The most-visited ಕನ್ನಡ Wikipedia articles, updated daily. Learn more...
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ರಕ್ಷಣಾ ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಆಂಧ್ರಪ್ರದೇಶದಿಂದ ರಾಜ್ಯಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು .
ಅನ್ನಿ ಬೊಲಿನ್ ([2]ಅಥವಾ[3]);[4](c.1501/1507 - 19 ಮೇ 1536) ಇಂಗ್ಲೇಂಡಿನಲ್ಲಿ 1533 ರಿಂದ 1536ರ ವರೆಗೆ ರಾಣಿಯಾಗಿದ್ದಳು ಹಾಗು ಇಂಗ್ಲೇಂಡಿನ ಹೆನ್ರಿ VIII ರವರ ಎರಡನೆಯ ಹೆಂಡತಿಯಾಗಿದ್ದಳು ಮತ್ತು ಆಕೆಯ ಸ್ವಂತಕ್ಕೆ ಹಾಗು ಆಕೆಯ ಸಂತಾನಕ್ಕು ಆಕೆಯ ಹಕ್ಕಿನಂತೆ ಪೆಂಬ್ರೋಕ್ ನ ಮೊದಲ ಮಾರ್ಕುಯಸ್ ನಾಗಿದ್ದಳು.[5] ಅನ್ನಿಗೆ ಹೆನ್ರಿಯವರ ಮದುವೆ, ಹಾಗು ತರುವಾಯ ಆಕೆಯ ಶಿರಚ್ಛೇದನೆ, ಆಕೆಯನ್ನು ರಾಜಕೀಯ ಹಾಗು ಧರ್ಮನಿಷ್ಠೆಯ ಉತ್ಕ್ರಾಂತಿಯು ಆಕೆಯನ್ನು ಮುಖ್ಯ ಪ್ರತಿಮೆಯಾಗಿ ಮಾಡಿತು ಅದು ಆಂಗ್ಲರ ಸುಧಾರಣೆಗೆ ಆರಂಭವಾಗಿತ್ತು. ತೊಮಸ್ ಬೊಲಿನ್ ಅವರ ಮಗಳು, ವಿಲ್ಟಶೈಯರ್ ನಲ್ಲಿ 1ನೆ ಏರ್ಲ್ ಆಗಿದ್ದಳು ಮತ್ತು ಆತನ ಹೆಂಡತಿಯು ವಿಲ್ಟಶೈಯರ್ ಕೌಂಟೆಸ್ ಆಗಿದ್ದಳು, ಅನ್ನಿ ನೆದೆರ್ಲೇಂಡ್ಸ್ ಹಾಗು ಫ್ರೇನ್ಸ್ ನಲ್ಲಿ ಶಿಕ್ಷಣ ಹೊಂದಿದಳು, ಬಹಳವಾಗಿ ಫ್ರೇನ್ಸ್ ನ ಕ್ಲೌಡೆ ಗೆ ಗಣ್ಯವುಳ್ಳ ಕನ್ಯೆಯಾಗಿದ್ದಳು. ಆಕೆಯು 1522ರಲ್ಲಿ ಇಂಗ್ಲೇಂಡಿಗೆ ಹಿಂದಿರುಗಿದಳು, ಯಾಕೆಂದರೆ ಐರಿಶ್ ಸೋದರಿಯನಾದ ಜೇಮ್ಸ್ ಬಟ್ಲರ್ ರನ್ನು ಮದುವೆಯಾಗಳು, ಆತನು ಒರ್ಮೌಂಡ್ ನ 9ನೆ ಏರ್ಲ್ ನಾಗಿದ್ದನು: ಹಾಗಿದ್ದರೂ, ಮದುವೆಯ ಯೋಜನೆಯು ವಿಫಲದಲ್ಲಿ ಮುಕ್ತಾಯವಾಯಿತು ಮತ್ತು ರಾಣಿಯ ಸಹಭೋಗಿಯಾದ ಅರ್ಗೊನ್ ನಿನ ಕತೆರಿನ್ ಗೆ ಗಣ್ಯವುಳ್ಳ ಕನ್ಯೆಯಾಗಿ ರಾಜಾಸ್ಥಾನದಲ್ಲಿ ಒಂದು ಪದವಿ ದೊರಕಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಮ್ಯಾಕ್ಡೊನಾಲ್ಡ್ಸ್ (ಪಾಸ್ಟ್ಫುಡ್ ರೆಸ್ಟೋರಂಟ್)
ಮ್ಯಾಕ್ಡೊನಾಲ್ಡ್ಸ್ ಕಾರ್ಪೋರೇಶನ್ NYSE: MCD ಇದು, ಪ್ರತಿದಿನ ೫೮ ಮಿಲಿಯನ್ ಗಿರಾಕಿಗಳಿಗೆ ಸೇವೆ ಸಲ್ಲಿಸುತ್ತಿರುವ ಜಗತ್ತಿನ ಹ್ಯಾಂಬರ್ಗರ್ ಪಾಸ್ಟ್ಫುಡ್ ರೆಸ್ಟೋರಂಟ್ಗಳ ದೊಡ್ಡ ಸಮೂಹವಾಗಿದೆ. ಇದರ ಸಿಗ್ನೇಚರ್ ರೆಸ್ಟೊರೆಂಟ್ ಸಮೂಹಕ್ಕೆ ಹೆಚ್ಚುವರಿಯಾಗಿ ಮ್ಯಾಕ್ಡೊನಾಲ್ಡ್ಸ್ ಕಾರ್ಪೋರೇಶನ್, ೨೦೦೮ ರ ವರೆಗೆ ಪ್ರೆಟ್ ಎ ಮ್ಯಾಂಗರ್ನಲ್ಲಿ ಅಲ್ಪ ಪಾಲುದಾರಿಕೆ ಹೊಂದಿತ್ತು ಮತ್ತು ೨೦೦೬ ರ ವರೆಗೆ ಚಿಪೋಟ್ಲ್ ಮೆಕ್ಸಿಕನ್ ಗ್ರಿಲ್ನ ಪ್ರಧಾನ ಹೂಡಿಕೆದಾರರಾಗಿತ್ತು. ಮತ್ತು ೨೦೦೭ ರ ಹೊತ್ತಿಗೆ ಬೋಸ್ಟನ್ ಮಾರುಕಟ್ಟೆಯಲ್ಲಿನ ರೆಸ್ಟೋರಂಟ್ ಸಮೂಹಗಳ ಒಡೆತನ ಹೊಂದಿತು.ಮ್ಯಾಕ್ಡೊನಾಲ್ಡ್ಸ್ ರವರ ರೆಸ್ಟೋರೆಂಟ್, ತಮ್ಮದೇ ಪ್ರತಿನಿಧಿ ಸಂಸ್ಥೆ ಅಥವಾ ಅಂಗ ಸಂಸ್ಥೆಯ ಮೂಲಕ ಅಥವಾ ಖುದ್ದಾಗಿ ಕಾರ್ಯಾಚರಿಸುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಐಸಿಸಿ ಕ್ರಿಕೆಟ್ ವಿಶ್ವ ಕಪ್ ಪುರುಷರ ಅತಿ ಪ್ರತಿಷ್ಠಿತ ಏಕದಿನ ಅಂತರರಾಷ್ಟ್ರೀಯ (ODI) ಕ್ರಿಕೆಟ್ ಪಂದ್ಯಾವಳಿಯಾಗಿದೆ. ಈ ಕ್ರೀಡೆಯ ನಿರ್ವಹಣಾ ಮಂಡಳಿಯಾದ ಅಂತರರಾಷ್ಟ್ರೀಯ ಕ್ರಿಕೆಟ್ ಪರಿಷತ್ (ಐಸಿಸಿ) ಈ ಕ್ರೀಡೆಯನ್ನು ಆಯೋಜಿಸುತ್ತದೆ. ಪ್ರಾಥಮಿಕ ಅರ್ಹತಾ ಸುತ್ತಿನ ಪಂದ್ಯಗಳು ನಡೆದ ನಂತರ, ಅರ್ಹತೆ ಗಳಿಸಿದ ತಂಡಗಳು, ನಾಲ್ಕು ವರ್ಷಗಳಲ್ಲೊಮ್ಮೆ ನಡೆಯುವ ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ೩೧ ಮೆ ಯಂದು ಆಚರಿಸಲಾಗುತ್ತದೆ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು ೧೯೮೭ರ ಇಸವಿಯಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಸರ್ವರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು..೧೯೮೭ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸ೦ಸ್ಥೆಯು ತ೦ಬಾಕು ರಹಿತ ದಿನದ ಆಚರಗೆಯ ಬಗ್ಗೆ ಅದಿನೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸ೦ಸ್ಥೆಯು ಆರೋಗ್ಯದ ದೃಷ್ಟಿಯಿ೦ದ ತ೦ಬಾಕು ನಿಷೇಧ ಬಗ್ಗೆ ಚಿ೦ತನೆಯನ್ನು ಕೈಗೊ೦ಡಿತು.ತ೦ಬಾಕು ಸೇವನೆಯಿ೦ದ ಪ್ರತಿ ವರ್ಷ ಪ್ರಪ೦ಚದಾದ್ಯ೦ತ ಆರು ಮಿಲಿಯ೦ನ್ ಅಷ್ಟು ಜನರು ಮರಣ ಹೊ೦ದುತಿದ್ದಾರೆ. ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ.ಆದುದರಿ೦ದ ಸರ್ಕಾರ ಮನುಷ್ಯನ ಭವಿಶ್ಯದ ಬಗ್ಗೆ ಚಿ೦ತಿಸಿ ತ೦ಬಾಕು ನಿಷೇಧವನ್ನು ಮಾಡುತ್ತಾರೆ.ಭಾರತ ದೇಶದಲ್ಲಿ ಕ್ಯಾನ್ಸರ್ ಹೆತ್ತ ಸೊಸೈಟಿ ರೆಡ್ ಕ್ರಾಸ್ ಸ೦ಸ್ಥೆ,ಯೆನ್ ಜಿ ಒ,ಮು೦ತಾದ ಸ೦ಸ್ಥೆಗಳು ತ೦ಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸ ಗಳನ್ನು,ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ.ಹಾಗೆಯೇ ತ೦ಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸ೦ಸ್ಥೆ ತ೦ಬಾಕು ನಿಯ೦ತ್ರಣ ತೆರೆದಿದೆ. ಇದರ ಮುಖ್ಯ ಉದ್ದೇಶವೆ೦ದರೆ ಒ೦ದು ಸ೦ಪೂರ್ಣ ದಿನ ಅ೦ದು ಘ೦ಟೆಗಳ ಕಾಲ ಯಾವುದೇ ರೀತಿಯ ತ೦ಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.