The most-visited ಕನ್ನಡ Wikipedia articles, updated daily. Learn more...
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪರಾವಲಂಬಿ ಜೀವಿಶಾಸ್ತ್ರ(ಪ್ಯಾರಸೈಟಾಲಜಿ)
ಪರಾವಲಂಬಿ ಜೀವಿಶಾಸ್ತ್ರ(ಪ್ಯಾರಸೈಟಾಲಜಿ) ಎಂದರೆ ಪರಾವಲಂಬಿ ಜೀವಿಗಳ ಕುರಿತು, ಅವುಗಳು ಅವಲಂಬಿಸುವ ಪೋಷಕ ಜೀವಿಗಳು ಹಾಗೂ ಅವುಗಳ ನಡುವೆ ಇರುವಂಥ ಸಂಬಂಧದ ಕುರಿತಾಗಿರುವ ಅಧ್ಯಯನ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅರ್ಕಿಮಿಡೀಸ್ (Archimedes of Syracuse, ಗ್ರೀಕ್: Ἀρχιμήδης) (ಕ್ರಿ.ಪೂ 287 – ಕ್ರಿ.ಪೂ 212) ಎಂಬಾತನು ಗ್ರೀಕ್ ನ ಗಣಿತಜ್ಞ,ಭೌತಶಾಸ್ತ್ರಜ್ಞ, ಯಂತ್ರಶಿಲ್ಪಿ (ಎಂಜಿನಿಯರ್), ಆವಿಷ್ಕರ್ತ ಹಾಗು ಖಗೋಳ ವಿಜ್ಞಾನಿ. ಇವನ ಜೀವನದ ಬಗ್ಗೆ ಅತ್ಯಲ್ಪ ಮಾಹಿತಿಯಿದೆಯಾದರೂ, ಈತನನ್ನು ಪ್ರಾಚೀನ ಕಾಲದ ವಿಜ್ಞಾನಿಗಳಲ್ಲಿ ಪ್ರಮುಖನೆಂದು ಭಾವಿಸಲಾಗಿದೆ. ಭೌತಶಾಸ್ತ್ರದ ಪ್ರಗತಿಯಲ್ಲಿ ಸ್ಥಾಯಿಜಲಶಾಸ್ತ್ರ (hydrostatics), ಸ್ಥಾಯಿಶಾಸ್ತ್ರ (statics) ಮತ್ತು ಸನ್ನೆಕೊಲಿನ ನಿಯಮಗಳನ್ನು ಪ್ರತಿಪಾದಿಸಿದನು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ವಿಕಿಪೀಡಿಅ [ಇಂಗ್ಲಿಷ್: Wikipedia ವಿಕಿಪೀಡಿಅ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್^ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿತವಾಗಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.