The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇರಾನ್, (ಪರ್ಷಿಯನ್ ಭಾಷೆಯಲ್ಲಿ: ايران), ಅಧಿಕೃತವಾಗಿ ಇರಾನ್ ಇಸ್ಲಾಮಿ ಗಣರಾಜ್ಯ (ಪರ್ಷಿಯನ್ನಲ್ಲಿ: جمهوری اسلامی ايران - ಜೊಮ್ಹೂರಿ-ಯೆ ಎಸ್ಲಾಮಿ-ಯೆ ಇರಾನ್), ಮುಂಚೆ ಪರ್ಷಿಯ ಎಂದು ಕರೆಯಲ್ಪಡುತ್ತಿದ್ದ ಪಶ್ಚಿಮ ಏಷ್ಯಾ ದೇಶ. ಇದು ಪ್ರಪಂಚದ ೧೮ನೇ ದೊಡ್ಡ ರಾಷ್ಟ್ರವಾಗಿದ್ದು ಸುಮಾರು ೭೦ ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಉತ್ತರಕ್ಕೆ ಅರ್ಮೇನಿಯ, ಅಜರ್ಬೈಜಾನ್ ಮತ್ತು ತುರ್ಕ್ಮೇನಿಸ್ಥಾನ್, ಪೂರ್ವಕ್ಕೆ ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನ, ಮತ್ತು ಪಶ್ಚಿಮಕ್ಕೆ ಟರ್ಕಿ ಮತ್ತು ಇರಾಕ್ಗಳೊಂದಿಗೆ ಸೀಮೆಯನ್ನು ಹೊಂದಿದೆ.
ಬಹ್ರೇನ್ , ಅಧಿಕೃತವಾದ ಬಹ್ರೇನ್ ರಾಜ್ಯ (ಅರೇಬಿಕ್: مملكة البحرين, Mamlakat al-Baḥrayn, ವಾಸ್ತವವಾಗಿ: "ಎರಡು ಸಮುದ್ರಗಳ ರಾಜ್ಯ") ಒಂದು ಸಣ್ಣ ದ್ವೀಪಗಳ ರಾಷ್ಟ್ರ ಪರ್ಷಿಯನ್ ಗಲ್ಫ್ನಲ್ಲಿ ಅಲ್ ಖಲೀಫಾ ರಾಯಲ್ ಪ್ಯಾಮಿಲಿ ಯಿಂದ ಆಳಲ್ಪಡುತ್ತಿತ್ತು. ಸೌದಿ ಅರೇಬಿಯಾ ಪಶ್ಚಿಮಕ್ಕೆ ನೆಲೆನಿಂತಿದೆ ಮತ್ತು ಕಿಂಗ್ ಫಾಹ್ದ ಕಾಸ್ವೇ ಮಾರ್ಗವು ಬಹ್ರೇನ್ಗೆ ಸಂಪರ್ಕಿಸುತ್ತದೆ, ಅದನ್ನು 25 ನವೆಂಬರ್ 1986 ರಂದು ಅಧಿಕೃತವಾಗಿ ತೆರೆಯಲಾಯಿತು. ಖತಾರ್ ಗೆ ಆಗ್ನೇಯ ದಿಕ್ಕಿಗೆ ಬಹ್ರೇನ್ ಗಲ್ಫ್ ಇದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ದಕ್ಷಿಣ ಏಷ್ಯಾವನ್ನು , ದಕ್ಷಿಣಾರ್ಧ ಏಷ್ಯಾ , ಎಂದು ಕೂಡ ಕರೆಯುತ್ತಾರೆ ಇದು ಏಷ್ಯಾ ಖಂಡದ ದಕ್ಷಿಣ ಪ್ರಾಂತ್ಯಗಳಾದ ಹಿಮಾಲಯದ ದಕ್ಷಿಣದಲ್ಲಿರುವ ದೇಶಗಳು ಹಾಗು ಕೆಲವು ಸ್ವತಂತ್ರ ಪ್ರಭುತ್ವ (ಮುಂದೆ ಓದಿ ) , ಇದರೊಂದಿಗೆ ಅಕ್ಕಪಕ್ಕದ ಪಶ್ಚಿಮ ಹಾಗು ಪೂರ್ವದಲ್ಲಿರುವ ಕೆಲವು ನೆರೆಯ ರಾಷ್ಟ್ರಗಳನ್ನು ಒಳಗೊಂಡಿದೆ. ಈ ಪ್ರದೇಶದ ಸ್ವರೂಪಕ್ಕೆ ಸಂಬಂಧಿಸಿದಂತೆ, ಹಿಮಾಲಯ ಹಾಗು ಹಿಂದುಕುಶ್ ಪರ್ವತದ ದಕ್ಷಿಣಕ್ಕೆ ಸಮುದ್ರದ ಮೇಲ್ಮಟ್ಟದಲ್ಲಿ ಎದ್ದಿರುವ ಭಾರತೀಯ ಉಪಖಂಡದ ರೂಪದಲ್ಲಿ ಚಾಚಿ ಕೊಂಡಿರುವ, ಭಾರತೀಯ ಮೇಲ್ಮೈ ಪ್ರದೇಶ (ಇಂಡಿಯನ್ ಪ್ಲೇಟ್) ಪ್ರಧಾನವಾಗಿದೆ. ದಕ್ಷಿಣ ಏಷ್ಯಾವು (ಪ್ರದಕ್ಷಿಣಕಾರವಾಗಿ, ಪಶ್ಚಿಮದಿಂದ ಪೂರ್ವಕ್ಕೆ) ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ, ಪೂರ್ವ ಏಷ್ಯಾ, ದಕ್ಷಿಣ-ಪೂರ್ವ ಏಷ್ಯಾ ಹಾಗು ಹಿಂದು ಮಹಾಸಾಗರದಿಂದ ಆವರಿಸಲ್ಪಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗಣಿಗಾರಿಕೆ ಅಂದರೆ ಉಪಯುಕ್ತ ಖನಿಜಗಳು ಅಥವಾ ಇತರ ಭೂವೈಜ್ಞಾನಿಕ ವಸ್ತುಗಳನ್ನು ಅಂದರೆ ಸಾಮಾನ್ಯವಾಗಿ ಅದಿರುಗಳು, ಲೋಹಗಳು ಅಥವಾ ಕಲ್ಲಿದ್ದಲ ಪದರ ಭೂಮಿಯಿಂದ ಹೊರತೆಗೆಯುವುದಾಗಿದೆ, . ಗಣಿಗಾರಿಕೆಯಿಂದ ಸಿಗುವ ವಸ್ತುಗಳೆಂದರೆ ಕಚ್ಚಾ ಲೋಹಗಳು, ಅಮೂಲ್ಯವಾದ ಲೋಹಗಳು, ಕಬ್ಬಿಣ, ಯುರೇನಿಯಂ, ಕಲ್ಲಿದ್ದಲು, ವಜ್ರಗಳು, ಸುಣ್ಣಕಲ್ಲು, ತೈಲಶಿಲೆ, ಕಲ್ಲುಪ್ಪು ಮತ್ತು ಪೊಟ್ಯಾಶ್. ಈ ವಸ್ತುಗಳನ್ನು ಕೃಷಿ ಮಾಡುವುದರ ಮೂಲಕ ಬೆಳೆಯಲು, ಅಥವಾ ಪ್ರಯೋಗಾಲಯ ಅಥವಾ ಕಾರ್ಖಾನೆಗಳಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಸಾಮಾನ್ಯವಾಗಿ ಭೂಮಿಯಿಂದ ತೆಗೆಯುತ್ತಾರೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ.
ಕೋಲಾರ ಗೋಲ್ಡ್ ಫೀಲ್ಡ್ಸ್ಕೆ(ಕೆ.ಜಿ.ಎಫ್) ಒಂದು ಸಣ್ಣ ಗಣಿಗಾರಿಕೆ ಪಟ್ಟಣವಾಗಿದೆ.ಬಂಗಾರಪೇಟೆ ತಾಲೂಕಿನ,ಕೋಲಾರ ಜಿಲ್ಲೆಯಲ್ಲಿ ಸ್ಥಿತವಾಗಿದೆ.ಇಲ್ಲಿ ನೌಕರರ ಕುಟುಂಬಗಳು ವಾಸಿಸುತ್ತಿದ್ದಾರೆ.ಕೆ.ಜಿ.ಎಫ್ ಪೂರ್ವಭಾಗದಲ್ಲಿ ಒಂದು ಪರ್ವತಗಳ ಸಾಲಿದೆ,ಇದರಲ್ಲಿ ದೊಡ್ಡ ಬೆಟ್ಟ ಪರ್ವತ ಒಂದಾಗಿದೆ.ಇದು ಸಮುದ್ರ ಮಟ್ಟದಿಂದ ೩೧೯೫ ಅಡಿ, ಅತ್ಯಂತ ಎದ್ದುಕಾಣುವ ಬಿಂದುವಾಗಿದೆ.ಕೆ.ಜಿ.ಎಫ್ ನಿಂದ ಸುಮಾರು 30 ಕಿಲೊಮೀಟರ್ ದೂರದಲ್ಲಿ ಕೋಲಾರ ಇದೆ ಹಾಗು ಸುಮಾರು 100 ಕಿಲೊಮೀಟರ್ ಅಂತರದಲ್ಲಿ ಬೆಂಗಳೂರಿದೆ.ಕೆ.ಜಿ.ಎಫ್ ಚಿನ್ನದ ಗಣಿಗಳು ಕಡಿಮೆ ನಿಕ್ಷೇಪಗಳು ಮತ್ತು ಹೆಚ್ಚುತ್ತಿರುವ ಬೆಲೆಯ ಕಾರಣ ಬಿ.ಜಿ.ಎಂ.ಎಲ್ ಮೂಲಕ 2001 ರಲ್ಲಿ ಮುಚ್ಚಲಾಯಿತು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಈರುಳ್ಳಿಯು (ಆಲಿಯಮ್ ಕೆಪಾ ಜಾತಿ ಆಲಿಯಮ್) ಒಂದು ತರಕಾರಿಯಾಗಿ ಬಳಸಲಾಗುವ ಬೆಳೆ. ಅದು ಸಸ್ಯದ ನೆಲದಡಿಯಲ್ಲಿ ಆಹಾರ ಸಂಗ್ರಹಕ್ಕಾಗಿ ಬಳಕೆಯಾಗುವ ಒಂದು ಲಂಬವಾದ ಕುಡಿಯಾಗಿ ಬೆಳೆಯುತ್ತದೆ, ಹಾಗಾಗಿ ಇದನ್ನು ಒಂದು ಗೆಡ್ಡೆಯೆಂದು ತಪ್ಪಾಗಿ ತಿಳಿಯಬಹುದು, ಆದರೆ ಇದು ಗೆಡ್ಡೆಯಲ್ಲ. ಆಲಿಯಮ್ ಕೆಪಾ ಸಾಗುವಳಿಯಲ್ಲಿ ಮಾತ್ರ ಪರಿಚಿತವಾಗಿದೆ ಆದರೆ ಸಂಬಂಧಿತ ಕಾಡು ಜಾತಿಗಳು ಮಧ್ಯ ಏಷ್ಯಾದಲ್ಲಿ ಕಾಣುತ್ತವೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಬುರ್ಕೀನ ಫಾಸೊ, ಅಥವ ಬುರ್ಕೀನ, ಪಶ್ಚಿಮ ಆಫ್ರಿಕಾದ ಒಂದು ಭೂಆವೃತ ದೇಶ. ಇದರ ಉತ್ತರಕ್ಕೆ ಮಾಲಿ, ಪೂರ್ವಕ್ಕೆ ನೈಜರ್, ಆಗ್ನೇಯಕ್ಕೆ ಬೆನಿನ್, ದಕ್ಷಿಣಕ್ಕೆ ಟೊಗೊ ಮತ್ತು ಘಾನ, ಮತ್ತು ಈಶಾನ್ಯಕ್ಕೆ ಕೋತ್ ದ್'ಇವ್ವಾರ್ ದೇಶಗಳಿವೆ. ಮುಂಚೆ "ಮೇಲಿನ ವೋಲ್ಟಾ" ಎಂದು ಕರೆಯಲ್ಪಟ್ಟಿದ್ದ ಈ ದೇಶವನ್ನು ಆಗಸ್ಟ್ ೪, ೧೯೮೪ರಂದು ರಾಷ್ಟ್ರಪತಿ ಥಾಮಸ್ ಸಂಕಾರ ಪ್ರಸಕ್ತ ಹೆಸರಿಗೆ ಬದಲಾಯಿಸಿದನು.