The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ನವೆಂಬರ್ ೧ - ನವೆಂಬರ್ ತಿಂಗಳ ಮೊದಲ ದಿನ, ಮತ್ತು ವರ್ಷದ ೩೦೫ನೇ ದಿನ(ಅಧಿಕ ವರ್ಷದಲ್ಲಿ ೩೦೬ನೇ ದಿನ). ಟೆಂಪ್ಲೇಟು:ನವೆಂಬರ್ ೨೦೧೮ ೧೯೫೬ ರಂದು ಕರ್ನಾಟಕ ಏಕೀಕರಣವಾಯಿತು. ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು.ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ದಿನವನ್ನಾಗಿ ಅಚರಿಸಲಾಗುತ್ತಿದೆ.
Navu namma parisaravannu channagi ettukolla becu ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ. ಮುಂಚೆ ನಮ್ಮ ಬೆಂಗಳೂರು ನಗರ 'ಗಾರ್ಡನ್ ಸಿಟಿ' ಎಂದು ಕರೆಯಲಾಗುತ್ತಿತ್ತು ಆದರೆ ಈಗ 'ಗಾರ್ಬೆಜ್' ಸಿಟಿ ಎಂದು ಕರೆಯಲಾಗುತ್ತಿದೆ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಕಿತ್ತೂರು ಬೆಳಗಾವಿ ಜಿಲ್ಲೆಯ ಒಂದು ಊರು.ಇಂದು ಇದು ಸಣ್ಣ ಗ್ರಾಮವಾಗಿದ್ದರೂ ಹಿಂದೆ ಕನ್ನಡನಾಡಿನ ಮಹಾನಗರಗಳಲ್ಲೊಂದಾಗಿತ್ತು. 12ನೆಯ ಶತಮಾನದಿಂದ ಕಿತ್ತೂರು ಎಂಬ ಹೆಸರು ಬಳಕೆಯಲ್ಲಿದೆ ಬೈಲಹೊಂಗಲದಿಂದ ೨೬ ಕಿಮೀ ದೂರದಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರವಾಡ-ಬೆಳಗಾವಿ ನಡುವೆ ಇದೆ. ೧೨ನೆಯ ಶತಮಾನದ ಹೊತ್ತಿಗೇ ಈ ಊರು ಇದ್ದುದು ಇಲ್ಲಿನ ಬಸವೇಶ್ವರ ದೇವಾಲಯದ ಶಾಸನವೊಂದರಿಂದ ತಿಳಿದುಬರುತ್ತದೆ.