The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನ (ಆಂಗ್ಲ:Clean India Mission) ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತು. ↑ "Swachh Bharat campaign should become mass movement: Narendra Modi".
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ವೈಶೇಷಿಕ ದರ್ಶನ-ಒಂದು ವೈಜ್ಞಾನಿಕ ಮುನ್ನೋಟ: ಪ್ರಾಚೀನ ಭಾರತದ ವೈಜ್ಞಾನಿಕ ಮತ್ತು ತಾತ್ವಿಕ ಸಂಪ್ರದಾಯಗಳಲ್ಲಿ ವೈಶೇಷಿಕವೆಂಬುದು ಕೂಡ ಒಂದಾಗಿದೆ.ವೈಶೇಷಿಕ ಸೂತ್ರಗಳನ್ನು ಋಷಿ ಕಾಣಡರವರು ಸೃಷ್ಟಿಸಿದ್ದಾರೆ.ಇದು ಭೌತಿಕ ಶಾಸ್ತ್ರದ ಒಂದು ಗ್ರಂಧವಾಗಿದೆ.ಈ ಸೂತ್ರಗಳು ಪ್ರಕೃತಿನಲ್ಲಿನ ವಸ್ತುಪ್ರಪಂಚದ ಬಗ್ಗೆ,ಅದರ ಸಂಯೋಜನೆಯ ಬಗ್ಗೆ ವಿವರಿಸಿದವು; ಮತ್ತು ವಸ್ತುಗಳಲ್ಲಿ ಇರುವ ಅಣು ಎಂಬ ಪದಾರ್ಥದ ಬಗ್ಗೆ ಮೊದಲ ಬಾರಿ ಪರಿಕಲ್ಪನೆ ಮಡಿದವು, ವಸ್ತುವಿನ ಪ್ರಪಂಚಕ್ಕೆ ಅಣು ಮೂಲಭೂತ ಕಾರಣವೆಂಬುದನ್ನು ತೀರ್ಮಾನಿಸಿದವು.ಮನಸ್ಸು-ಮೆದಳುನಿಂದ ಸಂಭಾವ್ಯವಾಗುವ ವಾಸ್ತವಿಕ ಸತ್ಯಗಳಕ್ಕೆ ಒಂದು ಸೈದ್ಧಾಂತಿಕ ಸ್ವರೂಪವನ್ನು ರಚಿಸಿದರು.ಸಮಯವನ್ನು ಮತ್ತು ಅದರ ಚರ್ಯೆಗಳನ್ನು ತಿಳಿದುಕೊಳ್ಳಲು ಬೇಕಾದ ಭೂತ-ಭವಿಷ್ಯ-ವರ್ತಮಾನ ಎಂಬ ಕಾಲ ವಿಂಗಡನೆಯಲ್ಲಿ ವೀಕ್ಷಕರ ಪ್ರಾಧಾನ್ಯತೆಯ ಬಗ್ಗೆ ಈ ಸೂತ್ರಗಳಲ್ಲಿ ಜ್ಞಾನ ಲಭ್ಯವಾಗಿದೆ.ವಿಶ್ವದ ಕೊಣೆ-ಕೋಣೆಯಲ್ಲಿರುವ ಪದಾರ್ಥಗಳ ಬಗ್ಗೆ ಮತ್ತು ಕಾಲಚಕ್ರ-ವಿಶ್ವದ ಮೇಲೆ ಅದರ ಪ್ರಭಾವದ ಕುರಿತು ಮಾಹಿತಿ,,ಆ ವಸ್ತುಗಳ ಅವಲೋಕನೆಯ ಮೂಲಕ ಈ ಸೂತ್ರಗಳಲ್ಲಿ ದೊರೆಯುತ್ತದೆ.ಈ ಬ್ರಹ್ಮಾಂಡವು ಅಂತ್ಯ ಸ್ಥಿತಿಯನ್ನು ತಲುಪಿದಾಗ,ಅದರ ಪದಾರ್ಥವೆಲ್ಲವು,ಅಂದರೆ ಅಣುಗಳೆಲ್ಲವೂ, ಸಹ ನಾಶ ಆಗುವುದಿಲ್ಲ,ಅವು ಒಂದು ನಿಶ್ಚಲ ಮತ್ತು ನಿಶ್ಚೀಷ್ಟ ಸ್ಥಾನಕ್ಕೆ ಬರುತ್ತದೆ,ಹೀಗೆ ಅದು ಒಂದು ಅಗೋಚರ ವಸ್ತು ಆಗುತ್ತದೆ, ಎಂಬುದನ್ನು ಈ ಸೂತ್ರಗಳಲ್ಲಿ ವಿಚಾರಿಸಿದರು.ಮಾನವನು, ತಾನು ಈ ವಿಶ್ವದ ಕುರಿತು, ತುಲನೆ ಮತ್ತು ವ್ಯತ್ಯಾಸ ಮಡುವುದರಿಂದ ಸಂಗ್ರಹಿಸಬಹುದಾದ ಎಲ್ಲಾ ಸಮಾಚಾರವನ್ನು,ಹೀಗೆ ತಯಾರಾಗಿದ್ದ ಮಾಹಿತಿಯನ್ನು ಪರಿಕಲ್ಪಿಸಬಹುದಾದ ಮತ್ತು ವ್ಯಾಖ್ಯಾನಿಸಬಹುದಾದ ಜ್ಞಾನವನ್ನು ಶೋಧಕ ಮಾಡುವುದರ ಸಾಧಕಗಳನ್ನು ವೈಶೇಷಿಕ ಸೂತ್ರಗಳೆಂದು ಕರೆಯಳಾಗಿದೆ. ಮನಸ್ಸಿನ ಮತ್ತು ಇಂದ್ರಿಯಗಳ ಮೂಲಕ ಪ್ರಕೃತಿಯ ವಿವಿಧ ಘಟಕಗಳ ಬಗ್ಗೆ ತಿಳಿದುಕೊಳ್ಳುವುದಕ್ಕೆ ವೀಕ್ಷಕನು ಈ ವಿಶ್ವದಲ್ಲಿ ಕೇಂದ್ರ ಪಾತ್ರ ವಹಿಸುತ್ತನೆ.ನೈಸರ್ಗಿಕ ಚಟುವಟಿಕೆಗಳನ್ನು ಒಂದು ತಾರ್ಕಿಕ,ವೈಜ್ಞಾನಿಕ ಮತ್ತು ತಾತ್ವಿಕ ರೂಪದಲ್ಲಿ, ಮತ್ತು ಅಕಾಶದ ನಿಗೂಢತೆಯನ್ನು ಸಂಕ್ಷಿಪ್ತವಾಗಿ ಒಂದು ಸೈದ್ಧಂತಿಕ ನೆಲಮಟ್ಟಿನಲ್ಲಿ ಚರ್ಚಿಸಿದವು,ಇದರಿಂದ ಇದು ಒಂದು ದರ್ಶನವಾಗಿದೆ.ದೃಷ್ಟಿ-ಸೃಷ್ಟಿಯ ನಡುವುನ ಆಂತರಂಗಿಕ ಸಂಬಂಧವನ್ನು ಈ ಸೂತ್ರಗಳಲ್ಲಿ ಒತ್ತಾಯಿಸಲಾಗಿದೆ.ಏಕಕಾಲದಲ್ಲಿ ಮನಸ್ಸನ್ನು ಮತ್ತು ಬಾಹ್ಯ ಭೌತಿಕ ಪ್ರಪಂಚವನ್ನು ಒಂದು ವೈಜ್ಞಾನಿಕ ದೃಷ್ಟಿಯಿಂದ ವಿವರಿಸುವುದು ಈ ಕೃತಿಯ ಪ್ರತ್ಯೇಕತೆಯಾಗಿದೆ.ಪ್ರಕೃತಿ ಒಳಗೆ ಇರುವ ಪದಾರ್ಥಗಳನ್ನು ಅದರ ಅಸ್ತಿತ್ವದ ಮೂಲಕ, ಅದರ ಚಲನದ ಮೂಲಕ, ಋಷಿ ಕಾನಡರವರು ಆ ವಸ್ತುವಿನ ಲಕ್ಷಣದ ಪ್ರಕಾರ,ಕೆಲವು ಗುಣಗಳನ್ನು,ರೂಪ,ರಸ,ಗಂಧ,ಸ್ಪರ್ಶ ಮುಂತಾದವುಗಳಂತಹ ಆ ಗುಣಗಳು ಪದಾರ್ಥದ ಮೇಲೆ ತೋರಿಸುವ ಪರಿಣಾಮವನ್ನು, ಪಟ್ಟಿ ಮಾಡಿದರು ಮತ್ತು ಆ ವಸ್ತುವಿನ ನಿರ್ದಿಷ್ಟ ವರ್ತನೆಗೆ ಸೂಚಕಗಳನ್ನು ನೀಡಿದರು. ಮತ್ತು ಈ ಗುಣಗಳನ್ನು ಅರ್ಥಮಾಡಿಕೊಳ್ಳಲು ೯ ದ್ರವ್ಯಗಳೆಂಬ ಪದಾರ್ಥಗಳ ಪರಿಕಲ್ಪನೆಯ ಅವಶ್ಯಕತೆ ಇದೆ ಎಂದು ಈ ಸೂತ್ರಗಳು ತಿಳಿಸುತ್ತದೆ.ಈ ೯ ದ್ರವ್ಯಗಳಲ್ಲಿ ಮೂಖ್ಯವಾದ ಆಕಾಶಕ್ಕೆ ಸಹ ಒಂದು ಗುಣ ಮತ್ತು ಅದರ ಚಲನಕ್ಕೆ ಬೇಕಾದ ಉಗಮದ ಬಗೆಗಿನ ವಿಚಾರ, ಮತ್ತು ಈ ಆಕಾಶಕ್ಕೆ ಒಂದು ಖಚಿತವಾದ,ಸ್ವಾತಂತ್ರ್ಯವಾದ ಇರುವಿಕೆ ಇದೆ ಎಂಬ ಸಂಗತಿ ಇಲ್ಲಿ ಪ್ರತಿಬಿಂಬಿಸುತ್ತದೆ.ಪ್ರತಿಯೊಂದು ದ್ರವ್ಯಕ್ಕೂ ಸಹ ಒಂದು ಲಿಂಗ,ಅಂದರೆ ವಿಶ್ವದ ಗುಣಗಳನ್ನು ತಾದಾತ್ಮ್ಯಗೊಳಿಸಲು ಒಂದು ಗುರುತು,ಇದೆ.ಈ ಲಿಂಗಗಳಿಗೆ ಅಥವಾ ಗುರುತುಗಳಿಗೆ, ಕೆಲವು ಅನನ್ಯವಾದ ಗಣಗಳಿರುತ್ತೆ ಎಂದು ಋಷಿ ಕಾನಡರವರು ಹೀಳಿದ್ದಾರೆ.ಈ ೯ ದ್ರವ್ಯಗಳ ವಿವರಣೆ ಹೀಗೆ ಇದೆ, ಅವು ಪೃಥ್ವಿ, ಆಪಸ್ಸ್, ತೇಜಸ್ಸ್, ವಾಯು,ಆಕಾಶ,ಕಾಲ,ದಿಕ್ಕು,ಆತ್ಮ ಮತ್ತು ಮನಸ್ಸು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಊಟಿ ಯು, ( உதகமண்டலம் ) pronunciation ಊಟಕಮಂಡ್ ಗಿರುವ pronunciation ಸಣ್ಣ ಹೆಸರು, (ಅಧಿಕೃತವಾಗಿ ಉದಗಮಂಡಲಂ (ತಮಿಳು:உதகமண்டலம்) ಕೆಲವೊಮ್ಮೆ ಸಂಕ್ಷಿಪ್ತವಾಗಿ ಉಧಗೈ ತಮಿಳು: உதகை ಎಂದೂ ಕರೆಯಲಾಗುತ್ತದೆ) ಒಂದು ನಗರ, ಮುನ್ಸಿಪಾಲಿಟಿ ಮತ್ತು ಭಾರತದ ತಮಿಳುನಾಡು ರಾಜ್ಯದ ನೀಲಗಿರಿ ಜಿಲ್ಲೆಯ ಜಿಲ್ಲಾ ರಾಜಧಾನಿಯಾಗಿದೆ. ಊಟಕಮಂಡ್ ನೀಲಗಿರಿ ಬೆಟ್ಟಗಳಲ್ಲಿರುವ ಒಂದು ಪ್ರಸಿದ್ಧ ಗಿರಿಧಾಮವಾಗಿದೆ. ಉದಗಮಂಡಲಂ ಎಂಬುದು ಈ ನಗರಕ್ಕಿರುವ ಅಧಿಕೃತ ತಮಿಳು ಹೆಸರಾಗಿದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಕಿಪೀಡಿಅ [ಇಂಗ್ಲಿಷ್: Wikipedia ವಿಕಿಪೀಡಿಅ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್^ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.