The most-visited ಕನ್ನಡ Wikipedia articles, updated daily. Learn more...
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ 'ಯೋಗವಿದ್ಯೆಯು' ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ. ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪತಂಜಲಿಯ ಯೋಗಸೂತ್ರಗಳು ಯೋಗದ ಮೂಲಭೂತ ಪಠ್ಯವನ್ನು ರೂಪಿಸುವ ೧೯೬ ಭಾರತೀಯ ಸೂತ್ರಗಳಾಗಿವೆ.ಪತಂಜಲಿ ಮುನಿಯು ೪೦೦ ರ ಆಸುಪಾಸಿನಲ್ಲಿ ಹಳೆಯ ಸಂಪ್ರದಾಯಗಳನ್ನೆಲ್ಲಾ ಅರಿತುಕೊಂಡ ನಂತರ ಯೋಗ ಸೂತ್ರಗಳನ್ನು ಸಂಪಾದಿಸಿರುತ್ತಾರೆ. ಮಧ್ಯಯುಗದಲ್ಲಿ, ಯೋಗವನ್ನು ಹಿಂದೂ ತತ್ವಶಾಸ್ತ್ರದ ಆರು ಸಾಂಪ್ರದಾಯಿಕ ಆಸ್ತಿಕ ಪರಂಪರೆಗಳ ಪೈಕಿ ಒಂದಾಗಿ ಇರಿಸಲಾಗಿತ್ತು. ನಂತರದ ಯೋಗತತ್ವ ಉಪನಿಷತ್ ಪ್ರಕಾರ, ಯೋಗವನ್ನು ನಾಲ್ಕು ರೂಪಗಳಲ್ಲಿ ವಿಭಜಿಸಲಾಗುತ್ತದೆ — ಮಂತ್ರಯೋಗ, ಲಯಯೋಗ, ಹಠಯೋಗ ಮತ್ತು ರಾಜಯೋಗ – ಇವುಗಳಲ್ಲಿ ಕೊನೆಯದು ಅತ್ಯಂತ ಉನ್ನತ ಆಚರಣೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಾಣಾಯಾಮ (ಸಂಸ್ಕೃತ : प्राणायाम prāṇāyāma ) ಸಂಸ್ಕೃತ ಶಬ್ದವಾಗಿದ್ದು, ಪ್ರಾಣಾಯಾಮ ಎಂದರೆ "ಪ್ರಾಣವನ್ನು ಹತೋಟಿಯಲ್ಲಿಡು ಅಥವಾ ಉಸಿರಾಡು" ಎಂದಿದೆ . ಈ ಶಬ್ದವು ಸಂಸ್ಕೃತದ ಎರಡು ಶಬ್ದಗಳಿಂದ ರಚಿಸಲ್ಪಟ್ಟಿದ್ದು, ಪ್ರಾಣ, ಜೀವ ಶಕ್ತಿ, ಅಥವಾ ಮಹತ್ವದ ಶಕ್ತಿ ,ಅದರಲ್ಲಿಯೂ ಮುಖ್ಯವಾಗಿ, ಉಸಿರು, ಮತ್ತು "ಆಯಾಮ", ಮುಂದಕ್ಕೆ ಹಾಕು ಅಥವಾ ಹತೋಟಿಯಲ್ಲಿಡು ಎಂಬುದೇ ಆಗಿದೆ. ಮತ್ತೆ ಬದಲಾಯಿಸಿ ಹೇಳುವುದಾದರೆ 'ಜೀವಶಕ್ತಿಯ ಹಿಡಿತವೇ' ಆಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಐಸಿಸಿ ಕ್ರಿಕೆಟ್ ವಿಶ್ವ ಕಪ್ ಪುರುಷರ ಅತಿ ಪ್ರತಿಷ್ಠಿತ ಏಕದಿನ ಅಂತರರಾಷ್ಟ್ರೀಯ (ODI) ಕ್ರಿಕೆಟ್ ಪಂದ್ಯಾವಳಿಯಾಗಿದೆ. ಈ ಕ್ರೀಡೆಯ ನಿರ್ವಹಣಾ ಮಂಡಳಿಯಾದ ಅಂತರರಾಷ್ಟ್ರೀಯ ಕ್ರಿಕೆಟ್ ಪರಿಷತ್ (ಐಸಿಸಿ) ಈ ಕ್ರೀಡೆಯನ್ನು ಆಯೋಜಿಸುತ್ತದೆ. ಪ್ರಾಥಮಿಕ ಅರ್ಹತಾ ಸುತ್ತಿನ ಪಂದ್ಯಗಳು ನಡೆದ ನಂತರ, ಅರ್ಹತೆ ಗಳಿಸಿದ ತಂಡಗಳು, ನಾಲ್ಕು ವರ್ಷಗಳಲ್ಲೊಮ್ಮೆ ನಡೆಯುವ ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕುಂಡಲಿನಿ ಯೋಗವು ಒಂದು ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಶಿಸ್ತು, ಇದು ರಾಜಯೋಗ, ಶಕ್ತಿ ಯೋಗ, ಭಕ್ತಿ ಯೋಗ, ತಂತ್ರ, ಕ್ರಿಯಾ ಯೋಗ, ಲಯ ಯೋಗ, ನಾದ ಯೋಗ ಮತ್ತು ಯೋಗದ ಬೆನ್ನೆಲುಬಾದ ಪತಂಜಲಿ ಯೋಗ ಸೂತ್ರದ ಶ್ರೇಷ್ಠವಾದ ಶಾರೀರಿಕ ಮತ್ತು ಧ್ಯಾನದ ತಂತ್ರಗಳ ಒಕ್ಕೂಟವಿದೆ. ಕುಂಡಲಿನಿ ಯೋಗವನ್ನು ಜ್ಞಾನದ ಯೋಗ ಎಂದು ಕರೆಯಲಾಗುತ್ತದೆ, ಏಕೆಂದರೆ ಇದು ನೇರವಾಗಿ ಒಬ್ಬ ವ್ಯಕ್ತಿಯ ಮನಸ್ಸಾಕ್ಷಿಯ ಮೇಲೆ ಪ್ರಭಾವ ಬೀರುತ್ತದೆ, ಒಳ ದೃಷ್ಟಿಯನ್ನು ಬೆಳೆಸುತ್ತದೆ, ಆತ್ಮ ಜ್ಞಾನವನ್ನು ಹೆಚ್ಚಿಸುತ್ತದೆ ಮತ್ತು ಪ್ರತಿಯೊಬ್ಬ ಮನುಷ್ಯನಲ್ಲಿ ಹುದುಗಿರುವ ಅಗಾಧವಾದ ಸೃಜನಾತ್ಮಕ ಶಕ್ತಿಯನ್ನು ಬಿಡುಗಡೆಗೊಳಿಸಲು ಅನುವಾಗುತ್ತದೆ.ಕುಂಡಲಿನಿ ಯೋಗವು ವಿಶೇಷವಾಗಿ ಅಭಿವೃದ್ಧಿ ಹೊಂದಿದ ಆಧ್ಯಾತ್ಮ ವಿಜ್ಞಾನ, ಇದು ಅಸ್ಪಷ್ಟವಾದ ಮತ್ತು ಬಹುಸಂಸ್ಕೃತಿಯ ಇತಿಹಾಸವನ್ನು ಹೊಂದಿದೆ, ಹಿಂದು ಸಂಪ್ರದಾಯದ ಪ್ರಕಾರ ಆಧ್ಯಾತ್ಮಿಕ ಗುರುವಿನ ಮಾರ್ಗದರ್ಶನದಲ್ಲಿ ಮೋಕ್ಷವನ್ನು ಪಡೆಯಲು ನಂಬುವ ತಂತ್ರವಾದ ಶಕ್ತಿಪಥ ಇದಾಗಿದೆ. ಮುಖ್ಯವಾಹಿನಿಯ ಪದ್ಧತಿಗಳು ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸಬಹುದು ಎಂಬುದನ್ನು ತೋರಿಸಿವೆ ಅಲ್ಲದೆ ಮೋಕ್ಷವನ್ನು ಯೋಗ್ಯ ಗುರುವಿನ ಮಾರ್ಗದರ್ಶನವನ್ನು ಅನುಸರಿಸುವ ಮೂಲಕ ಮತ್ತು ಯೋಗದ ತಂತ್ರಗಳನ್ನು ಅಭ್ಯಸಿಸುವ ಮೂಲಕ ಹೊಂದಬಹುದು-ಇದರೊಂದಿಗೆ ಮಂತ್ರ, ಪ್ರಾಣ ಮತ್ತು ಉಸಿರಾಟದ ವಿಧಾನಗಳು, ಸಾಧನೆ, ಆಸನ, ಅಭ್ಯಾಸ, ಧ್ಯಾನ ಅಥವಾ ಬರಿಯ ಭಕ್ತಿ ಮತ್ತು ಪ್ರಾರ್ಥನೆಯ ಮೂಲಕವೂ ಮೋಕ್ಷವನ್ನು ಹೊಂದಬಹುದು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಖ==ಪರಿಚಯ== ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ.