The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ನರವಿಜ್ಞಾನ (ಗ್ರೀಕ್ ನಿಂದ νεῦρον, ನ್ಯೂರಾನ್ , "ನರ"; ಹಾಗೂ-λογία-ಲಾಜಿಯ ) ನರಮಂಡಲದ ಅಸ್ವಸ್ಥತೆಗೆ ಸಂಬಂಧಪಟ್ಟ ಒಂದು ವೈದ್ಯಕೀಯ ಅಧ್ಯಯನ. ಇದು ನಿರ್ದಿಷ್ಟವಾಗಿ ಕೇಂದ್ರ ನರಮಂಡಲ, ಬಾಹ್ಯನರಮಂಡಲ ಹಾಗೂ ಸ್ವನಿಯಂತ್ರಿತ ನರಮಂಡಲದ ಎಲ್ಲ ವಿಧದ ಕಾಯಿಲೆಗಳ ಪತ್ತೆ ಹಾಗೂ ಅವುಗಳ ಚಿಕಿತ್ಸೆಗೆ ಸಂಬಂಧಪಟ್ಟಿದೆ. ಇದರಲ್ಲಿ ಉದಾಹರಣೆಗೆ ರಕ್ತನಾಳಗಳು, ನರ ಪ್ರಚೋದಕ ಅಂಗಾಂಶ ಮತ್ತು ಅವುಗಳ ಹೊದಿಕೆಗಳ ಸ್ನಾಯುವನ್ನು ಒಳಗೊಂಡಿದೆ.
ಕ್ವಾಂಟಮ್ ಯಂತ್ರಶಾಸ್ತ್ರದ ಪ್ರವೇಶಿಕೆ
ದ್ರವ್ಯ ಮತ್ತು ಶಕ್ತಿಯ ಸವಿಸ್ತಾರವಾದ ವಿವರಣೆ ಹಾಗೂ ವಿಶೇಷವಾಗಿ ಪರಮಾಣುವಿನ ಪ್ರಮಾಣದಲ್ಲಿ ನಡೆಯುವ ಘಟನೆಗಳ ವಿವರಣೆಯನ್ನು ಕ್ವಾಂಟಮ್ ಯಂತ್ರಶಾಸ್ತ್ರವೆನ್ನುತ್ತಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ, ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಅಪಘಾತವಾದ ಸಂಧರ್ಭ" ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ಮೇ೨ ೧೯೮೧ ಯ ದೇವಸ್ಟ್ಣಾನ ಕ್ಕೆ ತೆರಳೂ ತೀರುವಾಗ ಮಧ್ಯ ರಾತ್ರಿ ಆಕೆ ತೆರಳೂತ್ತಿದ ಬಸ್ ತೀರ್ವ ಅಪಘಾತಕ್ಕೆ ಸಿಲುಕಿತು.ಸುಧಾ ಅವರು ಚಲಕನ ಹಿಂಭಾದಿಯ ಸೀಟೆನಲ್ಲಿ ಕುಲಿತಿದ್ದರಿಂದಾಗಿ ಅಪಘಾತಕ್ಕೆ ಬಲಿಯದರು.ಅಪಘಾತದ ಸಂಧರ್ಭದಲ್ಲಿ ಸುಧಾ ಚಂದ್ರನ್ ರವರು ಕಾಲನ್ನು ಮುಂದಕ್ಕೆ ಚಾಚಿದರು ಇದರಿಂದಾಗಿ ಅವರ ಕಾಲೂ ಸೀಟೀನ ಮಧ್ಯೆಕ್ಕೆ ಸಿಲುಕಿತು. ಬಸ್ ನಲ್ಲಿದ ಪ್ರಯಾಣೀಕರು ಬಹಳಾಷ್ಹ್ಟೂ ಜನ ಗಾಯಗೂಂಡರು.ಸ್ಥಳೀಯರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡೀದರು.ಬಲಗಾಲು ತೀರ ಗಾಯಗೂಂಡೀತ್ತು.ವೈದ್ಯರು ಅಕೆಗೆ ಪ್ರಥಮ ಚಿಕಿತ್ಸೆಯನ್ನು ನಿಡೀದರು.ಕೆಲ ದಿನಗಳ ನಂತರ ಆಕೆಯ ಕಾಲು ಗ್ಯಾಂಗ್ರಿನ್ ಆಗಿದೆ ಎಂದು ತಿಳೀಯಿತು.ಕೂಡಲೆ ಕಾಲುಗಲ್ಲನ್ನು ತುಂಡೂ ಮಾಡೂವುದು ಸೂಕ್ತ ಅಥವಾ ಪ್ರಾಣಾಕ್ಕೆ ಅಪಾಯ ಎಂದು ವೈದ್ಯರು ಸಲಹೆ ನೀಡೀದರು. ಸಲಹೆಯ ಮೇರಿಗೆ ಆಕೆಯ ಕಾಲು ತುಂಡೂ ಮಾಡಲಾಯಿತು.
ಹೆಲೆನ್ ಆಡಮ್ಸ್ ಕೆಲ್ಲರ್ (ಜೂನ್ ೨೭, ೧೮೮೦ - ಜೂನ್ ೧, ೧೯೬೮) ಅಮೆರಿಕದ ಪ್ರಖ್ಯಾತ ಬರಹಗಾರ್ತಿ, ರಾಜಕೀಯ ಕಾರ್ಯಕರ್ತೆ, ಉಪನ್ಯಾಸಕಿ, ಸಾಮಾಜಿಕ ಕಾರ್ಯಕರ್ತೆ, ಅಂಗವಿಕಲರು ಮತ್ತು ಶೋಷಿತ ಜನರ ಏಳಿಗೆಗಾಗಿ ಹಗಲಿರುಳೂ ಶ್ರಮಿಸಿದ ಮಾನವತಾವಾದಿ. ಇನ್ನೂ ಕೇವಲ ಹತ್ತೊಂಬತ್ತು ತಿಂಗಳ ಹಸುಳೆಯಾಗಿದ್ದಾಗಲೇ ಅವರಿಗೆ ಕುರುಡುತನ ಮತ್ತು ಕಿವುಡುತನ ಎರಡೂ ಪ್ರಾಪ್ತವಾಯಿತು. ಹೀಗೆ ಯಾವುದೇ ಬದುಕಿನ ಅಡ್ಡತಡೆಗಳಿದ್ದರೂ ಮನುಷ್ಯನಿಗೆ ಸಾಧ್ಯವಿಲ್ಲದ್ದು ಯಾವುದೂ ಇಲ್ಲ ಎಂದು ತಮ್ಮ ಬದುಕಿನಿಂದ ನಿರೂಪಿಸಿದ ಮಹಾನ್ ಚೇತನ ಹೆಲೆನ್ ಕೆಲ್ಲರ್.
ಸ್ಟೀಫನ್ ವಿಲಿಯಂ ಹಾಕಿಂಗ್ ರವರು, CH, CBE, FRS, FRSA (ಜನನ 8 ಜನವರಿ 1942) ಬ್ರಿಟೀಷ್ ಸೈದ್ಧಾಂತಿಕ ಭೌತಶಾಸ್ತ್ರಜ್ಞರಾಗಿದ್ದು, 40 ವರ್ಷಗಳ ಸುದೀರ್ಘ ಕಾಲ ವೈಜ್ಞಾನಿಕ ಕ್ಷೇತ್ರದಲ್ಲಿ ವಿಶ್ವಪ್ರಸಿದ್ಧಿ ಹೊಂದಿದವರು. ಅವರ ಪುಸ್ತಕಗಳು ಹಾಗೂ ಸಾರ್ವಜನಿಕ ಸ್ವರೂಪಗಳು ಅಧ್ಯಯನ ಕ್ಷೇತ್ರದಲ್ಲಿ ಅವರನ್ನೊಬ್ಬ ಪ್ರಖ್ಯಾತ ತಾರೆಯನ್ನಾಗಿ ಹಾಗೂ ರಾಯಲ್ ಸೊಸೈಟಿ ಆಫ್ ಆರ್ಟ್ಸ್ನ ಗೌರವಾನ್ವಿತ ಫೆಲೋವನ್ನಾಗಿ ಮಾಡಿತು, ಅವರು ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್ನಲ್ಲಿ ಆಜೀವ ಸದಸ್ಯತ್ವ ಹೊಂದಿದ್ದಾರೆ, ಹಾಗೂ 2009ನೇ ಇಸವಿಯಲ್ಲಿ ಯುನೈಟೆಡ್ ಸ್ಟೇಟ್ಸ್ನ ಶ್ರೇಷ್ಠ ಪ್ರಶಸ್ತಿಯಾದ ಪ್ರೆಸಿಡೆಂಟಲ್ ಮೆಡಲ್ ಆಫ್ ಫ್ರೀಡಂ ನೀಡಿ ಅವರನ್ನು ಗೌರವಿಸಲಾಗಿದೆ. ಗಾನ್ವಿಲ್ಲೆ ಅಂಡ್ ಕಾಯಸ್ ವಿದ್ಯಾಲಯದಲ್ಲಿ ಫೆಲೋ ಆಗಿ, ಕೇಂಬ್ರಿಡ್ಜ್ ಹಾಗೂ ಒಂಟಾರಿಯೊದ ವಾಟರ್ಲೂನ, ಪೆರಿಮೀಟರ್ ಇನ್ಸ್ಟಿಟ್ಯೂಟ್ ಫಾರ್ ಥಿಯೊರೆಟಿಕಲ್ ಫಿಸಿಕ್ಸ್ ಸಂಸ್ಥೆಯಲ್ಲಿ ಪ್ರತ್ಯೇಕ ಸಂಶೋಧಕ ಪ್ರಾಧ್ಯಾಪಕ ಸ್ಥಾನವನ್ನು ಕೂಡ ಅಲಂಕರಿಸಿದ್ದರು.
ಕಟ್ಟಡ ಮಾಡು ಮತ್ತು ಗೋಡೆಗಳಿಂದ ನಿರ್ಮಿಸಲ್ಪಟ್ಟ ರಚನೆಗಳನ್ನು ಕಟ್ಟಡ ಎನ್ನುತ್ತೇವೆ.ವಾಸ್ತುಶಾಸ್ತ್ರ, ನಿರ್ಮಾಣ (ಕಾಮಗಾರಿ), ಯಂತ್ರವಿಜ್ಞಾನ ಮತ್ತು ಸ್ಥಿರಾಸ್ತಿ ಅಭಿವೃದ್ಧಿಗಳಲ್ಲಿ ಕಟ್ಟಡ ಶಬ್ದವು ಯಾವುದೇ ಅನುಕೂಲ ಅಥವಾ ನಿರಂತರ ಅನುಭೋಗಕ್ಕಾಗಿ ಆಧಾರ ಅಥವಾ ಆಶ್ರಯ ನೀಡಲು ಬಳಸಲಾಗುವ ಅಥವಾ ಉದ್ದೇಶಿಸಲಾದ ಯಾವುದೇ ಮಾನವ ನಿರ್ಮಿತ ರಚನೆಯನ್ನು ನಿರ್ದೇಶಿಸುತ್ತದೆ.ವಸತಿಗೃಹಗಳು, ದಾಸ್ತಾನು ಮಳಿಗೆಗಳು, ವಿವಿಧ ಸಂಘ ಸಂಸ್ಥೆಗಳ ಕಚೇರಿಗಳು ಮುಂತಾದುವೆಲ್ಲವೂ ಕಟ್ಟಡಗಳೇ. ಒಂದು ಕಟ್ಟಡದ ಪ್ರಧಾನಾವಶ್ಯಕತೆಗಳು ಎರಡು-ರಚನಾತ್ಮಕವಾಗಿ ಅದು ಭದ್ರವಾಗಿರಬೇಕು ಮತ್ತು ಹವೆ ಬೆಂಕಿ ನೀರು ಕಳ್ಳಕಾಕರು ಮುಂತಾದ ಪ್ರತಿಬಲಗಳ ವಿರುದ್ಧ ರಕ್ಷಣೆ ಒದಗಿಸಬೇಕು. ಇಂಥ ಕಟ್ಟಡವನ್ನು ಆದಷ್ಟು ಮಿತವ್ಯಯದಿಂದ ರಚಿಸುವುದು ಕಟ್ಟಡ ಉದ್ಯಮದ ಕೆಲಸ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
404 ಅಥವಾ Not Found (ಸಿಗಲಿಲ್ಲ) ದೋಷ ಸಂದೇಶವು ಒಂದು ಎಚ್ಟಿಟಿಪಿ (HTTP) ನಿರ್ದಿಷ್ಟ ಪ್ರತಿಕ್ರಿಯಾ ಸಂಕೇತ. ಇದರ ಪ್ರಕಾರ, ಯಾವುದೇ ಅಂತರಜಾಲ ಅಥವಾ ಅಂತರ್ಜಾಲದಲ್ಲಿ ಆನುಷಂಗಿಕ ಕಂಪ್ಯೂಟರ್(client)ನಿಂದ ಕೋರಿಕೆಯ ಸಂದೇಶವು ಮುಖ್ಯ ಕಂಪ್ಯೂಟರ್(server) ತಲುಪಿತಾದರೂ, ಮುಖ್ಯ ಕಂಪ್ಯೂಟರ್, ಬೇಕಾದ ಈ ಮಾಹಿತಿಯನ್ನು ಒದಗಿಸಲಾಗದು. '404 ದೋಷ' ಹಾಗೂ 'server not found (ಮುಖ್ಯ ಕಂಪ್ಯೂಟರ್ ಅಲಭ್ಯ)' ಅಥವಾ ಇದೇ ರೀತಿಯ ದೋಷಗಳೊಂದಿಗೆ ಗೊಂದಲ ಮಾಡಿಕೊಳ್ಳಬಾರದು.
ಮೈಕ್ರೋಸಾಫ್ಟ್ ಅಮೆರಿಕದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಗಣಕಯಂತ್ರ ತಂತ್ರಜ್ಞಾನ ಸಂಸ್ಥೆ. ಗಣಕಯಂತ್ರ, ಮೊಬೈಲ್ ಫೋನ್ ಮತ್ತಿತರ ಸಾಧನಗಳಲ್ಲಿ ಉಪಯೋಗಿಸಬಹುದಾದ ವಿವಿಧ ರೀತಿಯ ತಂತ್ರಾಂಶಗಳನ್ನು ಈ ಸಂಸ್ಥೆ ವಿಕಸನಗೊಳಿಸಿ ಮಾರಾಟ ಮಾಡುತ್ತದೆ. ಇದರ ಅತ್ಯಂತ ಯಶಸ್ವಿ ತಂತ್ರಾಂಶಗಳೆಂದರೆ ವಿಂಡೋಸ್ ಕಾರ್ಯಾಚರಣ ವ್ಯವಸ್ಥೆ ಮತ್ತು ಮೈಕ್ರೋಸಾಫ್ಟ್ ಆಫೀಸ್ ಗುಂಪಿನ ತಂತ್ರಾಂಶಗಳು.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.