The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಸ್ವಚ್ಛ ಭಾರತ ಅಭಿಯಾನ (ಆಂಗ್ಲ:Clean India Mission) ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತು. ↑ "Swachh Bharat campaign should become mass movement: Narendra Modi".
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ವಸ್ತುವು ನಿರ್ದಿಷ್ಟ ವ್ಯಾಪ್ತಿಯಲ್ಲಿ ಕಂಪಿಸಿದಾಗ,ಶಬ್ದವು ಉತ್ಪತಿಯಾಗುತ್ತದೆ.ವಸ್ತುವು ಅನೇಕ ಆವೃತ್ತಿಯಲ್ಲ್ಲಿ ಕಂಪಿಸುತ್ತದೆ ಯಾದರೂ ಶಬ್ದ ಕೇಳುವುದು ಕೆಲವೇ ವ್ಯಾಪ್ತಿಯಲ್ಲಿ ಕಂಪಿಸಿದಾಗ ಮಾತ್ರ.ಕಂಪನ ಆವರ್ತಾಂಕ ಶ್ರೇಣಿ ೨೦Hz ನಿಂದ ೨೦,೦೦೦Hz ಇದ್ದಲ್ಲಿ ನಮಗೆ ಶಬ್ದ ಸಂವೇದನೆಯಾಗುತ್ತದೆ. ಈ ಕಂಪನವನ್ನು ಶ್ರವಣ ಕಂಪನವೆಂದು ಮತ್ತು ಆ ಆವರ್ತಾಂಕದ ಶ್ರೇಣಿಯನ್ನು ಶ್ರವಣ ಶ್ರೇಣಿ ಎಂದು ಕರೆಯುತ್ತೇವೆ. ಯಾವುದೇ ವಸ್ತುವಿನ ಕಂಪನದ ಆವೃತ್ತಿ ೨೦Hz ಗಿಂತ ಕಡಿಮೆ ಇದ್ದಲ್ಲಿ ಅಥವಾ ೨೦,೦೦೦Hz ಗಿಂತ ಹೆಚ್ಚಾಗಿದ್ದಲ್ಲಿ,ಹಾಗೆ ಕಂಪಿಸುವ ವಸ್ತುವಿನಿಂದ ಹೊರಹೊಮ್ಮುವ ಧ್ವನಿಯ ಸಂವೇದನೆ ನಮಗಾಗುವುದಿಲ್ಲ.ವಸ್ತುವಿನ ಕಂಪನದ ಆವೃತ್ತಿ ೨೦Hz ಗಿಂತ ಕದಿಮೆ ಇದ್ದಾಗ ಹೊರ ಹೊಮ್ಮುವ ಧ್ವನಿಯನ್ನು ಅವಧ್ವನಿ ಎಂದು ಕರೆಯುತ್ತಾರೆ.ಹಾಗೆಯೇ,ವಸ್ತುವು ೨೦,೦೦೦Hz ಗಿಂತ ಅಧಿಕ ಆವೃತ್ತಿಯಲ್ಲಿ ಕಂಪಿಸಿದಾಗ ಹೊಮ್ಮುವ ಧ್ವನಿಯನ್ನು ಶ್ರವಣಾತೀತ ಧ್ವನಿಎನ್ನುತ್ತಾರೆ ಮತ್ತು ಈ ಆವೃತ್ತದ ಧ್ವನಿಯ ಅಧ್ಯಯನವನ್ನು ಶ್ರವಣಾತೀತ ಶಾಸ್ತ್ರ ಎಂದು ಕರೆಯುತ್ತಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ದಿ ಡಾ ವಿನ್ಸಿ ಕೋಡ್ 2003ರಲ್ಲಿ ಅಮೆರಿಕಾದ ಲೇಖಕ ಡಾನ್ ಬ್ರೌನ್ ಬರೆದ ನಿಗೂಢ-ಪತ್ತೇದಾರಿ ಕಾಲ್ಪನಿಕ ಕಾದಂಬರಿ. ಪ್ಯಾರಿಸ್ನ ಲೂವರ್ ವಸ್ತುಸಂಗ್ರಹಾಲಯದಲ್ಲಿ ನಡೆದ ಹತ್ಯೆಯೊಂದನ್ನು ಕುರಿತು ಸಂಕೇತಶಾಸ್ತ್ರಜ್ಞ ರಾಬರ್ಟ್ ಲ್ಯಾಂಗ್ಡನ್ ಮತ್ತು ಸೋಫಿ ನೆವಿ ತನಿಖೆ ನಡೆಸುವುದರಿಂದ ಕಥೆಯು ಪ್ರಾರಂಭವಾಗುತ್ತದೆ. ನಂತರ ನಜರಥ್ನ ಏಸು ಕ್ರಿಸ್ತ ಮೇರಿ ಮಗ್ಡಾಲೇನ್ಳನ್ನು ಮದುವೆಯಾಗಿ,ಮಗುವಿನ ತಂದೆಯಾಗಿರುವ ಸಾಧ್ಯತೆ ಬಗ್ಗೆ ಪ್ರಯರಿ ಆಫ್ ಸಿಯೊನ್ ಮತ್ತು ಒಪಸ್ ಡಾಯಿ ನಡುವೆ ನಡೆದ ಕಾಳಗವನ್ನು ಅವರು ಪತ್ತೆಹಚ್ಚುತ್ತಾರೆ.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಸ್ಪೇನ್ ಅಥವ ಸ್ಪೇನ್ ಸಂಸ್ಥಾನ (ಸ್ಪ್ಯಾನಿಷ್:Reino de España), ಆಗ್ನೇಯ ಯುರೋಪಿನ ಐಬೀರಿಯನ್ ದ್ವೀಪಕಲ್ಪದಲ್ಲಿರುವ ಒಂದು ದೇಶ. ಇದರ ದಕ್ಷಿಣ ಮತ್ತು ಪೂರ್ವದಲ್ಲಿ ಮೆಡಿಟರೇನಿಯನ್ ಸಮುದ್ರ ಮತ್ತು ಜಿಬ್ರಾಲ್ಟರ್; ಉತ್ತರದಲ್ಲಿ ಫ್ರಾನ್ಸ್, ಅಂಡೊರ ಮತ್ತು ಬಿಸ್ಕೆ ಕೊಲ್ಲಿ; ಪಶ್ಚಿಮದಲ್ಲಿ ಅಟ್ಲಾಂಟಿಕ್ ಮಹಾಸಾಗರ ಮತ್ತು ಪೋರ್ಚುಗಲ್ ಇವೆ. ಮೆಡಿಟರೇನಿಯನ್ನಲ್ಲಿರುವ ಬಲೇರಿಕ್ ದ್ವೀಪ, ಅಟ್ಲಾಂಟಿಕ್ ಮಹಾಸಗರದಲ್ಲಿರುವ ಕೆನರಿ ದ್ವೀಪ ಮತ್ತು ಉತ್ತರ ಆಫ್ರಿಕದಲ್ಲಿ ಮೊರೊಕ್ಕೊ ನಗರದ ಗಡಿಯಲ್ಲಿರುವ ಸಿಯುಟ ಹಾಗು ಮೆಲಿಲ್ಲ ನಗರಗಳು ಸ್ಪೇನ್ ದೇಶಕ್ಕೆ ಸೇರಿವೆ.
ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ .ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು.ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ..
ವಿಕಿಪೀಡಿಅ [ಇಂಗ್ಲಿಷ್: Wikipedia ವಿಕಿಪೀಡಿಅ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್^ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.