The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸಾವಯವ ರಸಾಯನಶಾಸ್ತ್ರದಲ್ಲಿ, ಹೈಡ್ರೋಕಾರ್ಬನ್ ಒಂದು ಸಾವಯವ ಸಂಯುಕ್ತವಾಗಿದ್ದು ಪೂರ್ಣವಾಗಿ ಜಲಜನಕ ಮತ್ತು ಆಮ್ಲಜನಕಗಳಿಂದ ಉಂಟಾಗಿವೆ. ಹೈಡ್ರೋಕಾರ್ಬನಗಳಿಂದ ಒಂದು ಹೈಡ್ರೋಜೆನನ್ನು ತೆಗೆದಾಗ ಉಂಟಾಗುವ ಕಾರ್ಯಕಾರಿ ಗುಂಪು ಹೊಂದಿರುವ ಸಂಯುಕ್ತಗಳನ್ನು ಹೈಡ್ರೋಕಾರ್ಬೈಲ್ ಗಳೆಂದು ಕರೆಯುತ್ತಾರೆ.ಹೈಡ್ರೋಕಾರ್ಬನಗಳಲ್ಲಿ ಹಲವು ವಿಧಗಳಿವೆ, ವಾಸನೆಯುಕ್ತ ಅರೋಮ್ಯಾಟಿಕ್ ಹೈಡ್ರೋಕಾರ್ಬನಗಳು, ಅಲ್ಕೇನಗಳು, ಅಲ್ಕೀನಗಳು,ಅಲ್ಕೈನಗಳು ಹಾಗೂ ಸೈಕ್ಲೋಅಲ್ಕೇನಗಳಾಗಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯವನ್ನು ಕಾಲದ ದೃಷ್ಠಿಯಿಂದ ಮೂರು ಪ್ರಮುಖ ವಿಭಾಗಗಳನ್ನಾಗಿ ಮಾಡಿಕೊಂಡು ಅಧ್ಯಯನ ಮಾಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಹಳಗನ್ನಡ, ನಡುಗನ್ನಡ ಅಥವಾ ಮಧ್ಯಕಾಲೀನ ಕನ್ನಡ ಮತ್ತು ಆಧುನಿಕ ಅಥವಾ ಹೊಸಗನ್ನಡ ಸಾಹಿತ್ಯ ಎಂದು ವಿಭಾಗಿಸಿಕೊಂಡು ಧರ್ಮಾಧರಿತ, ಕಾಲಾಧಾರಿತ ಕ್ರಮಗಳಲ್ಲಿ ಅಧ್ಯಯನ ಮಾಡಲಾಗುವುದು. ಚಂಪೂ ಪ್ರಕಾರದ ಮುಖ್ಯಭೂಮಿಕೆಯಲ್ಲಿ ಸ್ಥಾಪಿತವಾದ 10ನೇ ಶತಮಾನದ ಸಂಸ್ಕøತ ಭೂಯಿಷ್ಠವಾದ ಹಳಗನ್ನಡದ ಪಂಪನಾದಿಯಾಗಿ 12ನೇ ಶತಮಾನದ ಉತ್ತರಾರ್ಧದವರೆಗೂ ಇದ್ದ ಸಾಹಿತ್ಯ ಪ್ರಕಾರವು ವಚನಕ್ರಾಂತಿಯ ಪ್ರಾರಂಭ ಮತ್ತು ಪ್ರೇರಣೆಯಿಂದ ಸಾಹಿತ್ಯ ರಚನೆಯ ಪ್ರಕಾರಗಳು ಹಲವು ರೀತಿಯ ಸ್ವರೂಪದಲ್ಲಿ ಬದಲಾವಣೆಗಳ ಮೂಲಕ ಸ್ಥಾಪಿತಗೊಂಡವು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಲೋನ್ (German: Köln, pronounced [ˈkœln] ( ); ಕೋಲ್ಷ್ ಭಾಷೆಯಲ್ಲಿ: ಕೋಲ್ಲೆ ಟೆಂಪ್ಲೇಟು:IPA2) ಜರ್ಮನಿಯ ನಾಲ್ಕನೆಯ ಅತಿ ದೊಡ್ಡ ನಗರ (ಬರ್ಲಿನ್, ಹ್ಯಾಂಬರ್ಗ್ ಮತ್ತು ಮ್ಯುನಿಕ್ ನಂತರ), ಮತ್ತು ಜರ್ಮನಿಯ ಒಕ್ಕೂಟ (ಫೆಡೆರಲ್) ರಾಷ್ಟ್ರಉತ್ತರ ರೈನ್-ಪಶ್ಚಿಮ ಫಾಲಿಯಾ ಮತ್ತು ರೈನ್-ರರ್ ಮೆಟ್ರೋಪಾಲಿಟನ್ ಪ್ರದೇಶಗಳ ಭಾಗಗಳ ಅತಿ ದೊಡ್ಡ ನಗರವಾಗಿದ್ದು, ಯೂರೋಪ್ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ಪ್ರಮುಖವಾದ ನಗರಗಳಲ್ಲಿ ಒಂದಾಗಿದ್ದು, ಹತ್ತು ಮಿಲಿಯನ್ ನಿವಾಸಿಗಳಿಗಿಂತಲೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಇದು ಜರ್ಮನಿಯ ಪುರಾತನ ನಗರಗಳಲ್ಲಿ ಒಂದಾಗಿದ್ದು, ಕ್ರಿಸ್ತಪೂರ್ವ 38ರಲ್ಲಿ ಯುಬೈರಿಂದ ಸ್ಥಾಪಿಸಲ್ಪಟ್ಟಿತು ಇದರ ಹೆಸರು ರೋಮನ್ ವಸಾಹತಾದ ಕಲೋನಿಯಾ ಕ್ಲಾಡಿಯಾ ಅರಾ ಅಗ್ರಿಪ್ಪಿನೆನ್ಸಿಯಂ ನಿಂದ ವ್ಯುತ್ಪತ್ತಿ ಹೊಂದಿದುದಾಗಿದೆ. ಕಲೋನ್ ರೈನ್ ನದಿಯ ದಂಡೆಯ ಮೇಲಿದೆ.
ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
ಕರ್ನಾಟಕದ ಸಮೃಧ್ದ ಜಾನಪದವನ್ನೂ ಯಕ್ಷಗಾನ ಕಲೆಯನ್ನೂ ಪ್ರೋತ್ಸಹಿಸುವ ಮತ್ತು ಅವುಗಳನ್ನು ಕಾಪಾಡಿಕೊಂಡು ಬರುವ ದೃಷ್ಠಿಯಿಂದ ಈ ಅಕಾಡೆಮಿ ಅಸ್ತಿತ್ವಕ್ಕೆ ಬಂದಿದೆ(೧೯೮೦). ಇದರ ಕೇಂದ್ರ ಕಛೇರಿ ಬೆಂಗಳೂರಿನಲ್ಲಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ವಿಘಟನೆ ಅಥವಾ ಬಹುಕೋಶ ಜೀವಿಗಳಲ್ಲಿ ಅಬೀಜ ವಿಘಟನೆ ಅಥವಾ ನಿರ್ಲಿಂಗ ರೀತಿಯಲ್ಲಿ ಸಂತಾನೋತ್ಪತ್ತಿ ಮಾಡುವ ಅಬೀಜ ಜೀವಿ ಅಥವಾ ಅಬೀಜತೆಯೆಂದರೆ ಒಂದು ಜೀವಿಯು ವಿಭಜಿಸಿ ಎರಡು ಬಾಗಗಳಾವುದಾಗಿದೆ. ಈ ಪ್ರತಿಯೊಂದು ಭಾಗವು ಬೆಳೆದು ಪ್ರಬುದ್ಧವಾಗಿ ಬೆಳೆಯುತ್ತದೆ ಹಾಗೂ ಮೂಲ ಜೀವಿಯಂತೆ ಪೂರ್ಣ ಪ್ರಮಾಣದಲ್ಲಿ ಬೆಳೆದು ಸ್ವತಂತ್ರ ಜೀವಿಯಾಗುವುದಾಗಿದೆ. ವಿಭಜನೆಯು ಉದ್ದೇಶಪೂರ್ವಕ ಅಥವಾ ಉದ್ದೇಶಪೂರ್ವಕವಲ್ಲದಾಗಿರಬಹುದು- ಇದು ಮಾನವ ನಿರ್ಮಿತ ಅಥವಾ ನೈಸರ್ಗಿಕವಾಗಿ ಉಂಟಾದ ಹಾನಿಯಿಂದ ಅಥವಾ ಪರಭಕ್ಷಕಗಳಿಂದಾಗಬಹುದು.ಈ ರೀತಿಯ ಜೀವಿಯು ವಿಶೇಷವಾದ ಅಂಗಗಳನ್ನು ಬೆಳೆಸಿಕೊಳ್ಳಬಹುದು ಅಥವಾ ದೇಹದ ಒಂದು ಬಾಗವನ್ನು ಹೊಚಾಚಬಹುದು ಅಥವಾ ಒಮ್ಮೆಲೆ ಒಡೆಯುವದಾಗಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಸಾಮಾನ್ಯ ಲವಣ, ಸೋಡಿಯಂ ಕ್ಲೋರೈಡ್,ಟೇಬಲ್ ಸಾಲ್ಟ್ , ಹೆಲೈಟ್ ಎಂದು ಕರೆಯಲ್ಪಡುವ ಸಾಮಾನ್ಯ ಮನುಷ್ಯನ ದಿನನಿತ್ಯದ ಗೆಳೆಯ ಉಪ್ಪು , ಇದರ ಕುರಿತು ತಿಳಿಯುವುದು ಒಂದು ರೋಚಕವಾದ ಕತೆ. ಕನ್ನಡದ ನಾನ್ನುಡಿ ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ. ಗಾಂಧೀಜಿಯವರು ಬ್ರಿಟಿಷ್ ಸಾಮಾಜ್ಯದ ವಿರುದ್ಧ ಸಮರ ಸಾರಿದ್ದ ಉಪ್ಪಿನ ಸತ್ಯಾಗ್ರಹ (ದಂಢೀ ಯಾತ್ರೆ) ಇವುಗಳು ಉಪ್ಪಿನ ಕುರಿತ ಸಾಮಾಜಿಕ ವಿಷಯಗಳು.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಮೊಬೈಲ್ ಫೋನ್ (ಚರ ದೂರವಾಣಿ) (ಇದನ್ನು ಸೆಲ್ಫೋನ್ ಅಥವಾ ಹ್ಯಾಂಡ್ಫೋನ್ ಎಂತಲೂ ಕರೆಯಲಾಗಿದೆ)ಎಂಬುದು ಸಂವಹನಕ್ಕೆ ಬಳಸಲಾಗುವ ಒಂದು ವಿದ್ಯುನ್ಮಾನ ಉಪಕರಣ ಸಾಧನ. ಸೆಲ್ ಸೈಟ್ಸ್ ಎನ್ನಲಾದ 'ವಿಶಿಷ್ಟ ಬೇಸ್ ಸ್ಟೇಷನ್'ಗಳ 'ಸೆಲ್ಯುಲರ್ ಜಾಲ'ದ ಮೂಲಕ ಮೊಬೈಲ್ ದೂರಸಂವಹನ(ಸೆಲ್ ಸೈಟ್ಸ ಎಂದೂ ಕರೆಯಲಾಗುತ್ತದೆ) ( ಮೊಬೈಲ್ ಫೋನ್ ವ್ಯವಸ್ಥೆ, [[]]ಪಠ್ಯ ಸಂದೇಶ,ಮಾಹಿತಿ ಅಥವಾ ದತ್ತಾಂಶ ರವಾನೆ) ಮಾಡಲು ಈ ದೂರವಾಣಿಯನ್ನು ಬಳಸಲಾಗುತ್ತದೆ. ಮೊಬೈಲ್ಗಳು ನಿಸ್ತಂತು (ಕಾರ್ಡ್ಲೆಸ್) ದೂರವಾಣಿಗಳಿಗಿಂತ ಭಿನ್ನವಾಗಿವೆ.