹಿಮಾಲಯ ಹಾಗು ವಿಂಧ್ಯದ ನಿವಾಸಿಗಳಿಂದ ಆರಾಧಿಸಲ್ಪಟ್ಟ ಒಬ್ಬ ಪರ್ವತ ದೇವಿ, ಅಲೆಮಾರಿ ಅಭೀರ ಕುರುಬನಿಂದ ಆರಾಧಿಸಲ್ಪಟ್ಟ ಒಬ್ಬ ದೇವಿ, ಒಬ್ಬ ಸ್ತ್ರೀಯಾಗಿ ಕಲ್ಪಿಸಲ್ಪಟ್ಟ ಸಸ್ಯ ಆತ್ಮ, ಮತ್ತು ಒಬ್ಬ ಯುದ್ಧ ದೇವತೆಯ ಸಮನ್ವಯದ ಪರಿಣಾಮ. ಅವಳ ಭಕ್ತರು ನಾಗರಿಕತೆಯಲ್ಲಿ ಮುಂದುವರೆದಂತೆ, ಪ್ರಾಚೀನ ಯುದ್ಧ ದೇವತೆಯು ಎಲ್ಲವನ್ನು ಧ್ವಂಸಮಾಡುವ ಕಾಳಿಯ ವ್ಯಕ್ತಿರೂಪವಾಗಿ, ಸಸ್ಯ ಆತ್ಮವು ಆದಿ ಶಕ್ತಿ ಮತ್ತು ಸಂಸಾರದಿಂದ ಮುಕ್ತಿಕೊಡುವ ಸಂರಕ್ಷಕಿಯಾಗಿ ರೂಪಾಂತರಗೊಂಡಳು ಮತ್ತು ಅವಳು ಕ್ರಮೇಣ ಬ್ರಾಹ್ಮಣಿಕ ಪುರಾಣ ಹಾಗು ತತ್ವಶಾಸ್ತ್ರದ ಪಂಕ್ತಿಯಲ್ಲಿ ತರಲಾಯಿತು.
ದಿ ಗ್ರೇಟ್ ವಾಲ್ ಆಫ್ ಚೀನಾ' (simplified Chinese: 长城; traditional Chinese: 長城; pinyin: Chángchéng; literally "long city/fortress") ಅಥವಾ (simplified Chinese: 万里长城; traditional Chinese: 萬里長城; pinyin: Wànlǐ Chángchéng; literally "The long wall of 10,000 Li (里)") ಎಂಬುದು ವಿವಿಧ ಪರಂಪರೆಯ ರಾಜವಂಶಗಳ ಅವಧಿಯಲ್ಲಿ ಕಂಡುಬಂದ ಚೀನಾದ ಸಾಮ್ರಾಜ್ಯದ ಉತ್ತರದ ಗಡಿಭಾಗಗಳನ್ನು ರಕ್ಷಿಸಲು 5ನೇ ಶತಮಾನ BC ಮತ್ತು 16ನೇ ಶತಮಾನದ ನಡುವೆ ನಿರ್ಮಿಸಿ, ಮರುನಿರ್ಮಿಸಿ, ಮತ್ತು ನಿರ್ವಹಣೆ ಮಾಡಲ್ಪಟ್ಟ, ಉತ್ತರದ ಚೀನಾದಲ್ಲಿನ ಕಲ್ಲು ಮತ್ತು ಸುಟ್ಟ ಜೇಡಿಮಣ್ಣಿನ ಕೋಟೆ-ನಿರ್ಮಾಣಗಳ ಒಂದು ಸರಣಿಯಯಾಗಿದೆ. 5tನೇ ಶತಮಾನದ BCಯಿಂದ ಮೊದಲ್ಗೊಂಡು, ಹಲವಾರು ಗೋಡೆಗಳು ಕಟ್ಟಲ್ಪಟ್ಟಿದ್ದು, ಅವು ಮಹಾನ್ ಗೋಡೆ ಎಂದು ಉಲ್ಲೇಖಿಸಲ್ಪಟ್ಟಿವೆ. ಕ್ವಿನ್ ಷಿ ಹುವಾಂಗ್ ಎಂಬ ಮೊದಲನೆಯ, ಚೀನಾದ ಚಕ್ರವರ್ತಿಯಿಂದ 220–206 BCಯ ನಡುವಿನ ಅವಧಿಯಲ್ಲಿ ನಿರ್ಮಿಸಲ್ಪಟ್ಟ ಗೋಡೆಯು ಅತ್ಯಂತ ಪ್ರಸಿದ್ಧವಾದವುಗಳಲ್ಲಿ ಒಂದಾಗಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಂಡು ಪ್ರಾಣಿಗಳಲ್ಲಿ ದೇಹದಿಂದ ಹೊರಚಾಚಿರುವ ಜನನೇಂದ್ರಿಯವನ್ನು ತುಣ್ಣಿ ಅಥವಾ ತುಣ್ಣೆ ಅಥವಾ ಶಿಶ್ನ ಎನ್ನುತ್ತಾರೆ. ಇದು ಮುಖ್ಯವಾಗಿ ಸಂಭೋಗ ಹಾಗೂ ಜೀವ ಪುನರುತ್ಪಾದನೆಯ ಅಂಗವಾಗಿ ಹೆಣ್ಣು ಪ್ರಾಣಿಯೊಳಗೆ ವೀರ್ಯವನ್ನು ಹಾಕಲು ಸಹಾಯಕಾರಿ, ಇದು ಮುಂದುವರೆದ ಪ್ರಾಣಿಗಳಲ್ಲಿ ಮೂತ್ರ ವಿಸರ್ಜನೆಗೂ ಉಪಯೋಗವಾಗುತ್ತದೆ. ಮಾನವನ ತುಣ್ಣಿಯು ಉದ್ರೇಕಗೊಂಡಾಗ ದೊಡ್ಡದಾಗಿಯೂ ಗಟ್ಟಿಯಗಿಯೂ ಮಾರ್ಪಡುತ್ತದೆ, ಆಗ ಸಾಮಾನ್ಯವಾಗಿ 4.2 - 7.5 ಇಂಚು ಉದ್ದವೂ ಹಾಗೂ 4.8 ಇಂಚು ಸುತ್ತಳತೆಯದಾಗಿರುತ್ತದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಶಿರ್ಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.