The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜಲಚರ ಸಾಕಣೆ ಎಂಬುದು ಈಜುರೆಕ್ಕೆ ಮೀನು, ಮೃದ್ವಂಗಿಗಳು, ಕಠಿಣಚರ್ಮಿಗಳಂಥ ಸಿಹಿನೀರಿನ ಹಾಗೂ ಉಪ್ಪುನೀರಿನ ಜೀವಿಗಳು ಮತ್ತು ಜಲವಾಸಿ ಸಸ್ಯಗಳ ಸಾಕುವಿಕೆಯಾಗಿದೆ. ಜಲದಲ್ಲಿನ ಕೃಷಿ ಎಂದೂ ಹೆಸರಾಗಿರುವ ಜಲಚರ ಸಾಕಣೆಯು ನಿಯಂತ್ರಿತ ಸನ್ನಿವೇಶಗಳ ಅಡಿಯಲ್ಲಿನ ಜಲವಾಸಿ ಜೀವಿಗಳ ಸಾಕುವಿಕೆ ಅಥವಾ ಬೆಳೆಸುವಿಕೆಯನ್ನು ಒಳಗೊಂಡಿದೆ, ಮತ್ತು ಇದನ್ನು ಸಾಕಿರದ ಮೀನಿನ ಹಿಡಿಯುವಿಕೆಯಾದ ವಾಣಿಜ್ಯ ಮೀನುಗಾರಿಕೆಯೊಂದಿಗೆ ತದ್ವಿರುದ್ಧವಾಗಿ ಪರಿಗಣಿಸಬಹುದಾಗಿದೆ. ವಾಣಿಜ್ಯ ಜಲಚರ ಸಾಕಣೆಯು ಮಾನವರಿಂದ ನೇರವಾಗಿ ಸೇವಿಸಲ್ಪಡುವ ಮೀನು ಮತ್ತು ಚಿಪ್ಪುಮೀನುಗಳ ಪೈಕಿ ಒಂದರ್ಧವನ್ನು ಪೂರೈಸುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿತವಾಗಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆaವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ಶಬ್ದ ಮಾಲಿನ್ಯ (ಅಥವಾ ವಾತಾವರಣದಲ್ಲಿನ ಸದ್ದು) ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ very good ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಡಿಜಿಟಲ್ ಇಂಡಿಯಾ ಒಂದು ಯೋಜನೆ. ಇದರ ಲಕ್ಶ್ಯ ಭಾರತಕ್ಕೆ ವಿಶ್ವದಲ್ಲೇ ಒಂದು ಅತ್ಯುತ್ತಮ ಸ್ಥಾನಮಾನವನ್ನು ನೀಡುವುದಾಗಿದೆ.ಇದರ ಅಭಿಯಾನ ಪ್ರಸಿದ್ದ ಉದ್ಯೊಗಪತಿಗಳ ಸಮ್ಮುಖದಲ್ಲಿ ೧ ಜುಲೈ ೨೦೧೫ ರಂದು ಇಂಧೋರ್ ನ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಶುರುವಾಯಿತು. ಮಾನ್ಯ ಪ್ರಧಾನಿ (ನರೇಂದ್ರ ಮೋದಿ) ಯವರು ಇದರ ಸ್ಥಾಪಕರಾಗಿದ್ದು ಇದಕ್ಕಾಗಿ ಒಂದು ಲಕ್ಷ ಕೋಟಿ ಯನ್ನು ಇದಕ್ಕಾಗಿ ಅನುಮೋದಿಸಿದ್ದಾರೆ.ಇದು ಇವರ ಕನಸಿನ ಕೂಸು ಆಗಿದೆ.ಇದು ೨೦೧೯ ರ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.ಇದು ಸಂಪೂರ್ಣಗೊಂಡಲ್ಲಿ ಭಾರತವು ವಿಶ್ವದಲ್ಲೇ ಸುಪ್ರಸಿದ್ಧವಾಗಲಿದೆ.ಇದು ಭಾರತದ ಕೀರ್ತಿ ಪತಾಕೆಯನ್ನು ಇಡೀ ವಿಶ್ವದಲ್ಲೇ ಹಾರಡಿಸಲಿದೆ ಎಂಬುವುದರಲ್ಲಿ ಇನ್ನೊಂದು ಮಾತಿಲ್ಲ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.