The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ರಾಘವಾಂಕ ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು.
ತಂತ್ರಜ್ಞಾನವು ಒಂದು ಜೀವಜಾತಿಯಿಂದ ಉಪಕರಣಗಳು ಹಾಗೂ ಕುಶಲಕರ್ಮಗಳ ಬಳಕೆ ಮತ್ತು ಜ್ಞಾನಕ್ಕೆ ಸಂಬಂಧಿಸಿರುವ, ಮತ್ತು ಒಂದು ಜೀವಜಾತಿಯ ಪರಿಸರವನ್ನು ನಿಯಂತ್ರಿಸಲು ಹಾಗೂ ಅದಕ್ಕೆ ಹೊಂದಿಕೊಳ್ಳಲು ಜೀವಜಾತಿಯ ಸಾಮರ್ಥ್ಯದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆಂಬುದನ್ನು ತಿಳಿಸುವ ಒಂದು ವಿಶಾಲವಾದ ಪರಿಕಲ್ಪನೆಯಾಗಿದೆ. ಆದರೆ, ಒಂದು ನಿಖರವಾದ ವ್ಯಾಖ್ಯಾನ ಸಾಧ್ಯವಿಲ್ಲ; "ತಂತ್ರಜ್ಞಾನವು" ಮಾನವಕುಲಕ್ಕೆ ಉಪಯುಕ್ತವಾಗಿರುವ ಯಂತ್ರಗಳು, ಯಂತ್ರಾಂಶ ಅಥವಾ ಗೃಹೋಪಕರಣಗಳಂತಹ ಭೌತಿಕ ವಸ್ತುಗಳನ್ನು ನಿರ್ದೇಶಿಸಬಹುದು, ಆದರೆ, ವ್ಯವಸ್ಥೆಗಳು, ಸಂಘಟನೆಯ ವಿಧಾನಗಳು, ಮತ್ತು ತಂತ್ರಗಳ ಸಹಿತ ಹೆಚ್ಚು ವಿಶಾಲವಾದ ವಿಷಯಗಳನ್ನೂ ಒಳಗೊಳ್ಳಬಹುದು.
ಪ್ರತಿವರ್ಷದಂತೆ ವರ್ಷ ೨೦೦೯ ರ, ಕಾರ್ತೀಕ ಮಾಸದ ಕೊನೆಯ ಸೋಮವಾರ, ನವೆಂಬರ್, ೧೬ ರಂದು, ಸುಂಕೇನ ಹಳ್ಳಿ ಎಂದು ಕರೆಯಲಾಗುತ್ತಿದ್ದ, 'ಬೆಂಗಳೂರಿನ ಬಸವನಗುಡಿ'ಯಲ್ಲಿ ಪಾರಂಪಾರಿಕ 'ಕಡಲೆಕಾಯಿ ಪರಿಷೆ' ನಡೆಯಿತು. ಸೋಮವಾರ, ನವೆಂಬರ್, ೧೬ ಬೆಳಿಗ್ಯೆ, ೧೦ ಗಂಟೆಗೆ, ಸಂಸದ ಶ್ರೀ.ಅನಂತಕುಮಾರ್ ಮತ್ತು ಸಾರಿಗೆ ಸಚಿವ, ಆರ್.ಅಶೋಕ್, ಮಾಜಿ ಸಂಸದ, ಶ್ರೀ. ವಿ.ಎಸ್.ಕೃಷ್ಣ ಅಯ್ಯರ್ ರವರುಗಳು ಈ ಜಾತ್ರೆಗೆ ಚಾಲನೆ ನೀಡಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ
ಇಸ್ರೋ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ಣಾಟಕ) ಮತ್ತು ಶ್ರಿಹರಿಕೋಟ (ಆಂದ್ರಪದೆಶ) ಗಳಲ್ಲಿ ಇವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.