The most-visited ಕನ್ನಡ Wikipedia articles, updated daily. Learn more...
ಡೆಲ್ ಇಂಕ್ ( NASDAQ: DELL ) 1 ಡೆಲ್ ವೇ, ರೌಂಡ್ ರಾಕ್, ಟೆಕ್ಸಾಸ್, ಯುನೈಟೆಡ್ ಸ್ಟೇಟ್ಸ್, ಅಭಿವೃದ್ಧಿಪಡಿಸುತ್ತದೆ ಮಾರುತ್ತದೆ ಮತ್ತು ಕಂಪ್ಯೂಟರ್ಗಳು ಮತ್ತು ಸಂಬಂಧಿತ ಉತ್ಪನ್ನಗಳು ಮತ್ತು ಸೇವೆಗಳನ್ನು ಬೆಂಬಲಿಸುತ್ತದೆ ಮೂಲದ ಅಮೆರಿಕನ್ ಬಹುರಾಷ್ಟ್ರೀಯ ಕಂಪ್ಯೂಟರ್ ತಂತ್ರಜ್ಞಾನ ನಿಗಮವಾಗಿದೆ. ಅದರ ಸಂಸ್ಥಾಪಕ ಮೈಕೆಲ್ ಡೆಲ್ ಹೆಸರನ್ನು ಹೊಂದಿರುವ ಕಂಪನಿಯು ವಿಶ್ವಾದ್ಯಂತ ಹೆಚ್ಚು 103.300 ಜನರು ಉದ್ಯೋಗ, ವಿಶ್ವದ ಅತಿದೊಡ್ಡ ತಾಂತ್ರಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಡೆಲ್ ಫಾರ್ಚೂನ್ 500 ಪಟ್ಟಿಯಲ್ಲಿ 41 ನೇ ಪಟ್ಟಿ ಇದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜೈನ ತಾತ್ವಿಕ ಭಿತ್ತಿಯಲ್ಲಿ ಯಶೋಧರ ಚರಿತೆಯ ಆಶಯ
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಿಭಿನ್ನವೂ ವಿಶಿಷ್ಟವೂ ಆದ ಕೃತಿಯೆಂದರೆ ಅದು ಜನ್ನನ ಯಶೋಧರ ಚರಿತೆ. ಕಾವ್ಯದ ವಸ್ತು ಮತ್ತು ರೂಪದಲ್ಲೂ, ಅಭಿವ್ಯಕ್ತಿಯ ಸ್ವರೂಪದಲ್ಲೂ, ಕಾವ್ಯೋದ್ದೇಶದಲ್ಲೂ ಇದೊಂದು ಭಿನ್ನ ದಾರಿಯನ್ನೇ ತುಳಿದ ಕೃತಿ. ಸಾಂಪ್ರದಾಯಿಕ ಜೈನಕಾವ್ಯಗಳಿಗಿಂತಲೂ ಬಹಳ ವಿಭಿನ್ನವಾದ ಕೃತಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಬಹ್ರೇನ್ , ಅಧಿಕೃತವಾದ ಬಹ್ರೇನ್ ರಾಜ್ಯ (ಅರೇಬಿಕ್: مملكة البحرين, Mamlakat al-Baḥrayn, ವಾಸ್ತವವಾಗಿ: "ಎರಡು ಸಮುದ್ರಗಳ ರಾಜ್ಯ") ಒಂದು ಸಣ್ಣ ದ್ವೀಪಗಳ ರಾಷ್ಟ್ರ ಪರ್ಷಿಯನ್ ಗಲ್ಫ್ನಲ್ಲಿ ಅಲ್ ಖಲೀಫಾ ರಾಯಲ್ ಪ್ಯಾಮಿಲಿ ಯಿಂದ ಆಳಲ್ಪಡುತ್ತಿತ್ತು. ಸೌದಿ ಅರೇಬಿಯಾ ಪಶ್ಚಿಮಕ್ಕೆ ನೆಲೆನಿಂತಿದೆ ಮತ್ತು ಕಿಂಗ್ ಫಾಹ್ದ ಕಾಸ್ವೇ ಮಾರ್ಗವು ಬಹ್ರೇನ್ಗೆ ಸಂಪರ್ಕಿಸುತ್ತದೆ, ಅದನ್ನು 25 ನವೆಂಬರ್ 1986 ರಂದು ಅಧಿಕೃತವಾಗಿ ತೆರೆಯಲಾಯಿತು. ಖತಾರ್ ಗೆ ಆಗ್ನೇಯ ದಿಕ್ಕಿಗೆ ಬಹ್ರೇನ್ ಗಲ್ಫ್ ಇದೆ.
ಖಗೋಳಶಾಸ್ತ್ರ ಭೂಮಿಯನ್ನು ಮತ್ತು ವಾಯುಮಂಡಲವನ್ನು ಹೊರತುಪಡಿಸಿ ಬ್ರಹ್ಮಾಂಡದ ಪ್ರಸಂಗಗಳನ್ನು ಗಮನಿಸಿ, ಉಲ್ಲೇಖಿಸಿ, ಸಂಶೋಧನೆಗೊಳಪಡಿಸಿ ನಿರೂಪಿಸಿವ ವಿಜ್ಞಾನ.ಬೇರೆ ವಿಜ್ಞಾನದ ವಿಭಾಗಗಳಂತಲ್ಲದೆ ಖಗೋಳಶಾಸ್ತ್ರದಲ್ಲಿ ಹವ್ಯಾಸಿಗಳು ಕೂಡಾ ಸಾಕಷ್ಟು ಕೊಡುಗೆ ನೀಡಬಹುದಾಗಿದೆ.ಹವ್ಯಾಸಿಗಳು ಆಕಸ್ಮಿಕವಾಗಿ,ಒಮ್ಮಿಂದೊಮ್ಮೆಲೆ ಕಾಣಬರುವ ನಕ್ಷತ್ರ ವೈಶಿಷ್ಟ್ಯಗಳನ್ನು ಅಂದರೆ ನೋವಾ, ಸೂಪರ್ನೋವಾಗಳ ಗುರುತಿಸುವಿಕೆ,ಗ್ರಹಣಗಳ ಛಾಯಾಗ್ರಹಣ ಮುಂತಾದ ಸಂದರ್ಭಗಳಲ್ಲಿ ಗಮನಾರ್ಹ ಕೆಲಸ ಮಾಡಬಹುದಾಗಿದೆ. ಆರ್ಯಭಟನನ್ನು ಭಾರತದ ಖಗೋಳಶ್ರಾಸ್ತ್ರದ ಪಿತಾಮಹನೆಂದು ಕರೆಯುತ್ತಾರೆ. ಖಗೋಳಶಾಸ್ತ್ರವು ಅತ್ಯಂತ ಪ್ರಾಚೀನವಾದ ವಿಜ್ಞಾನಯೆಂದು ಕರೆಯುತ್ತಾರೆ ಗಣಿತದ ಮೂಲ ಎಂದು ಕೂಡಾ ಕರೆಯುತ್ತಾರೆ.