The most-visited ಕನ್ನಡ Wikipedia articles, updated daily. Learn more...
ಕೇಂದ್ರೀಯ ಗುಪ್ತಚರ ಸಂಸ್ಥೆ (CIA ) ರಾಷ್ಟ್ರೀಯ ಭದ್ರತೆ ಒದಗಿಸುವ ಮತ್ತು ವರಿಷ್ಠ ನೀತಿ ನಿರೂಪಣಕಾರರಿಗೆ ಸೂಕ್ಷ್ಮ ಗುಪ್ತಚರ ಒದಗಿಸುವ ಅಮೇರಿಕ ಸಂಯುಕ್ತ ಸಂಸ್ಥಾನ ಸರ್ಕಾರದ ನಾಗರೀಕ ಗುಪ್ತಚರ ಸಂಸ್ಥೆ. CIAಯು ಸಂಯುಕ್ತ ಸಂಸ್ಥಾನದ ಅಧ್ಯಕ್ಷರ ಮನವಿ ಮೇರೆಗೆ ತನ್ನನ್ನು ನಿಗೂಢ ಚಟುವಟಿಕೆಗಳಲ್ಲಿ ಕೂಡಾ ತೊಡಗಿಸಿಕೊಳ್ಳುತ್ತವೆ. ಅದು ಎರಡನೆಯ ಜಾಗತಿಕ ಮಹಾಯುದ್ಧದ ಅವಧಿಯಲ್ಲಿ ಸಂಯುಕ್ತ ಸಂಸ್ಥಾನದ ಮಿಲಿಟರಿ ಶಾಖೆಗಳ ನಡುವೆ ಗೂಡಚರ್ಯೆಯನ್ನು ಸಂಯೋಜಿಸಲು ರಚಿಸಲಾಗಿದ್ದ ಆಫೀಸ್ ಆಫ್ ಸ್ಟ್ರ್ಯಾಟೆಜಿಕ್ ಸರ್ವಿಸಸ್ (OSS)ನ ಉತ್ತರಾಧಿ ಸಂಸ್ಥೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
"ಕಾರ್ಮಿಕ ಕಾನೂನು (ಅಥವಾ"ಲೇಬೊರ್", ಅಥವಾ"ಉದ್ಯೋಗ" ಕಾನೂನು) ಇದನ್ನು ಕಾನೂನಿನ ರಚನೆಗಳು ಎನ್ನಲಾಗುತ್ತದೆ.ಅಲ್ಲದೇ ಆಡಳಿತಾತ್ಮಕ ನಿಯಮಗಳು,ಅದಲ್ಲದೇ ಕಾನೂನು ಹಕ್ಕುಗಳ ವಿವರಣೆ ಮಾಡುವ,ನಿಬಂಧನೆಗಳುಕಾರ್ಯನಿರತ ಜನರು ಅಲ್ಲದೇ ಅವರ ಸಂಘಟನೆಗಳ ವಿವರವನ್ನೊಳಗೊಂಡಿದೆ. ಇದು ಟ್ರೇಡ್ ಯುನಿಯನ್,ಕಾರ್ಮಿಕ ಸಂಘಟನೆಗಳ ಸಂಬಂಧಿಸಿದ ಹಲವಾರು ಅಂಶಗಳನ್ನು,ಉದ್ಯೋಗದಾತರು ಮತ್ತು ಕಾರ್ಮಿಕರು ಇವರ ಬಗ್ಗೆ ವಿವರಗಳನ್ನು ತಿಳಿಸುತ್ತದೆ. ಕೆನಡಾದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಕಾನೂನುಗಳು ಒಟ್ಟುಗೂಡಿದ ಕೆಲಸದ ತಾಣಗಳ ಬಗ್ಗೆ ಹೇಳುತ್ತವೆಯೇ ವಿನಹ ವ್ಯಕ್ತಿಗಳ ವಿಷಯವನ್ನಲ್ಲ.
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ.ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು..ಈ ಗೀತೆಯನ್ನು ಜನವರಿ ೨೪,೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು,ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು.ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು,ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಭಾರತದ ರಾಷ್ಟ್ರೀಯ ಗಾನ - ವಂದೇ ಮಾತರಮ್ .
ದೆಹಲಿ , ಸ್ಥಳೀಯವಾಗಿ ದಿಲ್ಲಿ ಎಂದೇ ಹೆಸರಾಗಿರುವ ಹಿಂದಿ:दिल्ली ಪಂಜಾಬಿ:ਦਿੱਲੀ ಉರ್ದು: دلّی dillī ಮತ್ತು ಅಧಿಕೃತವಾಗಿ ನ್ಯಾಷನಲ್ಉರ್ದು: دلّی ಕ್ಯಾಪಿಟಲ್ ಟೆರಿಟರಿ ಆಫ್ ಡೆಲ್ಲಿ (ಎನ್.ಸಿ.ಟಿ) ಎಂದು ಕರೆಯಲ್ಪಡುವ ರಾಷ್ಟ್ರೀಯ ರಾಜಧಾನಿ ನಗರವು ಪ್ರಾದೇಶಿಕವಾಗಿ ಭಾರತದಲ್ಲೇ ಅತಿ ದೊಡ್ಡ ಮಹಾನಗರ ಮತ್ತು ಜನಸಂಖ್ಯೆಯಲ್ಲಿ ಎರಡನೇ ಅತಿ ದೊಡ್ಡ ಮಹಾನಗರವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ೧೨.೨೫ ದಶಲಕ್ಷಕ್ಕೂ ಮಿಕ್ಕಿ ನಿವಾಸಿಗಳು ಮತ್ತು ೧೫.೯ ದಶಲಕ್ಷ ನಗರವಾಸಿಗಳನ್ನು ಹೊಂದಿರುವ ದೆಹಲಿ ಜನಸಂಖ್ಯೆಯಲ್ಲಿ ಜಗತ್ತಿನಲ್ಲೇ ಎಂಟನೇ ದೊಡ್ಡ ನಗರವಾಗಿದೆ. (ಇದರಲ್ಲಿ ನೋಯ್ಡಾ, ಗುರ್ಗಾಂವ್, ಫರಿದಾಬಾದ್ ಮತ್ತು ಘಜೀಯಾಬಾದ್ ಸೇರಿವೆ).