The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಪ್ರಬಂಧ ರಚನೆ - ಅರ್ಥಪೂರ್ಣ ಖಚಿತ ವಾಕ್ಯಗಳ ಮೂಲಕ ವ್ಯಕ್ತಿಯ ಆಲೋಚನೆಗಳನ್ನು ಲಿಖಿತವಾಗಿ ಅಭಿವ್ಯಕ್ತಿಸುವ ಹಾಗೂ ನಿರ್ದಿಷ್ಟ ವಿಷಯಗಳನ್ನು ಕ್ರಮಬದ್ಧ ರೀತಿಯಲ್ಲಿ ಸಮರ್ಪಕವಾಗಿ ನಿರೂಪಿಸುವ ಪರಿ. ಇದು ವ್ಯಾಕರಣದ ಒಂದು ಅಂಗ. ==ಪ್ರಬಂಧಗಳು==amm na baga ಪ್ರಬಂಧ ರಚನೆಯು ಸಾಮಾನ್ಯವಾಗಿ ಲೇಖಕನ ವ್ಯಕ್ತಿತ್ವ ವೈಶಿಷ್ಟ್ಯದಿಂದ ಕೂಡಿದ ಸ್ವತಂತ್ರ ನಿರ್ದಿಷ್ಟ ಲಘು ಬರೆವಣಿಗೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
{{ರಜಾದಿನಗಳು| |holiday_name= ದೀಪಾವಳಿ |color1= #ff9933 |image= Deepavali-haNate.jpg |caption= ಹಬ್ಬದ ಸಂಕೇತವಾದ ದೀಪ |nickname= ದಿವಾಲಿ, ದೀಪಗಳ ಹಬ್ಬ |observedby=ಹಿಂದೂ ಧರ್ಮ, [[sameera gofಜೈನ ಧರ್ಮ ಮತ್ತು ಭೌದ್ಧ ಧರ್ಮಗಳ ಅನುಯಾಯಿಗಳು |date=[[ಕಾರ್ತಿಕ ಮಾಸ|ಕಾರ್ತಿಕ ಮಾಸದ]sameera s kingdom choose s ಅದರ ಎರಡು ದಿನಗಳ ನಂತರ ಮುಗಿಯುತ್ತದೆ. |observances=ಪ್ರಾರ್ಥನೆ, ಪೂಜೆ |celebrations=ಮನೆಗಳ ದೀಪಾಲಂಕಾರ, ಪಟಾಕಿಗಳು, ಕಾಣಿಕೆಗಳು |type=ಧಾರ್ಮಿಕ |longtype=ಧಾರ್ಮಿಕ, ಭಾರತೀಯ |significance=ವಿವಿಧ |date2015=ನವೆಂಬರ್ 12 }} ದೀಪಾವಳಿ (ದೀಪಗಳ ಸಾಲು) ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.