The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:पञ्चतन्त्र(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸಾಮ್ರಾಟ್ ಅಶೋಕ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ(ಕ್ರಿ.ಪೂ ೩೦೪ - ಕ್ರಿ.ಪೂ ೨೩೨) . ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ಕಳಿಂಗ ಯುದ್ಧದ ಬಳಿಕ ಬೌದ್ಧ ಮತವನ್ನು ಪ್ರಚಾರಗೊಳಿಸುವುದರಲ್ಲಿ ತೊಡಗಿಕೊಂಡ ಸಾಮ್ರಾಟ್ ಅಶೋಕ, ವಿಶ್ವದೆಲ್ಲೆಡೆ ಬೌದ್ಧ ಮತ ಹರಡುವಲ್ಲಿ ಪ್ರಮುಖ ಪಾತ್ರವಹಿಸಿದವನು.'ಅಶೋಕ' ಶಬ್ಧಕ್ಕೆ - ಸಂಸ್ಕೃತದಲ್ಲಿ ಶೋಕವಿಲ್ಲದ ಎಂಬರ್ಥವಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವರ್ಗೀಸ್ ಕುರಿಯನ್ (ನವೆಂಬರ್ ೨೬, ೧೯೨೧ - ಸೆಪ್ಟೆಂಬರ್ ೯, ೨೦೧೨) ಅಮುಲ್ ಡೈರಿ ಸಂಸ್ಥೆಯ ಸ್ಥಾಪಕರು ಮತ್ತು ಭಾರತದಲ್ಲಿ ಆಪರೇಶನ್ ಫ್ಲಡ್ ಎಂಬ ಹೆಸರಿನ ಕ್ಷೀರಕ್ರಾಂತಿಯ ಪ್ರಮುಖ ಪಾತ್ರಧಾರಿ. ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF)ದ ಸಂಸ್ಥಾಪಕ ಅಧ್ಯಕ್ಷರಾಗಿ , ಕುರಿಯನ್ ಅವರು ಅಮುಲ್ ಡೈರಿ ಉತ್ಪನ್ನಗಳ ಬ್ರಾಂಡ್ ನ ಸೃಷ್ಟಿ ಮತ್ತು ಯಶಸ್ಸಿಗೆ ಕಾರಣರಾದವರು. ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದಲ್ಲಿ ಅವರ ಸಾಧನೆ ಕಂಡು ರಾಷ್ಟ್ರೀಯ ಮಟ್ಟದಲ್ಲಿ ನ ಅಮುಲ್ ಯಶಸ್ಸನ್ನು ಪುನರಾವರ್ತಿಸಲು, ೧೯೬೫ ರಲ್ಲಿ ಅವರನ್ನು ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ(NDDB) ಯ ಸ್ಥಾಪಕ ಅಧ್ಯಕ್ಷರನ್ನಾಗಿ ನೇಮಿಸಿದರು.
ಕಾಮನ್ವೆಲ್ತ್ ಕ್ರೀಡೆಗಳು ೧೯೩೦ರಲ್ಲಿ ಪ್ರಾರಂಭವಾಗಿ ಪ್ರತೀ ನಾಲ್ಕು ವರ್ಷಕ್ಕೆ ಒಮ್ಮೆ ನಡೆಯುವ ಕ್ರೀಡಾ ಕಾರ್ಯಕ್ರಮ. ಇದು ಜಗತ್ತಿನಲ್ಲಿ ಒಲಂಪಿಕ್ ಕ್ರೀಡಾಕೂಟ ಮತ್ತು ಏಷಿಯನ್ ಗೇಮ್ಸ್ ಗಳನ್ನು ಹೊರತು ಪಡಿಸಿದರೆ ಮೂರನೆಯ ಅತಿ ದೊಡ್ಡ ಕ್ರೀಡಾ ಕೂಟ.ಇದು ಹಿಂದೆ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳು ಹಾಗೂ ಈಗಲೂ ಬ್ರಿಟಿಷ್ ಆಡಳಿತಕ್ಕೆ ಒಳಪಟ್ಟ ದೇಶಗಳಿಗೆ ಸೀಮಿತವಾಗಿದೆ. ಈ ಕಾರ್ಯಕ್ರಮದಲ್ಲಿ ಕಾಮನ್ವೆಲ್ತಿನ ೫೫ ದೇಶಗಳು ಭಾಗವಹಿಸುತ್ತವೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.