The most-visited ಕನ್ನಡ Wikipedia articles, updated daily. Learn more...
ವರ್ಡ್ ಪ್ರೆಸ್ ಎಂಬುದು ಒಂದು ಮುಕ್ತ ಮೂಲದ ಪಠ್ಯವಿಷಯ ನಿರ್ವಹಣಾ ವ್ಯವಸ್ಥೆಯಾಗಿದ್ದು (ಕಂಟೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ-CMS), PHP ಮತ್ತು MySQLನಿಂದ ಚಾಲಿಸಲ್ಪಡುವ ಒಂದು ಬ್ಲಾಗ್ ಪ್ರಕಟಣಾ ಅನ್ವಯಿಕೆಯಾಗಿ ಇದು ಅನೇಕವೇಳೆ ಬಳಸಲ್ಪಡುತ್ತದೆ. ಒಂದು ಪ್ಲಗ್-ಇನ್ ವಿನ್ಯಾಸ ಮತ್ತು ಒಂದು ಪಡಿಯಚ್ಚು ವ್ಯವಸ್ಥೆಯನ್ನು ಒಳಗೊಂಡಂತೆ ಇದು ಅನೇಕ ವೈಶಿಷ್ಟ್ಯಪೂರ್ಣ ಲಕ್ಷಣಗಳನ್ನು ಹೊಂದಿದೆ. ೧,೦೦೦,೦೦೦ದಷ್ಟಿರುವ ಅತಿದೊಡ್ಡ ವೆಬ್ಸೈಟ್ಗಳ ಪೈಕಿ ೧೩%ಗೂ ಹೆಚ್ಚಿನವುಗಳಿಂದ ವರ್ಡ್ಪ್ರೆಸ್ ಬಳಸಲ್ಪಡುತ್ತದೆ.
ಕಂಪ್ಯೂಟರ್ ವೈರಸ್ ತನ್ನಷ್ಟಕ್ಕೆ ತಾನೇ ಕಾರ್ಯಕ್ರಮವನ್ನು ಪ್ರತಿಮಾಡಿಕೊಂಡು ಮಾಲೀಕನ ಅನುಮತಿ ಕೇಳದೆ ಅಥವಾ ಅವನ ಗಮನಕ್ಕೂ ತರದೇ ಕಂಪ್ಯೂಟರ್ನೊಳಗೆಲ್ಲಾ ಹರಡಿಕೊಂಡು ವ್ಯವಸ್ಥೆಯು 'ನಂಜಿಗೆ' ತುತ್ತಾಗುವಂತೆ ಮಾಡುವ ಒಂದು ಕಾರ್ಯ ವಿಧಾನ. ಮಾಲ್ವೇರ್, ಆಡ್ವೇರ್ ಮತ್ತು ಸ್ಪೈವೇರ್ಮೊದಲಾದವನ್ನು ಸೂಚಿಸಲು "ವೈರಸ್" ಎಂಬ ಪದ ಬಳಕೆ ತಪ್ಪಾದದ್ದಾದರೂ ಸಾಮ್ಯಾನ್ಯವಾಗಿ ಚಾಲ್ತಿಯಲ್ಲಿದೆ. ಯಾಕೆಂದರೆ ಅವುಗಳಿಗೆ ಪುನರುತ್ಪಾದನಾ ಸಾಮರ್ಥ್ಯವಿಲ್ಲ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಮನೋವಿಜ್ಞಾನದ ಅಥವ ಮನೋಶಾಸ್ತ್ರದ ಸಿದ್ಧಾಂತಗಳನ್ನು ಬಳಸಿಕೊಂಡು ಒಬ್ಬ ವ್ಯಕ್ತಿಯ ಮಾನಸಿಕ ಸಮಸ್ಯೆಗಳನ್ನು ನಿವಾರಿಸುವ ವಿಧಾನಗಳಿಗೆ ಸೈಕೋಥೆರಪಿ ಅಥವ ಮನೋಚಿಕಿತ್ಸೆ ಅಥವ ಮಾನಸಿಕ ಚಿಕಿತ್ಸೆ ಎಂದು ಹೆಸರು. ಈ ವಿಧಾನಗಳ ತರಬೇತಿಯನ್ನು ಪಡೆದು, ಅವುಗಳನ್ನು ವೃತ್ತಿಯಲ್ಲಿ ಉಪಯೋಗಿಸುವವರನ್ನು ಥೆರಪಿಸ್ಟ್ ಅಥವ ಮನೋಚಿಕಿತ್ಸಕ ಎನ್ನುತ್ತಾರೆ. ವ್ಯಕ್ತಿಯ ಮಾನಸಿಕ, ಭಾವಾತ್ಮಕ ಸಮಸ್ಯೆಗಳನ್ನು ನಿವಾರಿಸಿ ಆತನ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವುದು ಮನೋಚಿಕಿತ್ಸೆಯ ಮೂಲೋದ್ದೇಶಗಳಲ್ಲೊಂದು.
ಕೆಲವು ಸಮಾಜಗಳಲ್ಲಿ ರೂಢಿಯಲ್ಲಿರುವ ಬಾಲ್ಯ ವಿವಾಹ ಸಾಧಾರಣವಾಗಿ ಎರಡು ಪ್ರತ್ಯೇಕ ಸಾಮಾಜಿಕ ತತ್ವಗಳನ್ನು ಉಲ್ಲೇಖಿಸುತ್ತದೆ. ಮೊದಲ ಮತ್ತು ವ್ಯಾಪಕವಾಗಿ ಹರಡಿರುವ ರೂಢಿ ಅಂದರೆ ಅದು ಒಬ್ಬ ವಯಸ್ಕ ಪುರುಷ ಚಿಕ್ಕ ಹುಡುಗಿಯನ್ನು (ಸಾಮಾನ್ಯವಾಗಿ ಹದಿನೈದು ವರ್ಷಗಳಿಗಿಂತ ಕಡಿಮೆ ವಯಸ್ಸಿನ ಹುಡುಗಿ ಎನ್ನಲಾಗಿದೆ) ಮದುವೆಯಾಗುವುದು. ರೂಢಿಯಲ್ಲಿ, ಯಾವಾಗಲೂ ಚಿಕ್ಕ ಹುಡುಗಿ ಒಂದು ಗಂಡಸನ್ನು ಮದುವೆಯಾಗುವುದಾಗಿದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.