The most-visited ಕನ್ನಡ Wikipedia articles, updated daily. Learn more...
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ, ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ಸಂಸತ್ತು (ಹಿಂದಿ:संसद) ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
"ಅಪಘಾತವಾದ ಸಂಧರ್ಭ" ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ಮೇ೨ ೧೯೮೧ ಯ ದೇವಸ್ಟ್ಣಾನ ಕ್ಕೆ ತೆರಳೂ ತೀರುವಾಗ ಮಧ್ಯ ರಾತ್ರಿ ಆಕೆ ತೆರಳೂತ್ತಿದ ಬಸ್ ತೀರ್ವ ಅಪಘಾತಕ್ಕೆ ಸಿಲುಕಿತು.ಸುಧಾ ಅವರು ಚಲಕನ ಹಿಂಭಾದಿಯ ಸೀಟೆನಲ್ಲಿ ಕುಲಿತಿದ್ದರಿಂದಾಗಿ ಅಪಘಾತಕ್ಕೆ ಬಲಿಯದರು.ಅಪಘಾತದ ಸಂಧರ್ಭದಲ್ಲಿ ಸುಧಾ ಚಂದ್ರನ್ ರವರು ಕಾಲನ್ನು ಮುಂದಕ್ಕೆ ಚಾಚಿದರು ಇದರಿಂದಾಗಿ ಅವರ ಕಾಲೂ ಸೀಟೀನ ಮಧ್ಯೆಕ್ಕೆ ಸಿಲುಕಿತು. ಬಸ್ ನಲ್ಲಿದ ಪ್ರಯಾಣೀಕರು ಬಹಳಾಷ್ಹ್ಟೂ ಜನ ಗಾಯಗೂಂಡರು.ಸ್ಥಳೀಯರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡೀದರು.ಬಲಗಾಲು ತೀರ ಗಾಯಗೂಂಡೀತ್ತು.ವೈದ್ಯರು ಅಕೆಗೆ ಪ್ರಥಮ ಚಿಕಿತ್ಸೆಯನ್ನು ನಿಡೀದರು.ಕೆಲ ದಿನಗಳ ನಂತರ ಆಕೆಯ ಕಾಲು ಗ್ಯಾಂಗ್ರಿನ್ ಆಗಿದೆ ಎಂದು ತಿಳೀಯಿತು.ಕೂಡಲೆ ಕಾಲುಗಲ್ಲನ್ನು ತುಂಡೂ ಮಾಡೂವುದು ಸೂಕ್ತ ಅಥವಾ ಪ್ರಾಣಾಕ್ಕೆ ಅಪಾಯ ಎಂದು ವೈದ್ಯರು ಸಲಹೆ ನೀಡೀದರು. ಸಲಹೆಯ ಮೇರಿಗೆ ಆಕೆಯ ಕಾಲು ತುಂಡೂ ಮಾಡಲಾಯಿತು.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ವಿಕಿಪೀಡಿಅ [ಇಂಗ್ಲಿಷ್: Wikipedia ವಿಕಿಪೀಡಿಅ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್^ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕಟ್ಟಡ ಮಾಡು ಮತ್ತು ಗೋಡೆಗಳಿಂದ ನಿರ್ಮಿಸಲ್ಪಟ್ಟ ರಚನೆಗಳನ್ನು ಕಟ್ಟಡ ಎನ್ನುತ್ತೇವೆ.ವಾಸ್ತುಶಾಸ್ತ್ರ, ನಿರ್ಮಾಣ (ಕಾಮಗಾರಿ), ಯಂತ್ರವಿಜ್ಞಾನ ಮತ್ತು ಸ್ಥಿರಾಸ್ತಿ ಅಭಿವೃದ್ಧಿಗಳಲ್ಲಿ ಕಟ್ಟಡ ಶಬ್ದವು ಯಾವುದೇ ಅನುಕೂಲ ಅಥವಾ ನಿರಂತರ ಅನುಭೋಗಕ್ಕಾಗಿ ಆಧಾರ ಅಥವಾ ಆಶ್ರಯ ನೀಡಲು ಬಳಸಲಾಗುವ ಅಥವಾ ಉದ್ದೇಶಿಸಲಾದ ಯಾವುದೇ ಮಾನವ ನಿರ್ಮಿತ ರಚನೆಯನ್ನು ನಿರ್ದೇಶಿಸುತ್ತದೆ.ವಸತಿಗೃಹಗಳು, ದಾಸ್ತಾನು ಮಳಿಗೆಗಳು, ವಿವಿಧ ಸಂಘ ಸಂಸ್ಥೆಗಳ ಕಚೇರಿಗಳು ಮುಂತಾದುವೆಲ್ಲವೂ ಕಟ್ಟಡಗಳೇ. ಒಂದು ಕಟ್ಟಡದ ಪ್ರಧಾನಾವಶ್ಯಕತೆಗಳು ಎರಡು-ರಚನಾತ್ಮಕವಾಗಿ ಅದು ಭದ್ರವಾಗಿರಬೇಕು ಮತ್ತು ಹವೆ ಬೆಂಕಿ ನೀರು ಕಳ್ಳಕಾಕರು ಮುಂತಾದ ಪ್ರತಿಬಲಗಳ ವಿರುದ್ಧ ರಕ್ಷಣೆ ಒದಗಿಸಬೇಕು. ಇಂಥ ಕಟ್ಟಡವನ್ನು ಆದಷ್ಟು ಮಿತವ್ಯಯದಿಂದ ರಚಿಸುವುದು ಕಟ್ಟಡ ಉದ್ಯಮದ ಕೆಲಸ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಡಿಸೆಂಬರ್ ೧೬, ೨೦೧೨ರಂದು ಭಾರತದ ರಾಜಧಾನಿ ದೆಹಲಿಯಲ್ಲಿ ವೈದ್ಯವಿದ್ಯಾರ್ಥಿನಿಯೊಬ್ಬಳನ್ನು ಚಲಿಸುತ್ತಿದ್ದ ಬಸ್ನಲ್ಲಿ ಆರು ಮಂದಿ ದುಷ್ಕರ್ಮಿಗಳು ಕಬ್ಬಿಣದ ಸರಳಿನಿದ ಹೊಡೆಯುವ ಮೂಲಕ ದಾರುಣವಾಗಿ ಅತ್ಯಾಚಾರ ಮಾಡಿದ್ದರು. ಈ ಪೈಶಾಚಿಕ ಘಟನೆಯಿಂದಾಗಿ ದುದರ್ೈವಿ ಯುವತಿಯ ತಲೆ ಹಾಗೂ ಕರುಳಿಗೆ ತೀವ್ರವಾದ ಗಾಯಗಳುಂಟಾಗಿದ್ದವು. ೧೩ ದಿನಗಳ ಕಾಲ ಸಾವು ಬದುಕಿನೊಂದಿಗೆ ಹೋರಾಡಿದ ಯುವತಿ ಅಂತಿಮವಾಗಿ ೨೯, ಡಿಸೆಂಬರ್ ೨೦೧೨ರಂದು ಕೊನೆಯುಸಿರೆಳೆದಳು.