The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಅಡಾಲ್ಫ್ ಹಿಟ್ಲರ್ (German pronunciation: [ˈadɔlf ˈhɪtlɐ], ೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (German: Nationalsozialistische Deutsche Arbeiterparteiಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ (Führer und Reichskanzler ) ಆಡಳಿತ ನಡೆಸಿದನು.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಸ್ವಚ್ಛ ಭಾರತ ಅಭಿಯಾನ (ಆಂಗ್ಲ:Clean India Mission) ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತು. ↑ "Swachh Bharat campaign should become mass movement: Narendra Modi".
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ಚದುರಂಗ (ಚೆಸ್) ಇಬ್ಬರು ಆಟಗಾರರಿ೦ದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ರಾಣಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಹಾರುವ ತಟ್ಟೆ (ಸಾಮಾನ್ಯವಾಗಿ UFO ಅಥವಾ U.F.O. ಎಂದು ಸಂಕ್ಷೇಪಿಸಿ ಹೇಳಲಾಗುತ್ತದೆ) ಎಂಬುದು ಅಂತರಿಕ್ಷದ ಯಾವುದೇ ವಿದ್ಯಮಾನಕ್ಕೆ ಸಂಬಂಧಿಸಿದಂತೆ ಇರುವ ಒಂದು ಜನಪ್ರಿಯ ಪದ. ಈ ವಿದ್ಯಮಾನದ ಕಾರಣ ಅಥವಾ ಮೂಲವನ್ನು ಸುಲಭವಾಗಿ ಅಥವಾ ತತ್ಕ್ಷಣಕ್ಕೆ ವೀಕ್ಷಕರು ಗುರುತಿಸಲು ಆಗುವುದಿಲ್ಲ. ೧೯೫೨ರಲ್ಲಿ ಈ ಪದವನ್ನು ಮೊದಲು ಹುಟ್ಟುಹಾಕಿದ ಅಮೆರಿಕ ಸಂಯುಕ್ತ ಸಂಸ್ಥಾನಗಳ ವಾಯುಪಡೆಯು ಆರಂಭದಲ್ಲಿ ತನ್ನದೇ ಆದ ರೀತಿಯಲ್ಲಿ UFOಗಳನ್ನು ವ್ಯಾಖ್ಯಾನಿಸಿತು.
ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ
ಇಸ್ರೋ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ಣಾಟಕ) ಮತ್ತು ಶ್ರಿಹರಿಕೋಟ (ಆಂದ್ರಪದೆಶ) ಗಳಲ್ಲಿ ಇವೆ.