The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕ್ಯೋಟೋ ಶಿಷ್ಟಾಚಾರವು, ಯುನೈಟೆಡ್ ನೇಷನ್ಸ್ ಫ್ರೇಮ್ವರ್ಕ್ ಕನ್ವೆನ್ಷನ್ ಆನ್ ಕ್ಲೈಮೇಟ್ ಚೇಂಜ್ನ (ಹವಾಮಾನ ಬದಲಾವಣೆ ಕುರಿತ ವಿಶ್ವ ಸಂಸ್ಥೆಯ ಕಾರ್ಯವಿಧಾನದ ಚೌಕಟ್ಟೊಳಗಿನ ನಿಯಮಗಳ ಮಹಾಸಭೆ) (UNFCCC ಅಥವಾ FCCC) ಒಂದು ಶಿಷ್ಟಾಚಾರವಾಗಿದೆ. ಜಾಗತಿಕ ತಾಪಮಾನದ ಏರಿಕೆಯನ್ನು ತಡೆಗಟ್ಟುವುದು ಇದರ ಉದ್ದೇಶವಾಗಿದೆ. UNFCCC ಎಂಬುದು ಅಂತಾರಾಷ್ಟ್ರೀಯ ಪರಿಸರೀಯ ಒಪ್ಪಂದವಾಗಿದೆ.
ಪಿಕಾಸಾ ಎಂಬುದು,ತದ್ರೂಪಗಳ, ಡಿಜಿಟಲ್ ಫೋಟೋಗಳನ್ನು(ಛಾಯಾಚಿತ್ರ) ಕ್ರಮಬದ್ಧವಾಗಿ ಸಂಯೋಜಿಸಲು ಮತ್ತು ಸಂಪಾದಿಸಲು ಇರುವ ಚಿತ್ರ ಸಂಯೋಜಕ ಮತ್ತು ವೀಕ್ಷಕರಿಗಾಗಿ ಇರುವ ಚಿತ್ರ ದರ್ಶಕವಾಗಿದೆ. ಅಲ್ಲದೇ ಪರಸ್ಪರರಲ್ಲಿ ಛಾಯಾಚಿತ್ರ-ವಿನಿಮಯವನ್ನು ಏಕೀಕರಿಸುವ ವೆಬ್ ಸೈಟ್ ಕೂಡ ಆಗಿದೆ. ಮೂಲತಃ ಇದನ್ನು ಐಡಿಯಾ ಲ್ಯಾಬ್ ನಿರ್ಮಿಸಿದ್ದು, 2004 ರಿಂದ ಗೂಗಲ್ ಇದರ ನಿರ್ವಹಣೆ ಮಾಡುತ್ತಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಆಟಮನ್ ಸಾಮ್ರಾಜ್ಯ ಅಥವಾ ಆಟಮನ್ ರಾಜ್ಯವು (ಆಟಮನ್ ತುರ್ಕಿ: دولتْ علیّه عثمانیّه ದೇವ್ಲೇಟ್-ಇ ಆಲಿಯೇ-ಯಿ ಉಸ್ಮಾನಿಯೇ, ಆಧುನಿಕ ತುರ್ಕಿ: ಉಸ್ಮಾನ್ಲಿ ಇಂಪಾರಾಟರ್ಲುಗು ಅಥವಾ ಉಸ್ಮಾನ್ಲಿ ದೇವ್ಲೇಟಿ), ಅದರ ಸಮಕಾಲೀನರಿಂದ ತುರ್ಕಿ ಸಾಮ್ರಾಜ್ಯ ಅಥವಾ ಟರ್ಕಿ ಎಂದೂ ಪರಿಚಿತವಾಗಿರುವ (ಆಟಮನ್ ಸಾಮ್ರಾಜ್ಯದ ಇತರ ಹೆಸರುಗಳು ನೋಡಿ), ೧೨೯೯ರಿಂದ ನವಂಬರ್ ೧,೧೯೨೨ರವರೆಗೆ (ಒಂದು ಸಾಮ್ರಾಜ್ಯವಾದಿ ರಾಜಪ್ರಭುತ್ವವಾಗಿ) ಅಥವಾ ಜುಲೈ ೨೪, ೧೯೨೩ರವರೆಗೆ (ಹಕ್ಕಿನಿಂದ ಒಂದು ರಾಜ್ಯವಾಗಿ) ಆಳ್ವಿಕೆ ನಡೆಸಿದ ಒಂದು ಸಾಮ್ರಾಜ್ಯವಾಗಿತ್ತು.
ವಿಶ್ವದಲ್ಲಿಯ ಮಾನವ ನಿರ್ಮಿತ ಮತ್ತು ನೈಸರ್ಗಿಕ ವಿಸ್ಮಯಗಳ ವಿಶ್ವದ ಅದ್ಭುತಗಳನ್ನು ಗುರುತಿಸಲು ಕಾಲಕಾಲಕ್ಕೆ ಹಲವಾರು ರೀತಿಯ ಪಟ್ಟಿಗಳನ್ನು ಮಾಡಲಾಗುತ್ತಿದೆ. ಪ್ರಾಚೀನ ವಿಶ್ವದ ಏಳು ಅದ್ಭುತಗಳು ಈ ರೀತಿಯ ಪಟ್ಟಿ ಗಳಲ್ಲಿ ಮೊದಲನೆಯದು. ಈ ಪಟ್ಟಿಯಲ್ಲಿ ಮಾನವನಿರ್ಮಿತ ಉತ್ಕೃಷ್ಟ ಪ್ರಾಚೀನಾವಶೇಷಗಳನ್ನು ಹೆಲೆನಿಕ್ ಸ್ಥಳ ವೀಕ್ಷಕರ ಮಾಹಿತಿ ಗ್ರಂಥದಲ್ಲಿ ಪಟ್ಟಿ ಮಾಡಲಾಗಿದೆ.
ಮಾಲಿ (ಅಧಿಕೃತ ಹೆಸರು - ಮಾಲಿ ಗಣರಾಜ್ಯ) ಪಶ್ಚಿಮ ಆಫ್ರಿಕಾದಲ್ಲಿ ಸುತ್ತಲೂ ಭೂಪ್ರದೇಶಗಳಿಂದ ಆವೃತವಾಗಿರುವ ಒಂದು ರಾಷ್ಟ್ರ. ಆಫ್ರಿಕಾ ಖಂಡದಲ್ಲಿ ಮಾಲಿ ೭ನೆಯ ಅತಿ ದೊಡ್ಡ ರಾಷ್ಟ್ರ. ಮಾಲಿ ಉತ್ತರಕ್ಕೆ ಅಲ್ಜೀರಿಯ, ಪೂರ್ವಕ್ಕೆ ನೈಜರ್, ದಕ್ಷಿಣದಲ್ಲಿ ಬುರ್ಕಿನಾ ಫಾಸೊ ಮತ್ತು ಕೋತ್ ದ ಐವರಿ, ನೈಋತ್ಯದಲ್ಲಿ ಗಿನಿ ಹಾಗೂ ಪಶ್ಚಿಮಕ್ಕೆ ಸೆನೆಗಾಲ್ ಮತ್ತು ಮಾರಿಟಾನಿಯ ದೇಶಗಳಿವೆ.
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ.ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು..ಈ ಗೀತೆಯನ್ನು ಜನವರಿ ೨೪,೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು,ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು.ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು,ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಭಾರತದ ರಾಷ್ಟ್ರೀಯ ಗಾನ - ವಂದೇ ಮಾತರಮ್ .
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.