The most-visited ಕನ್ನಡ Wikipedia articles, updated daily. Learn more...
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ದಾಖಲೆಗಳ ವರ್ಗಾವಣೆಗೆ 1993ರಲ್ಲಿ ಅಡೋಬ್ ಸಿಸ್ಟಮ್ಸ್ ಅವರಿಂದ ಪೋರ್ಟೆಬಲ್ ಡಾಕ್ಯುಮೆಂಟ್ ಫಾರ್ಮ್ಯಾಟ್ (ಪಿಡಿಎಫ್ ) ಎಂಬ ಫೈಲ್ ಮಾದರಿ ನಿರ್ಮಾಣವಾಗಿದೆ. ಪ್ರತಿಯೊಂದು ಪಿಡಿಎಫ್ ಪೈಲ್ 2 ಆಯಾಮದ ಡಾಕ್ಯುಮೆಂಟ್ಗಳನ್ನು ನೋಡಲು ಬಳಸಲಾಗಿದ್ದು, ಅವು ಯಾವುದೇ ಅಪ್ಲಿಕೇಶನ್ ಸಾಫ್ಟ್ವೇರ್, ಹಾರ್ಡ್ವೇರ್ ಅಥವಾ ಆಪರೇಟಿಂಗ್ ಸಿಸ್ಟಮ್ ಆಗಿದ್ದರೂ ಕೂಡಾ ನೋಡಲು ಸಾಧ್ಯವಾಗುವಂತೆ ರೂಪಿಸಲಾಗಿದೆ. ಪ್ರತಿಯೊಂದು ಪಿಡಿಎಫ್ ಫೈಲ್, ನಿರ್ಧಿಷ್ಠಪಡಿಸಿದ 2ಡಿ ಡಾಕ್ಯುಮೆಂಟ್ ಪುಟ ವಿನ್ಯಾಸವನ್ನು ಹೊಂದಿದ್ದು ಅದು ಪಠ್ಯ, ಅಕ್ಷರ ವಿನ್ಯಾಸ, ಚಿತ್ರಗಳು ಮತ್ತು ದಾಖಲೆಯನ್ನು ರಚಿಸುವ 2ಡಿ ವೆಕ್ಟರ್ ಗ್ರಾಫಿಕ್ಸ್ ಡಾಕ್ಯುಮೆಂಟ್ನ ಸಂಪೂರ್ಣ ವಿವರಣೆಯನ್ನು ಒಳಗೊಂಡಿರುತ್ತದೆ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಶುಭ್ರವಾದ ರಾತ್ರಿಯಲ್ಲಿ ಆಕಾಶದ ಕಡೆ ಕಣ್ಣು ಹಾಯಿಸಿದರೆ ಅಸಂಖ್ಯಾತ ಸಣ್ಣ ಸಣ್ಣ್ಣ ಪುಟ್ಟ ಪುಟ್ಟ ಮಿನುಗುವ ಸಾವಿರಾರು ತಾರೆಗಳು ಅಂದರೆ ನಕ್ಷತ್ರಗಳು ಕಣ್ಣಿಗೆ ಬೀಳುತ್ತವೆ. ವೈಜ್ಞಾನಿಕ ಭಾಷೆಯಲ್ಲಿ ಹೇಳುವುದಾದರೆ ನಕ್ಷತ್ರವೆಂದರೆ ಅಂತರಿಕ್ಷದಲ್ಲಿ ನೆಲೆಸುವ ಸೂರ್ಯನಂತಹ ಅನಿಲದಿಂದ ಕೂಡಿದ ಸದೃಢ ಕಾಯಕ. ನಮಗೆ ದಿನ ನಿತ್ಯ ಬೆಳಕು,ಶಾಖ ನೀಡುವ ಸೂರ್ಯ ಕೂಡಾ ಒಂದು ಮಧ್ಯಮ ಗಾತ್ರದ ನಕ್ಷತ್ರ.
ಎಲ್ಲಾದರೂ ಇರು ಏಂತಾದರೂ ಇರು ಏಂದೆಂದಿಗೂ ನೀ ಕನ್ನಡವಾಗಿರೂ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಕನ್ನಡವೇ ಕನ್ನಡಿಗರ ಶಕ್ತಿ ಗರ್ವದಿಂದ ಘರ್ಜಿಸು ನಾ ಕನ್ನಡಿಗನೆಂದು. ಕನ್ನಡ ಚಿತ್ರರಂಗವು ಕರ್ನಾಟಕದಲ್ಲಿ ರಚಿಸಲಾಗುವ ಚಲನಚಿತ್ರಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ ರಂಗಭೂಮಿ ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು ತುಳು ಹಾಗು ಕೊಂಕಣಿ ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. ೧೯೩೪ರಲ್ಲಿ ತೆರೆ ಕಂಡ "ಸತಿ ಸುಲೋಚನ" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.೧೯೫೪ರಲ್ಲಿ ಬಿಡುಗಡೆ ಹೊಂದಿದ "ಬೇಡರ ಕಣ್ಣಪ್ಪ" ಈ ಚಿತ್ರರಂಗದ ಪ್ರಮುಖ ನಟರಾದ ರಾಜಕುಮಾರ್ ಅವರ ಮೊದಲ ಚಿತ್ರ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಸಾಮ್ರಾಟ್ ಅಶೋಕ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ(ಕ್ರಿ.ಪೂ ೩೦೪ - ಕ್ರಿ.ಪೂ ೨೩೨) . ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ಕಳಿಂಗ ಯುದ್ಧದ ಬಳಿಕ ಬೌದ್ಧ ಮತವನ್ನು ಪ್ರಚಾರಗೊಳಿಸುವುದರಲ್ಲಿ ತೊಡಗಿಕೊಂಡ ಸಾಮ್ರಾಟ್ ಅಶೋಕ, ವಿಶ್ವದೆಲ್ಲೆಡೆ ಬೌದ್ಧ ಮತ ಹರಡುವಲ್ಲಿ ಪ್ರಮುಖ ಪಾತ್ರವಹಿಸಿದವನು.'ಅಶೋಕ' ಶಬ್ಧಕ್ಕೆ - ಸಂಸ್ಕೃತದಲ್ಲಿ ಶೋಕವಿಲ್ಲದ ಎಂಬರ್ಥವಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಚೆರ್ನೊಬಿಲ್ ದುರಂತವು ಯುಕ್ರೇನ್ನ ಪ್ರಿಪ್ಯಟ್ ನಗರದ ಸಮೀಪದ ಚೆರ್ನೊಬಿಲ್ ಅಣು ಸ್ಥಾವರದಲ್ಲಿ ಏಪ್ರಿಲ್ ೨೬, ೧೯೮೬ರಂದು ಉಂಟಾದ ಸ್ಪೋಟ ಮತ್ತದರ ಪರಿಣಾಮವಾಗಿ ಹರಡಿದ ವಿಕಿರಣದಿಂದ ಉಂಟಾದ ಸಾವು-ನೋವು-ನಷ್ಟಗಳನ್ನು ಒಳಗೊಳ್ಳುತ್ತದೆ. ಈ ದುರಂತವು ಅಣುಶಕ್ತಿಯ ಇತಿಹಾಸದಲ್ಲಿ ಅತ್ಯಂತ ಭೀಕರವಾದುದು. ಇದರಿಂದ ಹರಡಿದ ವಿಕಿರಣಾತ್ಮಕ ಪದಾರ್ಥವು ಅಂದಿನ ಇಡೀ ಸೊವಿಯಟ್ ಒಕ್ಕೂಟ ಮತ್ತು ಯುರೋಪ್ ಅಲ್ಲದೆ ಉತ್ತರ ಅಮೇರಿಕದ ಪೂರ್ವಕ್ಕೂ ತಲುಪಿತ್ತು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
ಡಿಜಿಟಲ್ ಇಂಡಿಯಾ ಒಂದು ಯೋಜನೆ. ಇದರ ಲಕ್ಶ್ಯ ಭಾರತಕ್ಕೆ ವಿಶ್ವದಲ್ಲೇ ಒಂದು ಅತ್ಯುತ್ತಮ ಸ್ಥಾನಮಾನವನ್ನು ನೀಡುವುದಾಗಿದೆ.ಇದರ ಅಭಿಯಾನ ಪ್ರಸಿದ್ದ ಉದ್ಯೊಗಪತಿಗಳ ಸಮ್ಮುಖದಲ್ಲಿ ೧ ಜುಲಾಯಿ ೨೦೧೫ ರಂದು ಇಂಧೋರ್ ನ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಶುರುವಾಯಿತು. ಮಾನ್ಯ ಪ್ರಧಾನಿ (ನರೇಂದ್ರ ಮೋದಿ) ಯವರು ಇದರ ಸ್ಥಾಪಕರಾಗಿದ್ದು ಇದಕ್ಕಾಗಿ ಒಂದು ಲಕ್ಷ ಕೋಟಿ ಯನ್ನು ಇದಕ್ಕಾಗಿ ಅನುಮೋದಿಸಿದ್ದಾರೆ.ಇದು ಇವರ ಕನಸಿನ ಕೂಸು ಆಗಿದೆ.ಇದು ೨೦೧೯ ರ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.ಇದು ಸಂಪೂರ್ಣಗೊಂಡಲ್ಲಿ ಭಾರತವು ವಿಶ್ವದಲ್ಲೇ ಸುಪ್ರಸಿದ್ಧವಾಗಲಿದೆ.ಇದು ಭಾರತದ ಕೀರ್ತಿ ಪತಾಕೆಯನ್ನು ಇಡೀ ವಿಶ್ವದಲ್ಲೇ ಹಾರಡಿಸಲಿದೆ ಎಂಬುವುದರಲ್ಲಿ ಇನ್ನೊಂದು ಮಾತಿಲ್ಲ.
ಚಿಪ್ಕೋ ಚಳುವಳಿ ಅಥವಾ ಚಿಪ್ಕೋ ಆಂದೋಲನ ಎಂಬುದು ಮಹಾತ್ಮ ಗಾಂಧಿಯವರ ಮೂಲಮಂತ್ರಗಳಾದ ಸತ್ಯಾಗ್ರಹ ಮ್ಮತ್ತು ಅಂಹಿಸೆಗಳಂತೆ ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಮರ ಕಡಿಯುವುದರ ಬಗ್ಗೆ ಅಸಹಕಾರ ತೋರಿಸಿದ ಪ್ರಮುಖ ಚಳುವಳಿಯಾಗಿದೆ. ಚಿಪ್ಕೋ ಚಳುವಳಿಯು ಮೊದಲಿಗೆ ೧೯೭೦ರಲ್ಲಿ ಉತ್ತರಖಂಡದ ಗರ್ವಾಲಹಿಮಾಲಯ ಹಾಗೂ ಉತ್ತರಪ್ರದೇಶದಲ್ಲಿ ಅತಿಯಾಗಿ ನಡೆಯುತ್ತಿದ್ದ ಅರಣ್ಯನಾಶದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆರಂಭವಾಯಿತು. ಮಾರ್ಚ್ ೨೬ ೧೯೭೪ರಲ್ಲಿ ಉತ್ತರಖಂಡ ರಾಜ್ಯದ ಚಮೋಲಿ ಜಿಲ್ಲೆಯ ರೇನಿಹಳ್ಳಿ ಮತ್ತು ಹೇಮ ವಾಲ್ಘಂಟೆಯಲ್ಲಿ ಕೆಲವು ಮಹಿಳೆಯರು ಭಯಬೀತರಾಗಿ ತಮ್ಮ ಕಾಡಿನ ಸಾಂಪ್ರದಾಯಿಕ ಹಕ್ಕನ್ನು ವಾಪಸ್ಸು ಪಡೆಯುವ ಸಲುವಾಗಿ ಇವರು ಮರಕಡಿಯುವುದನ್ನು ವಿರೋಧಿಸಿ ಹೋರಾಟ ನಡೆಸಿದರು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಸಿಂಧೂ ನದಿ (ಆಂಗ್ಲ ಭಾಷೆ: ಇಂಡಸ್ ; ಟಿಬೆಟ್ ಭಾಷೆ: ಸೆಂಗೆ ಚೂ;) ಪಾಕಿಸ್ತಾನ ಮತ್ತು ಉತ್ತರ ಭಾರತದಲ್ಲಿ ಹರಿಯುವ ಒಂದು ಪ್ರಮುಖ ನದಿ. ಟಿಬೆಟ್ಟಿನ ಪ್ರಸ್ಥಭೂಮಿಯಲ್ಲಿರುವ ಮಾನಸಸರೋವರದ ಹತ್ತಿರ ಉಗಮಿಸುವ ಈ ನದಿ ಕಶ್ಮೀರದ ಮೂಲಕ ಉತ್ತರ ಪಾಕಿಸ್ತಾನಕ್ಕೆ ಹರಿದು, ನಂತರ ದಕ್ಷಿಣ ಮುಖಕ್ಕೆ ತಿರುಗಿ ಇಡಿ ಪಾಕಿಸ್ತಾನದ ಉದ್ದಕ್ಕೆ ಹರಿದು, ಕರಾಚಿ ನಗರದ ಬಳಿ ಅರಬ್ಬಿ ಸಮುದ್ರವನ್ನು ಸೇರುತ್ತದೆ.