The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೇಂದ್ರೀಯ ಗುಪ್ತಚರ ಸಂಸ್ಥೆ (CIA ) ರಾಷ್ಟ್ರೀಯ ಭದ್ರತೆ ಒದಗಿಸುವ ಮತ್ತು ವರಿಷ್ಠ ನೀತಿ ನಿರೂಪಣಕಾರರಿಗೆ ಸೂಕ್ಷ್ಮ ಗುಪ್ತಚರ ಒದಗಿಸುವ ಅಮೇರಿಕ ಸಂಯುಕ್ತ ಸಂಸ್ಥಾನ ಸರ್ಕಾರದ ನಾಗರೀಕ ಗುಪ್ತಚರ ಸಂಸ್ಥೆ. CIAಯು ಸಂಯುಕ್ತ ಸಂಸ್ಥಾನದ ಅಧ್ಯಕ್ಷರ ಮನವಿ ಮೇರೆಗೆ ತನ್ನನ್ನು ನಿಗೂಢ ಚಟುವಟಿಕೆಗಳಲ್ಲಿ ಕೂಡಾ ತೊಡಗಿಸಿಕೊಳ್ಳುತ್ತವೆ. ಅದು ಎರಡನೆಯ ಜಾಗತಿಕ ಮಹಾಯುದ್ಧದ ಅವಧಿಯಲ್ಲಿ ಸಂಯುಕ್ತ ಸಂಸ್ಥಾನದ ಮಿಲಿಟರಿ ಶಾಖೆಗಳ ನಡುವೆ ಗೂಡಚರ್ಯೆಯನ್ನು ಸಂಯೋಜಿಸಲು ರಚಿಸಲಾಗಿದ್ದ ಆಫೀಸ್ ಆಫ್ ಸ್ಟ್ರ್ಯಾಟೆಜಿಕ್ ಸರ್ವಿಸಸ್ (OSS)ನ ಉತ್ತರಾಧಿ ಸಂಸ್ಥೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಸಾಮ್ರಾಟ್ ಅಶೋಕ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ(ಕ್ರಿ.ಪೂ ೩೦೪ - ಕ್ರಿ.ಪೂ ೨೩೨) . ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ಕಳಿಂಗ ಯುದ್ಧದ ಬಳಿಕ ಬೌದ್ಧ ಮತವನ್ನು ಪ್ರಚಾರಗೊಳಿಸುವುದರಲ್ಲಿ ತೊಡಗಿಕೊಂಡ ಸಾಮ್ರಾಟ್ ಅಶೋಕ, ವಿಶ್ವದೆಲ್ಲೆಡೆ ಬೌದ್ಧ ಮತ ಹರಡುವಲ್ಲಿ ಪ್ರಮುಖ ಪಾತ್ರವಹಿಸಿದವನು.'ಅಶೋಕ' ಶಬ್ಧಕ್ಕೆ - ಸಂಸ್ಕೃತದಲ್ಲಿ ಶೋಕವಿಲ್ಲದ ಎಂಬರ್ಥವಿದೆ.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.