The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಿಯಲ್ ಎಸ್ಟೇಟ್ ಒಂದುಕಾನೂನು ಪದ( ಯುಎಸ್ ಎ ,ಯುನೈಟೆಡ್ ಕಿಂಗಡಮ್, ಕೆನಡಾ,ಆಸ್ಟ್ರೇಲಿಯಾ ಮತ್ತು ಬಹಮಾಸ್ ಗಳಲ್ಲಿದ್ದಂತೆ ಕೆಲವು ಕಾರ್ಯವ್ಯಾಪ್ತಿ ಹೂಂದಿದೆ ) ಪರಿಮಿತ ವ್ಯಾಪ್ತಿಯಲ್ಲಿ ಭೂಮಿಯ ಅಭಿವೃದ್ದಿಯೂ ಸೇರಿರುತ್ತದೆ. ಭೂಮಿಗೆ ಹೊಂದಿಕೂಂಡಂತಿರುವ ಅಭಿವೃದ್ದಿ ಅಂದರೆ ಕಟ್ಟಡಗಳು, ಬೇಲಿಗಳು, ಬಾವಿಗಳು ಇತ್ಯಾದಿ -- immovable. ರಿಯಲ್ ಎಸ್ಟೇಟ್ ಕಾನೂನು ನಿರ್ದಿಪ್ಷ್ಟ ಕಾರ್ಯವ್ಯಾಪ್ತಿಯಲ್ಲಿ ಬರುವ ವ್ಯವಹಾರಗಳನ್ನು ಕಾನೂನು ಬದ್ಧ ಹಾಗೂ ಕ್ರಮಬದ್ಧಗೂಳಿಸುತ್ತದೆ.ಹಾಗೂ ಇದು ವಾಣಿಜ್ಯ ಮತ್ತು ವಾಣಿಜ್ಯೇತರ ಆಸ್ತಿ ವ್ಯವಹಾರಗಳನ್ನು ಕಾನೂನುವ್ಯಾಪ್ತಿಯಲ್ಲಿ ನಿರ್ವಹಿಸುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕಪ್ಪು ಕುಳಿ ಬಾಹ್ಯಾಕಾಶದ ಪ್ರದೇಶವಾಗಿದ್ದು, ಅದರಿಂದ ಬೆಳಕು ಸೇರಿದಂತೆ ಯಾವುದೂ ತಪ್ಪಿಸಿಕೊಂಡು ಹೋಗುವುದು ಸಾಧ್ಯವಾಗುವುದಿಲ್ಲ. ಇದು ತೀರಾ ಸಾಂದ್ರೀಕೃತ ದ್ರವ್ಯರಾಶಿಯಿಂದ ಉಂಟಾದ ಸ್ಪೇಸ್ಟೈಮ್(ದೇಶ-ಕಾಲ)(ದೇಶದ ಮೂರು ಆಯಾಮ ಮತ್ತು ಕಾಲದ ಒಂದು ಆಯಾಮದ ಕಲ್ಪನೆ) ರೂಪವಿಕೃತಿಯ ಫಲಿತಾಂಶವಾಗಿದೆ. ಕಪ್ಪು ಕುಳಿಯ ಸುತ್ತ ಗುರುತಿಸಲಾಗದ ಹೊರಮೈಯಿದ್ದು, ಇದು ಹಿಂತಿರುಗಲಾರದ ಬಿಂದುವನ್ನು ಸಂಕೇತಿಸುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಭೌತಶಾಸ್ತ್ರದಲ್ಲಿ ಯವುದೇ ಒಂದು ವಸ್ತುವಿನ ಚಲನಶಕ್ತಿಯು ಆ ವಸ್ತುವಿನ ಚಲನೆ ಅಥವಾ ಗತಿಯಿಂದ ಪಡೆಯುವಂತ ಶಕ್ತಿಯಾಗಿರುತ್ತದೆ. ಚಲನಶಕ್ತಿಯು ಒಂದು ವಸ್ತುವನ್ನು ನಿಶ್ಚಲ ಸ್ತಿತಿಯಿಂದ ಗೊತ್ತಾದ ವೇಗಕ್ಕೆ ವೇಗೋತ್ಕರ್ಷಗೊಳಿಸಲು ಮಾಡಬೇಕಾಗುವ ಕೆಲಸ ಎಂದು ವ್ಯಾಖ್ಯಾನಿಸಲಾಗಿದೆ. ವೇಗೋತ್ಕರ್ಷಗೊಂಡಾಗ ಪಡೆದಿರುವಂತಹ ಶಕ್ತಿಯನ್ನು, ಆ ವಸ್ತುವು ತನ್ನ ವೇಗ ಬದಾಲಯಿಸುವವರೆಗೂ ಉಳಸಿಕೊಂಡಿರುತ್ತದೆ.
೨೦೧೫ನೇ ಸಾಲಿನ ನೊಬೆಲ್ ಪ್ರಶಸ್ತಿಗಳು
೨೦೧೫ನೇ ಸಾಲಿನ ನೊಬೆಲ್ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು,ಡಿಸೆಂಬರ್ ೧೦, ೨೦೧೫ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ವರ್ಷದ ವಿವಿಧ ಕ್ಷೇತ್ರಗಳ ನೊಬೆಲ್ ವಿಜೇತರ ವಿವರ ಹಾಗೂ ಅವರ ಸಾಧನೆಗಳ ಬಗ್ಗೆ ಒಂದು ಕಿರು ನೋಟ ಇಲ್ಲಿದೆ.
ಮೈಕ್ರೋಸಾಫ್ಟ್ ಅಮೆರಿಕದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಗಣಕಯಂತ್ರ ತಂತ್ರಜ್ಞಾನ ಸಂಸ್ಥೆ. ಗಣಕಯಂತ್ರ, ಮೊಬೈಲ್ ಫೋನ್ ಮತ್ತಿತರ ಸಾಧನಗಳಲ್ಲಿ ಉಪಯೋಗಿಸಬಹುದಾದ ವಿವಿಧ ರೀತಿಯ ತಂತ್ರಾಂಶಗಳನ್ನು ಈ ಸಂಸ್ಥೆ ವಿಕಸನಗೊಳಿಸಿ ಮಾರಾಟ ಮಾಡುತ್ತದೆ. ಇದರ ಅತ್ಯಂತ ಯಶಸ್ವಿ ತಂತ್ರಾಂಶಗಳೆಂದರೆ ವಿಂಡೋಸ್ ಕಾರ್ಯಾಚರಣ ವ್ಯವಸ್ಥೆ ಮತ್ತು ಮೈಕ್ರೋಸಾಫ್ಟ್ ಆಫೀಸ್ ಗುಂಪಿನ ತಂತ್ರಾಂಶಗಳು.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಕ್ವಾಂಟಮ್ ಯಂತ್ರಶಾಸ್ತ್ರದ ಪ್ರವೇಶಿಕೆ
ದ್ರವ್ಯ ಮತ್ತು ಶಕ್ತಿಯ ಸವಿಸ್ತಾರವಾದ ವಿವರಣೆ ಹಾಗೂ ವಿಶೇಷವಾಗಿ ಪರಮಾಣುವಿನ ಪ್ರಮಾಣದಲ್ಲಿ ನಡೆಯುವ ಘಟನೆಗಳ ವಿವರಣೆಯನ್ನು ಕ್ವಾಂಟಮ್ ಯಂತ್ರಶಾಸ್ತ್ರವೆನ್ನುತ್ತಾರೆ.
ಮಾನವನ ಕಣ್ಣು ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಪ್ರಜ್ಞಾತ್ಮಕ ಜ್ಞಾನೇಂದ್ರಿಯವಾಗಿರುವ ಕಣ್ಣು, ದೃಷ್ಟಿಗೆ ಅವಕಾಶ ನೀಡುತ್ತದೆ. ಅಕ್ಷಿಪಟದಲ್ಲಿರುವ ರಾಡ್(ಕಣ್ಣಿನ ಪಾಪೆಯ ದಂಡ) ಮತ್ತು ಕೋನ್ (ಅಕ್ಷಿಪಟದಲ್ಲಿರುವ ಶಂಕುವಿನಾಕಾರದ ರಚನೆ) ಕೋಶಗಳು, ವಿವಿಧ ಬಣ್ಣಗಳು ಮತ್ತು ಅವುಗಳ ಗಾಢತೆಯನ್ನು ಗ್ರಹಿಸುವುದು ಸೇರಿದಂತೆ ಜಾಗೃತ ಬೆಳಕಿನ ಗ್ರಹಿಕೆ ಮತ್ತು ದೃಷ್ಟಿಗೆ ಅವಕಾಶ ಕಲ್ಪಿಸುತ್ತದೆ.
'ಎನ್.ಆರ್.ನಾರಾಯಣ ಮೂರ್ತಿ'ಯೆಂದು ಪ್ರಸಿದ್ಧರಾದ, ನಾಗವಾರ ರಾಮರಾವ್ ನಾರಾಯಣಮೂರ್ತಿ ಕರ್ನಾಟಕದ ಮತ್ತು ಭಾರತದ ಉದ್ಯಮಿ ಹಾಗು ಹೆಸರಾಂತ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದಇನ್ಫೋಸಿಸ್ನ ಸಂಸ್ಥಾಪಕ. ಸುಮಾರು ಇಪ್ಪತ್ತು ವರ್ಷಗಳ ಕಾಲ ಆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ನಿರ್ವಹಿಸಿದ ಇವರು, ಈಗ ಇನ್ಫೋಸಿಸ್ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ, ಹಾಗು ಹಿತಚಿಂತಕ ಅಧಿಕಾರಿಯಾಗಿದ್ದಾರೆ. ಭಾರತವು ವಿಶ್ವ ಮಾಹಿತಿ ತಂತ್ರಜ್ಞಾನ ಭೂಪಟದಲ್ಲಿ ಪ್ರಕಟವಾಗುವಂತೆ ಮಾಡಿದವರಲ್ಲಿ ಅಗ್ರಜರು ಎಂದು ಕರೆಯಲ್ಪಡುವ ಇವರು, ಹಲವಾರು ಉದ್ಯಮ ಸಂಸ್ಥೆಗಳು ಸರ್ಕಾರಿ ಸಂಸ್ಥೆಗಳು ಮತ್ತು ಉನ್ನತ ವಿದ್ಯಾಸಂಸ್ಥೆಗಳ ನಿರ್ವಾಹಕ ಮಂಡಳಿಗಳ ಸದಸ್ಯರಾಗಿದ್ದಾರೆ.
5S ಎನ್ನುವುದು ಕೆಲಸದ ಜಾಗವನ್ನು ವ್ಯವಸ್ಥಿತವಾಗಿಟ್ಟುಕೊಳ್ಳುವ ಒಂದು ವಿಧಾನ. seiri, seiton, seiso, seiketsu, ಮತ್ತು shitsuke ಎಂಬ ಜಪಾನಿ ಭಾಷೆ ಐದು ಪದಗಳನ್ನು S ಅಕ್ಷರದಿಂದ ಶುರುವಾಗುವ ಐದು ಇಂಗ್ಲೀಷಿನ ಪದಗಳಿಗೆ ಅನುವಾದಿಸಲಾಗಿದೆ. ಪರಿಣಾಮಕಾರಿ ಹಾಗೂ ಸಮರ್ಥ ಕೆಲಸಕ್ಕಾಗಿ ಕೆಲಸದ ಜಾಗವನ್ನು ಹೇಗೆ ವ್ಯವಸ್ಥಿತವಾಗಿಟ್ಟುಕೊಳ್ಳಬೇಕು ಎಂಬುದನ್ನು ಈ ಪಟ್ಟಿ ಸೂಚಿಸುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಮಸಾಯಿ ಮಾರಾ ಆಫ್ರಿಕಾದ ಕೀನ್ಯಾ ದೇಶದ ಒಂದು ರಾಷ್ಟ್ರೀಯ ಉದ್ಯಾನವನ. ಮಧ್ಯ ಆಫ್ರಿಕಾದ ತಾಂಜೇನಿಯದ ಸೆರೆಂಗೆಟಿ ಅಭಯಾರಣ್ಯದ ಉತ್ತರಭಾಗದಲ್ಲಿ ವಿಶಾಲವಾಗಿ ೩೨೦ ಚದರ ಕಿಲೋಮೀಟರ್ ಪ್ರದೇಶದಲ್ಲಿ ಮುಖ್ಯವಾಗಿ ಹುಲ್ಲುಗಾವಲಿನಂತೆ ಹರಡಿರುವ ಇದು ಇಲ್ಲಿನ ಮಸಾಯಿ ಬುಡಕಟ್ಟು ಮತ್ತು ಮಾರ ನದಿಗಳಿಂದ ತನ್ನ ಹೆಸರನ್ನು ಪಡೆದಿದೆ. ಇಲ್ಲಿನ ವನ್ಯಜೀವಿ ವೈವಿಧ್ಯದಲ್ಲಿ ವಾರ್ಷಿಕವಾಗಿ (ಸೆಪ್ಟೆಂಬರ ಮತ್ತು ಅಕ್ಟೋಬರ ಮಾಸಗಳಲ್ಲಿ) ನೆಡೆಯುವ ಮಹೀ ಮೃಗದ (ವೈಲ್ಡ್ ಬೀಸ್ಟ್) ವಲಸೆಯ ದೃಶ್ಯ ಅತ್ಯಂತ ರೋಚಕವಾದುದು.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಮಾಹಿತಿ ಹಕ್ಕು ಕಾಯಿದೆ 2005 (RTI ) ಎಂಬುದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ. ಇದು ಭಾರತದಲ್ಲಿ ಮಾಹಿತಿಯ ಸ್ವಾತಂತ್ರ್ಯದ ಶಾಸನದ ಒಂದು ರಾಷ್ಟ್ರೀಯ ಮಟ್ಟದ ಕಾರ್ಯಗತಗೊಳಿಸುವಿಕೆಯಾಗಿದ್ದು, "ಮಾಹಿತಿ ಹಕ್ಕಿನ ಕಾರ್ಯಸಾಧ್ಯ ಆಡಳಿತ ಪದ್ಧತಿಯನ್ನು ನಾಗರಿಕರಿಗಾಗಿ ಸಜ್ಜುಗೊಳಿಸುವುದಕ್ಕೆ" ಸಂಬಂಧಿಸಿದ ಉದ್ದೇಶವು ಇದರ ಹಿಂದೆ ಅಡಗಿದೆ. ರಾಜ್ಯ-ಮಟ್ಟ ಕಾನೂನೊಂದರ ಅಡಿಯಲ್ಲಿ ಪರಿಗಣಿಸಿ ಚರ್ಚಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿದ, ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾಯಿದೆಯು ಅನ್ವಯಿಸುತ್ತದೆ.
ವಿಕಿಪೀಡಿಅ [ಇಂಗ್ಲಿಷ್: Wikipedia ವಿಕಿಪೀಡಿಅ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್^ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.