The most-visited ಕನ್ನಡ Wikipedia articles, updated daily. Learn more...
ಸಿಗಿಸ್ಮಂಡ್ ಷ್ಲೋಮೊ ಫ್ರಾಯ್ಡ್ (ಮೇ ೬, ೧೮೫೬ – ಸೆಪ್ಟೆಂಬರ್ ೨೩, ೧೯೩೯) ಎಂಬ ಜನ್ಮನಾಮದ ಸಿಗ್ಮಂಡ್ ಫ್ರಾಯ್ಡ್ (German pronunciation: [ˈziːkmʊnt ˈfʁɔʏt]) ಇವರು ಆಸ್ಟ್ರಿಯಾದ ನರಶಾಸ್ತ್ರಜ್ಞರಾಗಿದ್ದು, ಮನಶ್ಶಾಸ್ತ್ರದ ಮನೋವಿಶ್ಲೇಷಣಾ ಶಾಖೆಯ/ಪಂಥವನ್ನು ಸ್ಥಾಪಿಸಿದರು. ರೋಗಿಯ ಸುಪ್ತ ಮನಸ್ಸಿನ ಸ್ಥಿತಿ ಹಾಗೂ ಚಿಕಿತ್ಸೆಗೆ ಅಡ್ಡಿಪಡಿಸುವ ದಮನದ ಪ್ರತಿರೋಧಕ ವ್ಯವಸ್ಥೆಯನ್ನು ಮನೋ ವಿಶ್ಲೇಷಣೆಯ ಮೂಲಕ ವೈದ್ಯಕೀಯವಾಗಿ ಅಭ್ಯಸಿಸಿ, ಮನೋ ವಿಶ್ಲೇಷಕರು ಹಾಗೂ ರೋಗಿಯ ನಡುವಿನ ಸಂವಾದದ ಮೂಲಕ ಮನೋವಿಕಾರವನ್ನು ಹೇಗೆ ಸುಧಾರಿಸಬಹುದು ಎಂಬ ತಮ್ಮ ತತ್ವ ಸಿದ್ಧಾಂತಗಳಿಗೆ ಫ್ರಾಯ್ಡ್ ಪ್ರಖ್ಯಾತಿ ಪಡೆದವರು. ಕಾಮಾಪೇಕ್ಷೆಯೇ ಮಾನವ ಜೀವನದ ಅತಿಮುಖ್ಯ ಪ್ರೇರಕ ಶಕ್ತಿ, ಹಾಗೆಯೇ ಮುಕ್ತ ಸಂವಾದವೂ ಸೇರಿದಂತೆ ತನ್ನ ಚಿಕಿತ್ಸೆಗಳಲ್ಲಿ ಅನುಸರಿಸುವ ಕ್ರಮಗಳು, ಚಿಕಿತ್ಸಾ ಕ್ರಮದಲ್ಲಿನ ಸ್ಥಾನಾಂತರ ಸಿದ್ಧಾಂತ ಹಾಗೂ ಸುಪ್ತಮನಸ್ಸಿನ ಬಯಕೆಗಳಿಗೆ ಒಳನೋಟಕ್ಕೆ ಸ್ವಪ್ನಗಳು ಮೂಲಾಧಾರವೆಂಬ ತಮ್ಮ ಪುನರ್ ವಿವರಣೆಗಳಿಗೆ ಫ್ರಾಯ್ಡ್ ಪ್ರಖ್ಯಾತಿ ಹೊಂದಿದರು.
ಆಂತರಿಕ ವ್ಯಕ್ತಿತ್ವ ಅಸ್ವಸ್ಥತೆ (ಬಿಪಿಡಿ ) ಇದು ಒಬ್ಬ ವ್ಯಕ್ತಿಯಲ್ಲಿನ ವ್ಯಕ್ತಿತ್ವ ಕ್ರಿಯೆಯ ಒಂದು ದೀರ್ಘ ಅವಧಿಯ ಅಸ್ತವ್ಯಸ್ಥತೆಯ ಒಂದು ವ್ಯಕ್ತಿತ್ವದ ಅಸ್ವಸ್ಥತೆ (ಸಾಮಾನ್ಯವಾಗಿ ಹದಿನೆಂಟು ವರ್ಷ ವಯಸ್ಸಿನ ನಂತರ ಕಂಡುಬರುವ ಅಸ್ವಸ್ಥತೆ, ಆದಾಗ್ಯೂ ಇದು ಚಿಕ್ಕ ಮಕ್ಕಳಲ್ಲಿಯೂ ಕೂಡ ಕಂಡುಬರುತ್ತದೆ), ಇದು ವ್ಯಕ್ತಿಯ ಲಹರಿಯ ಆಳ ಮತ್ತು ಬದಲಾವಣೆಗಳ ಮೂಲಕ ಗುಣಲಕ್ಷಣಗಳನ್ನು ವರ್ಣಿಸಲ್ಪಡುತ್ತದೆ. ಈ ಅಸ್ವಸ್ಥತೆಯು ಲಹರಿಯಲ್ಲಿನ ಅಸ್ಥಿರತೆಯ ಅಸಾಮಾನ್ಯವಾದ ಹಂತಗಳು; ಕಪ್ಪು ಮತ್ತು ಬಿಳುಪು ಆಲೋಚನೆ; ಅಥವಾ ಬೇರ್ಪಡುವಿಕೆ ಮುಂತಾದವುಗಳನ್ನು ಒಳಗೊಳ್ಳುತ್ತದೆ; ಈ ಅಸ್ವಸ್ಥತೆಯು ಅನೇಕ ವೇಳೆ ತನ್ನಷ್ಟಕ್ಕೇ ತಾನೇ ಆದರ್ಶೀಕರಣ ಮತ್ತು ಅಪಮೌಲ್ಯೀಕರಣ ಹಂತಗಳಲ್ಲಿ ವ್ಯಕ್ತವಾಗಲ್ಪಡುತ್ತದೆ, ಅದೇ ರೀತಿಯಾಗಿ ಅಸ್ತವ್ಯಸ್ತವಾಗಿರುವ ಮತ್ತು ಅಸ್ಥಿರವಾದ ಪರಸ್ಪರ ಸಂಬಂಧಗಳಲ್ಲಿ, ಸ್ವಯಂ-ಚಿತ್ರಣಗಳಲ್ಲಿ, ಸ್ವವ್ಯಕ್ತಿತ್ವಗಳಲ್ಲಿ, ಮತ್ತು ನಡುವಳಿಕೆಗಳಲ್ಲಿಯೂ ಕೂಡ ಗೋಚರವಾಗುತ್ತದೆ; ಹಾಗೆಯೇ ಒಬ್ಬ ವ್ಯಕ್ತಿಯ ಸ್ವಯಂ ಗ್ರಹಿಕೆಗಳಲ್ಲಿಯೂ ಕೂಡ ಭಂಗವನ್ನುಂಟುಮಾಡುತ್ತದೆ. ತೀವ್ರವಾದ ದೃಷ್ಟಾಂತಗಳಲ್ಲಿ, ಸ್ವಯಂ ಗ್ರಹಿಕೆಯಲ್ಲಿ ಈ ಅಡ್ಡಿಪಡಿಸುವಿಕೆಯು ವಿಘಟನೆಯ ಅವಧಿಗಳಿಗೆ ಕಾರಣವಾಗುತ್ತವೆ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಹುಟ್ಟಿದಾಗ ನಮ್ ಗ್ಯಾಲ್ ವಂಗಡಿ ಎಂದೂ ಆಗಾಗ್ಗೆ ತೇನ್ಸಿಂಗ್ ನೋರ್ಗೆ ಎಂದು ಕರೆಯಲ್ಪಡುವ ಸುಪ್ರದಿಪ್ತ - ಮಾನ್ಯಭಾರ - ನೇಪಾಳಿ - ತಾರ ತೇನ್ಸಿಂಗ್ ನೋರ್ಗೆ, ಜಿ ಎಮ್ (೧೯೧೪ ರ ಮೇತಿಂಗಳ ಕೊನೆ - ೯ ನೇ ಮೇ ೧೯೮೬ )ನೇಪಾಳಿ - ಭಾರತೀಯ ಶೇರ್ಪ ಪರ್ವತಾರೋಹಿಯಾಗಿದ್ದರು. ಇತಿಹಾಸದಲ್ಲಿ ಪರ್ವತವನ್ನು ಏರಿದ ಅತ್ಯಂತ ಹೆಸರುವಾಸಿಯಾದವರ ಪೈಕಿ, ೨೯ ನೇ ಮೇ ೧೯೫೩ ರಂದು, ಎಡ್ಮಂಡ್ ಹಿಲರಿಯ /೧} ಜೊತೆ ಯಶಸ್ವಿಯಾಗಿ ಗೌರಿಶಂಖರ ಶಿಖರವನ್ನು ತಲುಪಿದ ಮೊದಲನೆ ಇಬ್ಬರು ವ್ಯಕ್ತಿಗಳಲ್ಲಿ ಇವರೂ ಒಬ್ಬರೆಂದು ತಿಳಿಯಲಾಗಿದೆ. ೨೦ ನೇ ಶತಮಾನದ ಅತ್ಯಂತ ಪ್ರಭಾವಶಾಲಿ ನೂರು ವ್ಯಕ್ತಿಗಳಲ್ಲಿ ಒಬ್ಬರೆಂದು ಟೈಮ್ಸ್ ನಿಯತಕಾಲಿಕ ಸಂಚಕೆಯು ಹೆಸರಿಸಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಅಡಾಲ್ಫ್ ಹಿಟ್ಲರ್ (German pronunciation: [ˈadɔlf ˈhɪtlɐ], ೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (German: Nationalsozialistische Deutsche Arbeiterparteiಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ (Führer und Reichskanzler ) ಆಡಳಿತ ನಡೆಸಿದನು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಡಾII ಸುಬ್ರಮಣಿಯನ್ ಸ್ವಾಮಿ ಭಾರತದ ಜನಪ್ರಿಯ ರಾಜಕಾರಣಿಗಳಲ್ಲೊಬ್ಬರು ಹಾಗೂ ಖ್ಯಾತ ಅರ್ಥಶಾಸ್ತ್ರಜ್ನರು. ಇವರು ತಮಿಳುನಾಡಿನ ಮದ್ರಾಸ್ ನ(ಈಗಿನ ಚೆನ್ನೈ) ಸಮೀಪದ ಮೈಲಾಪುರ್ ಎಂಬಲ್ಲಿ ಸೆಪ್ಟಂಬರ್ ೧೫, ೧೯೩೯ರಂದು ಜನಿಸಿದರು. ಪ್ರತಿಷ್ಠಿತ ಹಾರ್ವರ್ಡ್ ವಿವಿಯಿಂದ ನೋಬೆಲ್ ಪುರಸ್ಕೃತರಿಬ್ಬರ ಜೊತೆ ಮಾಡಿದ ವಿಷಯ ಮಂಡನೆಗಾಗಿ ೧೯೬೪ರಲ್ಲಿ ಡಾಕ್ಟರೇಟ್ ಪದವಿ ಪಡೆದ ಇವರು, ಹಲವು ವರ್ಷಗಳ ಕಾಲ ಹಾರ್ವರ್ಡ್ ವಿವಿಯಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ೧೯೯೧ರಲ್ಲಿ ನಿವೃತ್ತರಾಗುವವರೆಗೆ ದೆಹಲಿಯ ಐಐಟಿಯಲ್ಲಿ ಪ್ರೊಫೆಸರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಫ್ರಾನ್ಸ್ ಪಶ್ಚಿಮ ಯೂರೋಪಿನಲ್ಲಿರುವ ದೇಶ.ಇದು ಯುರೋಪ್ ಖಂಡದ ಮೂರನೆಯ ಅತ್ಯಂತ ದೊಡ್ಡ ದೇಶ.ಇದು ಯುರೋಪಿನ ಒಂದು ಬಲಾಡ್ಯ ದೇಶವಾಗಿದೆ.ಇದು ಪ್ರಪಂಚದ ಹಲವೆಡೆ ತನ್ನ ವಸಾಹತುಗಳನ್ನು ಸ್ಥಾಪಿಸಿ ಹತ್ತಂಭತ್ತನೆಯ ಶತಮಾನ ಮತ್ತು ೨೦ನೆಯ ಶತಮಾನದ ಮೊದಲ ಭಾಗದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿತ್ತು.ಸಾಂಸ್ಕೃತಿಕವಾಗಿ ಹಲವಾರು ಚಿಂತಕರು, ಕಲಾವಿದರು,ವಿಜ್ಞಾನಿಗಳನ್ನು ಹೊಂದಿ ಈಗಲೂ ಪ್ರಪಂಚದ ಗಮನಸೆಳೆಯುತ್ತಿದೆ. ಪ್ರಪಂಚದಲ್ಲಿ ನಾಲ್ಕನೆಯದಾಗಿ ಅತೀ ಹೆಚ್ಚು ಪಾರಂಪರಿಕ ತಾಣಗಳಿದ್ದು, ವರ್ಷಕ್ಕೆ ೮ ಕೊಟಿಗಿಂತಲೂ ಹೆಚ್ಚು ಪ್ರವಾಸಿಗಳನ್ನು ಸೆಳೆಯುತ್ತಿದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಕನ್ಯಾ ವಿಕ್ರಯದ ಪರಿಣಾಮವು ಎಂಬ ಇನ್ನೊಂದು ಹೆಸರನ್ನೂ ಉಳ್ಳ ಈ ಪುಟ್ಟ ಪುಸ್ತಕ ಹೊಸಗನ್ನಡದ ಮೊತ್ತಮೊದಲ ಗ್ರಂಥಗಳಲ್ಲಿ ಒಂದು; ಕನ್ನಡದಲ್ಲಿ ಮುದ್ರಣ ಕಂಡ ಮೊದಲ ಹತ್ತೆಂಟರಲ್ಲಿ ಕೂಡ ಒಂದು. ಮುಖ ಪುಟದಲ್ಲಿ ಉಲ್ಲೇಖವಾಗಿರುವಂತೆ ಹವ್ಯಕ ಹಿತೇಚ್ಛುವಾದ ಒಬ್ಬ ವಿದ್ವಾಂಸರಿಂದ ರಚಿಸಲ್ಪಟ್ಟದ್ದನ್ನು (1887) ಬೊಂಬಾಯಿಯ ಭಾರತೀ ಛಾಪಖಾನೆಯ ಅಧ್ಯಕ್ಷರು ತಮ್ಮ ಮುದ್ರಣಾಲಯದಲ್ಲಿ ಛಾಪಿಸಿದರು. ಇದೊಂದು ಚಿಕ್ಕ ನಾಟಕ; 14 ಪುಟ್ಟ ಪುಟ್ಟ ದೃಶ್ಯಗಳುಳ್ಳದ್ದು, ಕ್ರೌನ್ ಅಷ್ಟಪತ್ರದ ಮುದ್ರಣದಲ್ಲಿ 47 ಪುಟ; ಸುಮಾರು ಮುಕ್ಕಾಲು ಗಂಟೆ ಅವಧಿಯಲ್ಲಿ ಆಡಬಹುದಾದದ್ದು.
ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:पञ्चतन्त्र(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.