The most-visited English Wikipedia articles, updated daily. Learn more...
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸಿಖ್ಖ್ಧರ್ಮದ ಸಂಸ್ಥಾಪಕ ಗುರುನಾನಕ್ ಪಶ್ಚಿಮ ಪಂಜಾಬ್ನ (ಈಗಿನ ಪಾಕಿಸ್ತಾನ) ತಳವಂಡಿಯಲ್ಲಿ,ಏಪ್ರಿಲ್ ೧೫, ೧೪೬೯ರಂದು ಹುಟ್ಟಿದರು.ಸಾಮಾನ್ಯ ಹಿಂದೂ ಕುಟುಂಬದ ಕಲ್ಯಾಣ್ ದಾಸ್ ಮತ್ತು ಮೆಹ್ತಾ ತೃಪ್ತ ದಂಪತಿಗಳ ಮಗನಾಗಿ ಜನಿಸಿದರು.ತಮ್ಮ ೧೬ನೇ ವಯಸ್ಸಿನಲ್ಲಿ ಸುಲಾಖನಿಯವರೊಂದಿಗೆ ವಿವಾಹ.ಶ್ರೀಚಂದ್ ಮತ್ತು ಲಕ್ಷ್ಮಿದಾಸ್ ಮಕ್ಕಳು. ಕಾರ್ತಿಕ ಮಾಸದ ಪೌರ್ಣಮಿಯ ದಿನವನ್ನು ಗುರುನಾನಕ್ ಅವರ ಜನ್ಮದಿನವನ್ನಾಗಿ ಆಚರಿಸಲಾಗುತ್ತದೆ. ತುಂಬಾ ಸಹಜ ಮತ್ತು ಸರಳವಾಗಿದ್ದ, ಪವಾಡ ಮಾಡುತ್ತೇನೆಂದು ಹೇಳಿಕೊಳ್ಳದ, ಜನರ ಮಧ್ಯದ ಜೀವ ಗುರುನಾನಕ್.
೨೦೦೮ ರ ನವೆಂಬರ್ ೨೬ ರಂದು ಪಾಕೀಸ್ತಾನದ ೧೦ ಭಯೋತ್ಪಾದಕರು ಸಮುದ್ರದ ಮೂಲಕ ಭಾರತದ ಮುಂಬೈನಲ್ಲಿ ನುಸುಳಿ ೧೬೬ ಜನ ಅಮಾಯಕರನ್ನು ಹತ್ಯೆಗೈದಿದ್ದರು. ಮುಂಬೈನ ಪ್ರತಿಷ್ಠಿತ ತಾಜ್ ಪ್ಯಾಲೇಸ್ ಹೋಟೆಲ್ ಒಳಗೆ ಸಿಕ್ಕಿಹಾಕಿಕೊಂಡಿದ್ದ ಜನರನ್ನು ಪಾರುಮಾಡಲು ನ್ಯಾಷನಲ್ ಸೆಕ್ಯೂರಿಟೀ ಗಾರ್ಡ್ ಕಮಾಂಡೋ ಆಗಿದ್ದ ಸಂದೀಪ್ ಹೋರಾಡುತ್ತಲೇ ಮಡಿದಿದ್ದರು. ಗುಂಡು ಅವರ ಎದೆಗೆ ನಾಟಿದಾಗಲೂ, " ದಯವಿಟ್ಟು ಮೇಲೆಹತ್ತಿಬರಬೇಡಿ; ನಾನೊಬ್ಬನೇ ಅವರನ್ನು ಎದುರಿಸುತ್ತೇನೆ", ಎಂದು ಹೇಳಿ ನುಗ್ಗಿದ ವೀರ ಯೋಧ ಸಂದೀಪ್ ನನ್ನು, ಎನ್.ಎಸ್.ಜಿ.ಅಧಿಕಾರಿಗಳು ನೆನೆಯುತ್ತಾರೆ.
ಟೆಂಪ್ಲೇಟು:Vijayanagara empire ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಮೌಲಾನಾ ಅಬ್ದುಲ್ ಕಲಾಂ ಅಜಾದ್ (ಬಂಗಾಳಿ:আবুল কালাম মুহিয়ুদ্দিন আহমেদ আজাদ, ಉರ್ದು: مولانا ابوالکلام محی الدین احمد آزاد; ನವೆಂಬರ್ ೧೧, ೧೮೮೮ - ಫೆಬ್ರುವರಿ ೨೨, ೧೯೫೮) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ಅವರ ಜನ್ಮದಿನವಾದ ನವೆಂಬರ್ ೧೧ ದಿನಾಂಕವನ್ನು ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.