The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ನವೆಂಬರ್ ೧ - ನವೆಂಬರ್ ತಿಂಗಳ ಮೊದಲ ದಿನ, ಮತ್ತು ವರ್ಷದ ೩೦೫ನೇ ದಿನ(ಅಧಿಕ ವರ್ಷದಲ್ಲಿ ೩೦೬ನೇ ದಿನ). ೧೯೫೬ ರಂದು ಕರ್ನಾಟಕ ಏಕೀಕರಣವಾಯಿತು. ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು.ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ದಿನವನ್ನಾಗಿ ಅಚರಿಸಲಾಗುತ್ತಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೈಸೂರು ರಾಜ್ಯವು 1948 ರಿಂದ 1956 ರವರೆಗೂ ಭಾರತದ ಒಕ್ಕೂಟದಲ್ಲಿ ಒಂದು ಪ್ರತ್ಯೇಕ ರಾಜ್ಯವಾಗಿತ್ತು.ಮೈಸೂರು ಇದರ ರಾಜಧಾನಿಯಾಗಿತ್ತು.1956 ರಲ್ಲಿ ಈ ರಾಜ್ಯ ಗಣನೀಯವಾಗಿ ವಿಸ್ತರಿಸಲ್ಪಟ್ಟಿತು. ಇದು 1956ರಲ್ಲಿ ಭಾಷಾವಾರು ರಾಜ್ಯ ವಿಂಗಡಣೆ ಪರಿಣಾಮ ಕೂರ್ಗ್ ರಾಜ್ಯ, ಪಶ್ಚಿಮ ಮದ್ರಾಸ್ ಪ್ರೆಸಿಡೆನ್ಸಿಯಿಂದ ಕನ್ನಡ ಮಾತನಾಡುವ ಜಿಲ್ಲೆಗಳು,ದಕ್ಷಿಣ ಮುಂಬಯಿ ಪ್ರೆಸಿಡೆನ್ಸಿ,ಮತ್ತು ಪಶ್ಚಿಮ ಹೈದರಾಬಾದ್ ರಾಜ್ಯಗಳ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲಾಯಿತು ರಾಜ್ಯ ಏಕರೂಪದ ಕನ್ನಡ-ಮಾತನಾಡುವ ರಾಜ್ಯವಾಯಿತು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ವಾರ್ಷಿಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕರ್ನಾಟಕದ ಹುಟ್ಟಿನ ಪ್ರತೀಕವಾಗಿ ಕರ್ನಾಟಕ ಸರಕಾರದ ವತಿಯಿಂದ ನವೆಂಬರ್ ಒಂದರಂದು ನೀಡಲಾಗುತ್ತದೆ. ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಸಾಹಿತ್ಯ, ಸಂಗೀತ, ಕಲೆ, ನಾಟ್ಯ, ರಂಗಕಲೆ, ಪತ್ರಿಕೋದ್ಯಮ, ಕ್ರೀಡೆ, ವೈದ್ಯ, ವಿದ್ಯಾದಾನ, ಕೃಷಿ, ಐಟಿ ಮತ್ತು ವಿಜ್ಞಾನ ಕ್ಷೇತ್ರಗಳನ್ನು ಒಳಗೊಂಡಿದೆ.
ಉತ್ತರ ಕರ್ನಾಟಕವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦ರಿಂದ ೭೦೦ ಮೀಟರ್ ಎತ್ತರದಲ್ಲಿನ, ತುಲನಾತ್ಮಕವಾಗಿ ಪ್ರಸ್ಥಭೂಮಿಯ ಒಂದು ಶುಷ್ಕವಾದ ವಿಸ್ತಾರ. ಇದು ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಬಳ್ಳಾರಿ, ಗುಲ್ಬರ್ಗ, ಯಾದಗಿರಿ, ರಾಯಚೂರು, ಗದಗ್, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. ಕೃಷ್ಣಾ ನದಿ ಮತ್ತು ಅದರ ಉಪನದಿಗಳಾದ ಭೀಮಾ, ಘಟಪ್ರಭಾ, ಮಲಪ್ರಭಾ ಮತ್ತು ತುಂಗಭದ್ರಾ ನದಿಗಳು ಈ ಪ್ರದೇಶದಲ್ಲಿ ಹರಿಯುತ್ತವೆ.ಉತ್ತರ ಕರ್ನಾಟಕದ ಜನರ ಮುಖ್ಯ ಆಹಾರವು ಬಿಳಿಜೊಳದ ರೊಟ್ಟಿ ,ವಿವಿಧ ತರಕಾರಿ ಅಥವಾ ಕಾಳುಗಳಿಂದ ತಯಾರಿಸಿದ ಪಲ್ಯಾ,ವಿವಿಧ ಚಟ್ನಿ ಮತ್ತು ಗಟ್ಟಿ ಮೊಸರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹಾರ್ವರ್ಡ್ ವಿಶ್ವವಿದ್ಯಾನಿಲಯ' (ಅಧಿಕೃತವಾಗಿ ದಿ ಪ್ರೆಸಿಡೆಂಟ್ ಅಂಡ್ ಫೆಲೋಸ್ ಆಫ್ ಹಾರ್ವರ್ಡ್ ಕಾಲೇಜ್ ) ಎಂಬುದು ಕೇಂಬ್ರಿಡ್ಜ್, ಮಸಾಚ್ಯೂಸೆಟ್ಸ್' ನಲ್ಲಿ ನೆಲೆಯಾಗಿರುವ ಒಂದು ಖಾಸಗಿ ವಿಶ್ವವಿದ್ಯಾಲಯ, ಜೊತೆಗೆ ಇದು ಐವಿ ಲೀಗ್ ನ ಸದಸ್ಯ. ಮಸಾಚ್ಯೂಸೆಟ್ಸ್ ವಸಾಹತು ಶಾಸನ ಸಭೆಯಿಂದ 1636ರಲ್ಲಿ ಸ್ಥಾಪನೆಗೊಂಡ ಹಾರ್ವರ್ಡ್ ಅಮೆರಿಕ ಸಂಯುಕ್ತ ಸಂಸ್ಥಾನದ ಮೊದಲ ಕಾರ್ಪೋರೇಶನ್ ಆಗಿರುವುದರ ಜೊತೆಗೆ ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಉನ್ನತ ಶಿಕ್ಷಣಕ್ಕಿರುವ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ವಿಶ್ವವಿದ್ಯಾಲಯವು ಪ್ರಸಕ್ತ ಹತ್ತು ಪ್ರತ್ಯೇಕ ಶೈಕ್ಷಣಿಕ ಘಟಕಗಳನ್ನು ಒಳಗೊಂಡಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕರ್ನಾಟಕ ಏಕೀಕರಣ ಇತಿಹಾಸ (ಪುಸ್ತಕ)
ಡಾ|| ಎಚ್. ಎಸ್. ಗೋಪಾಲ ರಾವ್ ಅವರು ಬರೆದ "ಕರ್ನಾಟಕ ಏಕೀಕರಣ ಇತಿಹಾಸ" ಕರ್ನಾಟಕ ಏಕೀಕರಣ ಚಳುವಳಿಯ ಕುರಿತು ಮಾಹಿತಿ ನೀಡುವ ಪುಸ್ತಕ.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದುಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್.ಈ ನಗರವನ್ನು ೧೫೯೧ ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ ದೊರೆ ಮಹಮ್ಮದ್ ಖುಲಿ ಖುತುಬು ಷಾ ನಿರ್ಮಿಸಿದನು.ಈ ನಗರವು ಮೂಸಿ ನದಿಯ ದಂಡೆಯಲ್ಲಿ ಸೌಂದರ್ಯದ ಖನಿಯಂತೆ ಕಂಗೊಳಿಸುತ್ತ ನಿಂತಿದೆ.ಸ್ಥಳೀಯ ದಂತಕತೆಯ ಪ್ರಕಾರ ಈ ನಗರದ ಹೆಸರು ಭಾಗ್ಮತಿ ಮತ್ತು ಮಹಮ್ಮದ್ ಖುಲಿ ಖುತುಬು ಷಾರವರ ನಡುವೆ ನಡೆದ ಕುತೂಹಲಕಾರಿ ಪ್ರೇಮಕಥೆಯಿಂದ ಬಂದಿತೆಂದು ಹೇಳುತ್ತಾರೆ.ಭಾಗ್ಮತಿ ಒಬ್ಬಳು ನರ್ತಕಿ.ಈಕೆಗೆ ಸುಲ್ತಾನನು ಮನಸೋತು ಪ್ರೇಮಿಸುತ್ತಿದ್ದನು.ಆಕೆಯೊಂದಿಗಿನ ಪ್ರೀತಿಯ ಧ್ಯೋತಕವಾಗಿ ಈ ನಗರಕ್ಕೆ ಭಾಗನಗರ್ ಎಂದು ಹೆಸರಿಟ್ಟನು.ಖುಲಿ ಖುತುಬು ಷಾ ಈಕೆಯನ್ನು ಇಸ್ಲಾಂಗೆ ಮತಾಂತರ ಮಾಡಿ ಹೈದರ್ ಮಹಲ್ ಎಂದು ಹೆಸರಿಟ್ಟು,ಗುಟ್ಟಾಗಿ ಮದುವೆಯಾದನು.ಹಾಗಾಗಿ ಈ ನಗರದ ಹೆಸರು ಹೈದರಾಬಾದ್ ಎಂದು ಬದಲಾಯಿತು.ಹೈದರಾಬಾದನ್ನು ಖುತುಬ್ ಷಾ ಸಾಮ್ರಾಜ್ಯದವರು ಸರಿ ಸುಮಾರು ಒಂದು ಶತಮಾನಗಳ ಕಾಲ ಆಳಿದರು.ಆನಂತರ ಮೊಘಲ್ ಸಾಮ್ರಾಟ ಔರಂಗಜೇಬನು ದಕ್ಷಿಣದ ಮೇಲೆ ದಂಡೆತ್ತಿ ಬಂದಾಗ ಈ ನಗರವನ್ನು ತನ್ನ ವಶಕ್ಕೆ ಪಡೆದನು.೧೭೨೪ ರಲ್ಲಿ ಈ ನಗರದಲ್ಲಿ ಆಸಿಫ್ ಜಹಾನು ಇಲ್ಲಿ ಆಸಿಫ್ ಜಾಹಿ ಸಾಮ್ರಾಹವನ್ನು ಸ್ಥಾಪಿಸಿ ಹೈದರಾಬಾದ್ ಮತ್ತು ಸುತ್ತಮುತ್ತಲ ಪ್ರಾಂತ್ಯವನ್ನು ತನ್ನ ನಿಯಂತ್ರಣಕ್ಕೆ ಪಡೆದನು.ಆಸಿಫ್ ಜಾಹಿ ಸಾಮ್ರಾಜ್ಯವು ತಮ್ಮನ್ನು ತಾವು ಹೈದರಾಬಾದಿನ ನಿಜಾಮರೆಂದು ಸ್ವಯಂ ಘೋಷಿಸಿಕೊಂಡರು. ಈ ಒಂದು ಹೆಸರು ಇವರಿಗೆ ಶಾಶ್ವತವಾಗಿ ಅಂಟಿಕೊಂಡಿತು. ಈ ನಗರದ ಭವ್ಯ ಇತಿಹಾಸವು ನಮ್ಮನ್ನು ನಿಜಾಮರ ಮತ್ತು ವಸಾಹತು ಷಾಹಿ ಆಡಳಿತಕಾಲದಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ.ಹೈದರಾಬಾದನ್ನು ಇನ್ನೂರು ವರ್ಷಗಳಿಗು ಅಧಿಕ ಕಾಲ ಆಳಿದ ನಿಜಾಮರು ಬ್ರಿಟೀಷರೊಂದಿಗೆ ಪರಸ್ಪರ ಕೊಡು ಕೊಳ್ಳುವಿಕೆಯ ಸಂಬಂಧವನ್ನು ಉಳಿಸಿಕೊಂಡು ಏಳಿಗೆ ಹೊಂದಿದರು.ಈ ನಗರವು ೧೭೬೯ರಿಂದ ೧೯೪೮ರವರೆಗೆ ನಿಜಾಮರ ರಾಜಧಾನಿಯಾಗಿತ್ತು.ಸ್ವಾತಂತ್ರ್ಯ ಬಂದ ನಂತರ ನಡೆದ ಆಪರೇಷನ್ ಪೋಲೊ ಕಾರ್ಯಾಚರಣೆಯಲ್ಲಿ ಹೈದರಾಬಾದಿನ ಕಡೆಯ ನಿಜಾಮನು ಭಾರತದ ಸಾರ್ವಭೌಮತೆಯನ್ನು ಒಪ್ಪಿ ಸಹಿ ಮಾಡುವ ಮೂಲಕ ಹೈದರಾಬಾದ್ ಭಾರತದ ಗಣರಾಜ್ಯದೊಂದಿಗೆ ವಿಲೀನವಾಯಿತು.ಆನಂತರ ಇದನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಮಾಡಲಾಯಿತು.ಹೈದರಾಬಾದ್ ತನ್ನದೇ ಆದ ಪ್ರತ್ಯೇಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ.ಭೌಗೋಳಿಕವಾಗಿ ಹೈದರಾಬಾದ್ ಅತ್ಯಂತ ಕೌತುಕದ ಸ್ಥಳದಲ್ಲಿ ನೆಲೆಗೊಂಡಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಆಸ್ಥಾನದ ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಕರ್ನಾಟಕದಲ್ಲಿ ಕಂಡುಬರುವ ಪಶ್ಚಿಮ ಘಟ್ಟಗಳು ಇರುವ ಪ್ರದೇಶಗಳನ್ನು ಮಲೆನಾಡು ಎನ್ನುತ್ತಾರೆ . ವರ್ಷದ ಬಹುಪಾಲು ದಿನ ಮಳೆ ಸುರಿಯುತ್ತಿರುವದರಿಂದ ಮತ್ತು ನಿತ್ಯ ಹರಿದ್ವರ್ಣ ಕಾಡುಗಳಿಂದ ಆವೃತವಾಗಿರುವ ಬೆಟ್ಟಗಳು ಕೂಡಿರುವದರಿಂದ ಮಲೆನಾಡು ಎಂಬ ಹೆಸರು ಬಂದಿದೆ . ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಮೂಡಿಗೆರೆ, ಸಕಲೇಶಪುರ, ಶಿರಸಿ, ಮಡಿಕೇರಿ, ಶೃಂಗೇರಿ, ಕೊಪ್ಪ ಈ ಪ್ರದೇಶದ ಮುಖ್ಯ ಜಾಗಗಳು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಪ್ರಜಾಪ್ರಭುತ್ವದಲ್ಲಿ ರಾಜರ ರಾಜ್ಯಗಳ ವಿಲೀನ
ಭಾರತ ಸ್ವಾತಂತ್ರ್ಯ ಪಡೆದಾಗ ಸುಮರು ೫೬೨ ದೇಶೀಯ ಸಂಸ್ಥಾನಗಳಿದ್ದವು.ಅವೆಲವನ್ನು ರಾಜರು ಆಳುತ್ತಿದ್ದರು.೧೯೪೭ರ ಸ್ವಾತಂತ್ರ್ಯ ಕಾಯಿದೆಯಂತೆ ಅವು ಭಾರತ ಅಥವ ಪಾಕಿಸ್ತಾನಕೆ ಯವುದಾದರು ಒಂದಕ್ಕೆ ಸೇರಿಕೊಳ್ಳುವ ಇಲ್ಲವೆ ಸ್ವತಂತ್ರ್ಯವಾಗಿ ಉಳಿಯುವ ಸ್ವಾತಂತ್ರ್ಯ ಉಹೊಂದಿದ್ದವು.ಹೀಗಾಗಿ ಅವು ಪ್ರತ್ಯೇಕತೆ ಪ್ರವೃತ್ತಿ ಬೆಳೆಸಿಕೊಂಡವು ಮತ್ತು ಅವು ಬದಲಾದ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಸಾರಿಕೊಂಡವು.ಮುಸ್ಲಿಂ ಲೀಗ್ ನವರು ಈ ರೀತಿಯ ಬೆಳವಣಿಗೆಗೆ ಪ್ರಚೋದನೆ ಇಟ್ಟಿದರು.ದೇಶೀಯ ರಾಜ್ಯಗಳು ಪ್ರತ್ಯೇಕವಾಗಿ ಉಳಿದರಿಂದ ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಒದಗುತ್ತಿತ್ತು.ಆದರೆ ರಾಷ್ಟ್ರ ನಾಯಕರು ಅದಕ್ಕೆ ಅವಕಾಶವನ್ನು ಕೊಡಲಿಲ್ಲ.ದೇಶೀಯ ರಾಜ್ಯಗಳು ಸ್ವತಂತ್ರವಾಗಿ ಉಳಿಯುವುದು ಲಕ್ಷಾಂತರ ಭಾರತೀಯರ ಮೇಲೆ ಯುದ್ಧ ಸಾರಿದಂತೆ ಎಂದು ಗಾಂಧೀಜಿ ಯವರು ಹೇಳಿದ್ದರು.ಅಂತಹ ರಾಜ್ಯಗಳಿಗೆ ಬೆಂಬಲಕೊಡುವ ಯಾವುದೇ ರಾಷ್ಟ್ರವನ್ನು ನಾವು ಮಿತ್ರದ್ರೋಹಿ ಎಂದು ಪರಿಗಣಿಸುವುದಾಗಿ ನೆಹರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಭಾರತದಲ್ಲಿ ಯಾವುದೇ ರಾಜ್ಯ ಸ್ವಾತಂತ್ರ್ಯ ಘೋಷಿಸಿಕೊಂಡು ಭಾರತದ ಚೌಕಟ್ಟಿನೊಳೊಗೆ ಹಾಗೂ ಹೊರಗೆ ಉಳಿಯಲು ಬಿಡುವುದಿಲ್ಲ ಎಂದು ಜೊನ್ ೧೫, ೧೯೪೭ ರಂದು ಸಬೆ ಸೇರಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಂದು ತೀರ್ಮಾನ ತೆಗೆದುಕೊಂಡಿತು.ದೇಶೀಯ ಸಂಸ್ಥಾನಗಳ ವಿಲೀನ ವಲ್ಲಭಭಾಯಿ ಪಟೇಲರು ೧೯೪೭ರ ಸೆಪ್ಟೆಂಬರ್ ೧೩ರಂದು ಎಲ್ಲಾ ದೇಶೀಯ ಸಂಸ್ಥಾನಗಳಿಗೆ ಸುತ್ತೋಲೆ ಕಳುಹಿಸಿ ಅವು ಭರತದ ಒಕ್ಕೂಟಕ್ಕೆ (Instrument of accession)ಕ್ಕೆ ಸಹಿ ಹಾಕಿ ರಕ್ಷಣೆ, ವಿದೇಶಾಂಗ ವ್ಯವಹಾರ ಮತ್ತು ಸಂಪರ್ಕ ವಿಷಯಗಳಲ್ಲಿ ಭಾರತ ಒಕ್ಕೊಟಕ್ಕೆ (Indian union) ಅಧೀನವಾಗುವಂತೆ ಒಪ್ಪಿದ್ದರು.ಜೊತೆಗೆ ಒಕ್ಕೊಟದಿಂದ ಹೊರಗುಳಿಯುವ ರಾಜ್ಯಗಳಿಗೆ ಅಪಾಯವನ್ನು ಎಚ್ಚರಿಸಿದರು.ಭಾರತದ ಒಕ್ಕೊಟಕ್ಕೆ ಸೇರುವ ರಾಜರಿಗೆ ರಾಜಧನ ಕೊಡಲಾಗುವುದೆಂದು ಘೊಷಣೆಮಾಡಿದ್ದರು.ಪಟೇಲರೌ ಕರೆದಂತೆ ಎಲ್ಲಾ ದೇಶೀಯ ಸಂಸ್ಥಾನಗಳು ಭಾರತದ ಒಕ್ಕೊಟ ವಿಲೀನ ಪತ್ರಕ್ಕೆ ಸಹಿ ಹಾಕಿ ಭಾರತ ಒಕ್ಕೊಟ ಸೇರಿಕೊಂಡವು.ಆದರೆ ಜುನಾಗಡ್, ಹೈದರಾಬಾದ್, ಕಾಶೀರ್ ಮತ್ತು ಬೇರೆ ಬೇರೆ ರಾಜ್ಯಗಳು ಭಾರತದ ಒಕ್ಕೊಟದಿಂದ ಹೊರಗುಳಿಯಲು ಬಯಸಿದವು.ಪಟೇಲರು ಅವನ್ನು ಒಕ್ಕೊಟಕ್ಕೆ ವಿಲೀನಗೊಳಿಸಲು ರಕ್ತ ಮತ್ತು ಉಕ್ಕು ನೀತಿಯನ್ನು ಅನುಸರಿಸಬೇಕಾಯಿತು.ಅವನ್ನು ವಿಲೀನಗೊಳಿಸಲು ಪಟೇಲರು ಮಾಡಿದ ಕಾರ್ಯವೈಖರಿ ಇಲ್ಲಿವೆ...
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.