The most-visited ಕನ್ನಡ Wikipedia articles, updated daily. Learn more...
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಂಗಲ್ ಬುಕ್, ಎಂಬ ಕತೆ, ಮೋಗ್ಲಿ, ಎನ್ನುವ ಕಾಡು ಹುಡುಗನ ಜೀವನದ ಸುತ್ತ ಹೆಣೆದ ಆತ್ಯಂತ ಹೆಸರುವಾಸಿಯಾದ ವಿಶ್ವದಾದ್ಯಂತ ಅತಿ ಚರ್ಚಿತ "ನೈಜ ಚಲನ ಚಿತ್ರ ಕತೆಯಾಗಿದೆ". ಈ ಚಿತ್ರಕಥೆ, ವಿಶ್ವದಾದ್ಯಂತ ಸಿನೆಮಾ ಥಿಯೇಟರ್ ಗಳಲ್ಲಿ ಪ್ರದರ್ಶಿತವಾಗುತ್ತಿದೆ.ಜಂಗಲ್ ಬುಕ್, ೨೦೧೬ ವನ್ನು ಅಮೆರಿಕನ್ ಫ್ಯಾಟೆಸಿ ಅಡ್ವೆಂಚರ್ ಫಿಲ್ಮ್ಸ್ ನ, ಜಸ್ಟಿನ್ ಮಾರ್ಕ್ಸ್ ಬರೆದು, ಜಾನ್ ಫಾವೆರೊ ನಿರ್ದೇಶಿಸಿದ, ಚಲನ ಚಿತ್ರ, ವಾಲ್ಟ್ ಡಿಸ್ನಿ ಚಲನ ಚಿತ್ರ ಸಂಸ್ಥೆಯ ಲಾಂಛನದ ಮೂಲಕ ವಿಶ್ವದಾದ್ಯಂತ ಸಿನಿಮಾ ಮಂದಿರಗಳಲ್ಲಿ ವೀಕ್ಷಿಸಲು ಬಿಡುಗಡೆಯಾಗಿದೆ. ಈ ಅದ್ಭುತ ಚಲನ ಚಿತ್ರ, ರುಡ್ಯಾರ್ಡ್ ಕಿಪ್ಲಿಂಗ್ ರವರು ಬರೆದ ಕಥೆಗಳನ್ನು ಆಧರಿಸಿದ್ದು.
ಮ್ಯಾಸ್ಲೊವಿನ ಕ್ರಾಮಾನುಗತ ಸಿದ್ಧಾಂತ
ಎಬ್ರಾಹಮ್ ಮ್ಯಾಸ್ಲೊರವರ ಕ್ರಮಾನುಗತ ಸಿದ್ದಾ೦ತವನ್ನು ಕ್ರಮಾನುಗತ ಅವಶ್ಯಕತೆಗಳ ವರ್ಗ ಎ೦ದು ಕರೆಯಲಾಗುತ್ತದೆ. ಈ ಸಿದ್ದಾ೦ತವು ಮನೋವಿಜ್ಞಾನದಲ್ಲಿ ೧೯೪೩ರಲ್ಲಿ ಬೆಳಕಿಗೆ ತ೦ದರು. ಆನ೦ತರ ಮ್ಯಾಸ್ಲೊರವರು ಮಾನವನ ಪ್ರಮೂಕ ಅವಶ್ಯಕತೆಗಳ ಬಗ್ಗೆ ಹೆಚ್ಚು ಅವಲೋಕನಗಳನ್ನು ನೀಡಿದ್ದಾರೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಕಾಮಸೂತ್ರ ವಾತ್ಸಾಯನನಿಂದ ಬರೆಯಲ್ಪಟ್ಟ ಸಂಸ್ಕೃತ ಸಾಹಿತ್ಯದಲ್ಲಿ ಮಾನವನ ಲೈಂಗಿಕ ವರ್ತನೆಯ ಮೇಲಿನ ಪ್ರಮಾಣಿತ ಕೃತಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿರುವ ಒಂದು ಪ್ರಾಚೀನ ಭಾರತೀಯ ಹಿಂದೂ ಪಠ್ಯ. ಕೃತಿಯ ಒಂದು ಭಾಗ ಸಂಭೋಗದ ಮೇಲೆ ಪ್ರಾಯೋಗಿಕ ಸಲಹೆಯನ್ನು ಹೊಂದಿದೆ. ಅದು ಹೆಚ್ಚಾಗಿ ಗದ್ಯ ರೂಪದಲ್ಲಿದೆ, ಜೊತೆಗೆ ಅನೇಕ ಸೇರಿಸಲಾದ ಅನುಷ್ಟುಭ ಕಾವ್ಯ ಶ್ಲೋಕಗಳನ್ನು ಹೊಂದಿದೆ.
ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:पञ्चतन्त्र(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಹಿಂದೂ ಧರ್ಮದಲ್ಲಿ, ಯಜ್ಞ ಅಥವಾ ಯಾಗವು ವೈದಿಕ ಕಾಲದಿಂದ ಹುಟ್ಟಿಕೊಂಡಿರುವ ವೈದಿಕ ಮಂತ್ರಗಳ (ಮತ್ತು ಅರ್ಚನೆ, ಪ್ರಾರ್ಥನೆ, ಪ್ರಶಂಸೆ, ಅರ್ಪಣೆ ಮತ್ತು ನೈವೇದ್ಯ, ಬಲಿದಾನ) ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆ. ಯಜ್ಞವು ಅಗ್ನಿಯಲ್ಲಿ ಹವನ ಸಾಮಗ್ರಿಯನ್ನು ಅರ್ಪಿಸುವ ಮತ್ತು ಶುದ್ಧೀಕರಿಸುವ ಒಂದು ಪುರಾತನ ಕ್ರಿಯಾವಿಧಿ. ಯಜ್ಞ ಶಬ್ದದ ಭವ್ಯ ಅರ್ಥವು ಸಂಸ್ಕೃತ ಕ್ರಿಯಾಪದ ಯಜ್ ಇಂದ ವ್ಯುತ್ಪನ್ನವಾಗಿದೆ, ಮತ್ತು ಇದು ಮೂರು ಅರ್ಥಗಳನ್ನು ಹೊಂದಿದೆ - ದೇವಪೂಜನ, ಸೌಗತೀಕರಣ ಹಾಗು ದಾನ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಕನ್ನಡ ವೃತ್ತಿ ರಂಗಭೂಮಿಯ "ಅಭಿನಯ ಶಾರದೆ" ಎಂದೇ ಖ್ಯಾತರಾಗಿದ್ದ ಎಂ.ವಿ.ರಾಜಮ್ಮ ಜನಿಸಿದ್ದು (೧೦.೦೩.೧೯೨೧ - ೦೬.೦೭.೨೦೦೦) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಗ್ದೊಂಡನಹಳ್ಳಿಯಲ್ಲಿ.ತಂದೆ ನಂಜಪ್ಪ ಜಮೀನ್ದಾರರು.ತಾಯಿ ಸುಬ್ಬಮ್ಮ.ಬಾಲ್ಯದಿಂದಲೇ ಅಭಿನಯದಲ್ಲಿ ಆಸಕ್ತಿ.ಮಹಮದ್ ಪೀರ್ರವರ ಚಂದ್ರಕಲಾ ನಾಟಕ ಮಂಡಳಿಯ ಸಂಸಾರ ನೌಕ,ಗೌತಮಬುದ್ಧ ನಾಟಕಗಳ ಅಭಿನಯದಿಂದ ಜನ ಮೆಚ್ಚುಗೆ ಗಳಿಸಿದರು. ೧೯೩೬ರಲ್ಲಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.ಸಂಸಾರ ನೌಕೆ ಕನ್ನಡ ಚಲನಚಿತ್ರದಲ್ಲಿ ಅಭಿನಯ.ಅನೇಕ ಚಲನಚಿತ್ರಗಳಲ್ಲಿ ನಾಯಕಿಯಾಗಿ,ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.ಅಂದಿನ ಜನಪ್ರಿಯ ನಟರುಗಳಾದ ಬಿ.ಆರ್.ಪಂತುಲು,ಹೆಚ್.ಎಲ್.ಎನ್.ಸಿಂಹ,ಡಿಕ್ಕಿ ಮಾಧವರಾವ್,ಜಿ.ವಿ.ಕೃಷ್ನ ಮೊದಲಾದವರೊಂದಿಗೆ ಅಭಿನಯಿಸಿದ್ದಾರೆ.ಎಂ.ವಿ. ರಾಜಮ್ಮ ಕನ್ನಡದ ಮೊದಲ ಮಹಿಳಾ ಚಿತ್ರ ನಿರ್ಮಾಪಕಿ.
ಶಿರ್ಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು.
ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ಕರ್ನಾಟಕ ಏಕೀಕರಣ : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ.