The most-visited ಕನ್ನಡ Wikipedia articles, updated daily. Learn more...
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
hHarihara I Bukka Raya I (Hakka Bukka)13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ನಾಯಕ (ಕುರುಬ/ [ಹಾಲುಮತ]] ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ.
ಟ್ಯೂನ ಮೀನು ಗಳು ಸ್ಕಾಂಬ್ರಿಡೇ ವಂಶಕ್ಕೆ ಸೇರಿದ ಕಡಲನೀರಿನ ಮೀನುಗಳಾಗಿದ್ದು, ಇವು ಬಹುತೇಕವಾಗಿ ಥೂನಸ್ ಕುಲದಲ್ಲಿ ಕಂಡುಬರುತ್ತವೆ. ಟ್ಯೂನ ಮೀನುಗಳು ವೇಗದ ಈಜುಗಾರರಾಗಿವೆ, ಮತ್ತು ಕೆಲವೊಂದು 70 km/h (43 mph)ನಷ್ಟು ವೇಗಗಳಲ್ಲಿ ಈಜುವಷ್ಟು ಸಮರ್ಥವಾಗಿವೆ. ಬಿಳಿ ಮಾಂಸವನ್ನು ಹೊಂದಿರುವ ಬಹುತೇಕ ಮೀನುಗಳಿಗಿಂತ ಭಿನ್ನವಾಗಿ, ಟ್ಯೂನ ಮೀನಿನ ಸ್ನಾಯು ಅಂಗಾಂಶವು ನಸುಗೆಂಪು ಬಣ್ಣದಿಂದ ಗಾಢ ಕೆಂಪು ಬಣ್ಣದವರೆಗೆ ವೈವಿಧ್ಯಮಯವಾಗಿರುತ್ತದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
'ನಿರ್ಮಲಾ ಸೀತಾರಾಮನ್' ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ರಕ್ಷಣಾ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಾರೆ. ಸಿತರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಆಂಧ್ರಪ್ರದೇಶದಿಂದ ರಾಜ್ಯಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಭಾರತದ ಸಾಮಾಜಿಕ -ಧಾರ್ಮಿಕ ಸುಧಾರಣ ಕ್ರಿಯೆಯಲ್ಲಿ ,ಹೆಚ್ಚು ತೊಡಗಿಸಿಕೊಂಡ ಬ್ರಹ್ಮ ಸಮಾಜ ವನ್ನು ೧೮೨೮ ರಲ್ಲಿ ಹುಟ್ಟು ಹಾಕಿದ್ದು, ರಾಜ ರಾಮ್ ಮೋಹನ್ ರೋಯ್ (ಆಗಸ್ಟ್ ೧೪, ೧೭೭೪ – ಸೆಪ್ಟೆಂಬರ್ ೨೭, ೧೮೩೩),ಬ್ರಾಹ್ಮೋ ಸಭಾ ದ ಸಂಸ್ಥಾಪಕರು , (ಜೊತೆಗೆ ದ್ವಾರಕನಾಥ್ ಟ್ಯಾಗೋರ್ ಮತ್ತು ಇತರ ಬೆಂಗಾಲಿ ಬ್ರಾಹ್ಮಣರು ). ರಾಜನೀತಿ , ಸಾರ್ವಜನಿಕ ಆಡಳಿತ ಮತ್ತು ವಿದ್ಯಾಭ್ಯಾಸ ಹಾಗೆ ಧರ್ಮದೊಂದಿಗೆ ,ಅವರ ಪ್ರಭಾವ ಪಾರದರ್ಶಕವಾಗಿತ್ತು. ಹಿಂದೂ ಧರ್ಮದ ಉತ್ತರ ಕ್ರಿಯಾ ಪದ್ಧತಿಯಲ್ಲಿ , ಸತಿಪದ್ಧತಿಯನ್ವಯ ವಿಧವೆಯನ್ನು ಗಂಡಂದಿರ ಅಗ್ನಿ ಚಿತೆಯ ಮೇಲೆ ಬಲವಂತವಾಗಿ ಸುಡುತ್ತಿದ್ದ 'ಸತಿ' ಪದ್ಧತಿಯನ್ನು ರದ್ದು ಮಾಡುವ ಹೋರಾಟದಲ್ಲಿ ಹೆಚ್ಚು ಕ್ರಿಯಾಶಿಳರಾಗಿದ್ದರು.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
Harihara-I (Hakkaraya)13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮನಲ್ಲಿ ದಂಡನಾಯಕರಾಗಿದ್ದ ಹಕ್ಕ-ಬುಕ್ಕರು (ಹರಿಹರ/ಹಕ್ಕರಾಯ ಮತ್ತು ಬುಕ್ಕರಾಯ) ೧೩೩೬ ರಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ಚಾರಿತ್ರಿಕ ದಾಖಲೆಗಳ ಪ್ರಕಾರ ವಿಜಯನಗರದ ಸಂಸ್ಥಾಪಕರಾದ ಹಕ್ಕ ಮತ್ತು ಬುಕ್ಕರು ಕುಮಾರರಾಮನ ಮಾವನ ಮಕ್ಕಳು ಮತ್ತು ಹಿಂದೂ ಧರ್ಮದ ಬಗ್ಗೆ ಅನನ್ಯ ಭಕ್ತಿ ಮತ್ತು ಗೌರವಗಳನ್ನು ಹೊಂದಿದ್ದ [[ಕುರುಬ|(ಹಾಲುಮತ) ಸಮುದಾಯಕ್ಕೆ ಸೇರಿದವರು. ವಿಜಯನಗರದ ಆರಾಧ್ಯ ದೈವ ಈಗಿನ ಹಂಪೆಯ ವಿರೂಪಾಕ್ಷ ಅಥವಾ ಪಂಪಾಪತಿರಾಜ್ಯಧಾನಿ : ವಿಜಯನಗರ ಭಾಷೆ : ಕನ್ನಡ, ತೆಲುಗು ಧರ್ಮ : ಹಿಂದೂ ಆಡಳಿತ : ಚಕ್ರಾಧಿಪತ್ಯ ಸ್ಥಾಪಕರು : ಹಕ್ಕ-ಬುಕ್ಕರು ಸ್ಥಾಪನೆ : ೧೮-೦೪-೧೩೩೬ ರಲ್ಲಿ ವಿಜಯನಗರ ಸಾಮ್ರಾಜ್ಯವು ಆನೆಗುಂದಿಯ ಕುಮುಟ ದುರ್ಗದಲ್ಲಿರುವ ಕನಕಗಿರಿ ಸಾಮ್ರಾಜ್ಯವನ್ನು ೧೮-೦೪-೧೩೩೬ ರಲ್ಲಿ ಸ್ಥಾಪನೆ ಮಾಡಿದರು.