The most-visited ಕನ್ನಡ Wikipedia articles, updated daily. Learn more...
'ವರ್ಡ್ಪ್ರೆಸ್ ಎಂಬುದು ಒಂದು ಮುಕ್ತ ಮೂಲದ ಪಠ್ಯವಿಷಯ ನಿರ್ವಹಣಾ ವ್ಯವಸ್ಥೆಯಾಗಿದ್ದು (ಕಂಟೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ-CMS), PHP ಮತ್ತು MySQLನಿಂದ ಚಾಲಿಸಲ್ಪಡುವ ಒಂದು ಬ್ಲಾಗ್ ಪ್ರಕಟಣಾ ಅನ್ವಯಿಕೆಯಾಗಿ ಇದು ಅನೇಕವೇಳೆ ಬಳಸಲ್ಪಡುತ್ತದೆ. ಒಂದು ಪ್ಲಗ್-ಇನ್ ವಿನ್ಯಾಸ ಮತ್ತು ಒಂದು ಪಡಿಯಚ್ಚು ವ್ಯವಸ್ಥೆಯನ್ನು ಒಳಗೊಂಡಂತೆ ಇದು ಅನೇಕ ವೈಶಿಷ್ಟ್ಯಪೂರ್ಣ ಲಕ್ಷಣಗಳನ್ನು ಹೊಂದಿದೆ. ೧,೦೦೦,೦೦೦ದಷ್ಟಿರುವ ಅತಿದೊಡ್ಡ ವೆಬ್ಸೈಟ್ಗಳ ಪೈಕಿ ೧೩%ಗೂ ಹೆಚ್ಚಿನವುಗಳಿಂದ ವರ್ಡ್ಪ್ರೆಸ್ ಬಳಸಲ್ಪಡುತ್ತದೆ.
ದೆಹಲಿ , ಸ್ಥಳೀಯವಾಗಿ ದಿಲ್ಲಿ ಎಂದೇ ಹೆಸರಾಗಿರುವ ಹಿಂದಿ:दिल्ली ಪಂಜಾಬಿ:ਦਿੱਲੀ ಉರ್ದು: دلّی dillī ಮತ್ತು ಅಧಿಕೃತವಾಗಿ ನ್ಯಾಷನಲ್ಉರ್ದು: دلّی ಕ್ಯಾಪಿಟಲ್ ಟೆರಿಟರಿ ಆಫ್ ಡೆಲ್ಲಿ (ಎನ್.ಸಿ.ಟಿ) ಎಂದು ಕರೆಯಲ್ಪಡುವ ರಾಷ್ಟ್ರೀಯ ರಾಜಧಾನಿ ನಗರವು ಪ್ರಾದೇಶಿಕವಾಗಿ ಭಾರತದಲ್ಲೇ ಅತಿ ದೊಡ್ಡ ಮಹಾನಗರ ಮತ್ತು ಜನಸಂಖ್ಯೆಯಲ್ಲಿ ಎರಡನೇ ಅತಿ ದೊಡ್ಡ ಮಹಾನಗರವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ೧೨.೨೫ ದಶಲಕ್ಷಕ್ಕೂ ಮಿಕ್ಕಿ ನಿವಾಸಿಗಳು ಮತ್ತು ೧೫.೯ ದಶಲಕ್ಷ ನಗರವಾಸಿಗಳನ್ನು ಹೊಂದಿರುವ ದೆಹಲಿ ಜನಸಂಖ್ಯೆಯಲ್ಲಿ ಜಗತ್ತಿನಲ್ಲೇ ಎಂಟನೇ ದೊಡ್ಡ ನಗರವಾಗಿದೆ. (ಇದರಲ್ಲಿ ನೋಯ್ಡಾ, ಗುರ್ಗಾಂವ್, ಫರಿದಾಬಾದ್ ಮತ್ತು ಘಜೀಯಾಬಾದ್ ಸೇರಿವೆ).
ಉತ್ತರ ಪ್ರದೇಶವು ನಿಶ್ಚಿತವಾಗಿ "ಉತ್ತರ ಭಾಗದ ಪ್ರಾಂತ್ಯ"[ಆಗಾಗ್ಗೆ ಇದನ್ನು U.P. ಎಂದೂ ಸಹ ಉಲ್ಲೇಖಿಸುವರು] ಭಾರತದ ಉತ್ತರ ಭಾಗದಲ್ಲಿ ನೆಲೆಸಿರುವ ಒಂದು ರಾಜ್ಯವಾಗಿದೆ. ಸುಮಾರು 190 ಮಿಲಿಯನಷ್ಟು ಜನರ ಜನಸಂಖ್ಯೆಯನ್ನು ಹೊಂದಿದೆ, ಇದು ಭಾರತದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ರಾಜ್ಯವಾಗಿದೆ, ಹಾಗೆಯೇ ಪ್ರಪಂಚದಲ್ಲೇ ಹೆಚ್ಚಿನ ಜನಸಂಖ್ಯೆಯು ಈ ರಾಷ್ಟ್ರದ ಒಳಗೆ ಇರುವುದು. ಜೊತೆಗೆ ಉತ್ತರ ಪ್ರದೇಶವು ಹೆಚ್ಚಾಗಿ ಫಲವತ್ತಾದ ಒಂದು ದೊಡ್ಡ ಭಾಗದ ಪ್ರದೇಶವನ್ನು ಆವರಿಸಿದೆ ಮತ್ತು ಗಂಗಾನದಿಯ ಸಮ ತಲ ಪ್ರದೇಶದಲ್ಲಿ ಜನನಿಬಿಡತೆ ಹೊಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಗಳು ಹಾಗೂ ಕಾರಣಗಳು:ಸಂಪಾದಿಸಿ ವಾಯು ಮಾಲಿನ್ಯವು ನೈಸರ್ಗಿಕ ಮೂಲ ಮತ್ತು ಮಾನವ ನಿರ್ಮಿತ ಮೂಲಗಳಿಂದ ಉಂಟಾಗುತ್ತದೆ. ಪ್ರಪಂಚದೆಲ್ಲೆಡೆ ನಡೆಯುವ ದಹನ ಕ್ರಿಯೆ, ನಿರ್ಮಾಣ, ಗಣಿಗಾರಿಕೆ, ಕೃಷಿ ಹಾಗೂ ಯುದ್ದ ಮುಂತಾದ ಮಾನವ ನಿರ್ಮಿತ ಚಟುವಟಿಕೆಗಳಿಂದ ಹೊರಬೀಳುವ ಮಲಿನಕಾರಕಗಳು ವಾಯು ಮಾಲಿನ್ಯವನ್ನು ಹೆಚ್ಚು ಮಾಡಿವೆ. ಮೋಟಾರು ವಾಹನಗಳು ಹೊರಸೂಸುವ ಹೊಗೆಯು ವಾಯು ಮಾಲಿನ್ಯಕ್ಕೆ ಒಂದು ಪ್ರಮುಖವಾದ ಕಾರಣವಾಗಿದೆ.ವಿಶ್ವದ ಪ್ರಮುಖ ರಾಷ್ಟ್ರಗಳಾದ ಚೀನಾ,ಅಮೆರಿಕ ಸಂಯುಕ್ತ ಸಂಸ್ಥಾನಗಳು, ರಷ್ಯಾ, ಮೆಕ್ಸಿಕೊ ಮತ್ತು ಜಪಾನ್ ರಾಷ್ಟ್ರಗಳು ವಾಯು ಮಾಲಿನ್ಯವನ್ನು ಹೊರಸೂಸುವಲ್ಲಿ ಪ್ರಮುಖವಾಗಿವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) ( pronunciation , ಭಾಷಾಂತರ: ಆಂಧ್ರದ ಪ್ರಾಂತ್ಯ ), ಸಂಕ್ಷಿಪ್ತವಾಗಿ A.P. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದಲ್ಲಿ ನಾಲ್ಕನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯಲ್ಲಿ ಐದನೇ ಅತಿ ದೊಡ್ಡ ರಾಜ್ಯವಾಗಿದೆ. ಇದರ ರಾಜಧಾನಿ ಮತ್ತು ಅತ್ಯಂತ ದೊಡ್ಡ ನಗರ ಹೈದರಾಬಾದ್.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ಪೇನ್ ಅಥವ ಸ್ಪೇನ್ ಸಂಸ್ಥಾನ (ಸ್ಪ್ಯಾನಿಷ್:Reino de España), ಆಗ್ನೇಯ ಯುರೋಪಿನ ಐಬೀರಿಯನ್ ದ್ವೀಪಕಲ್ಪದಲ್ಲಿರುವ ಒಂದು ದೇಶ. ಇದರ ದಕ್ಷಿಣ ಮತ್ತು ಪೂರ್ವದಲ್ಲಿ ಮೆಡಿಟರೇನಿಯನ್ ಸಮುದ್ರ ಮತ್ತು ಜಿಬ್ರಾಲ್ಟರ್; ಉತ್ತರದಲ್ಲಿ ಫ್ರಾನ್ಸ್, ಅಂಡೊರ ಮತ್ತು ಬಿಸ್ಕೆ ಕೊಲ್ಲಿ; ಪಶ್ಚಿಮದಲ್ಲಿ ಅಟ್ಲಾಂಟಿಕ್ ಮಹಾಸಾಗರ ಮತ್ತು ಪೋರ್ಚುಗಲ್ ಇವೆ. ಮೆಡಿಟರೇನಿಯನ್ನಲ್ಲಿರುವ ಬಲೇರಿಕ್ ದ್ವೀಪ, ಅಟ್ಲಾಂಟಿಕ್ ಮಹಾಸಗರದಲ್ಲಿರುವ ಕೆನರಿ ದ್ವೀಪ ಮತ್ತು ಉತ್ತರ ಆಫ್ರಿಕದಲ್ಲಿ ಮೊರೊಕ್ಕೊ ನಗರದ ಗಡಿಯಲ್ಲಿರುವ ಸಿಯುಟ ಹಾಗು ಮೆಲಿಲ್ಲ ನಗರಗಳು ಸ್ಪೇನ್ ದೇಶಕ್ಕೆ ಸೇರಿವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಮಿಜಾರುಗುತ್ತು ಡಾ|ಎಂ.ಮೋಹನ್ ಆಳ್ವಅವರು ಶ್ರೀ ಆನಂದ ಆಳ್ವ ಮತ್ತು ಶ್ರೀಮತಿ ಸುಂದರಿ ಆನಂದ ಆಳ್ವ ದಂಪತಿಗಳ ಮಗನಾಗಿ ೩೧-೫-೧೯೫೨ ರಲ್ಲಿ ಜನಿಸಿದರು. ವೈದ್ಯರಾಗಿ, ಕ್ರೀಡಾಪಟುವಾಗಿ, ಕಲಾವಿದರಾಗಿ, ಸಂಘಟಕರಾಗಿ, ಶಿಕ್ಷಣತಜ್ಞರಾಗಿ, ಸಮಾಜಶಾಸ್ತ್ರಜ್ಞರಾಗಿ ಪ್ರಸಿದ್ಧರು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಗೌರವಾರ್ಥ ಆಳ್ವಾಸ್ ನುಡಿಸಿರಿ, ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್, ರಾಷ್ಟ್ರೀಯ ಚಿತ್ರಕಲೆಯ ಚಿತ್ರಸಿರಿ ಮತ್ತು ಶಿಲ್ಪಕಲೆಯ ವರ್ಣವಿರಾಸತ್, ಕ್ರೀಡೆಯ `ಏಕಲವ್ಯ' ಕ್ರೀಡಾಸಂಸ್ಥೆಗಳ ಜನಕರು.
ತರ್ಕ ಮತ್ತು ವಿವೇಚನೆಗಳ ಸಹಾಯದಿಂದ ಪ್ರಪಂಚ, ಜೀವನ, ಅಸ್ತಿತ್ವ, ದೈವತ್ವ, ನೈಜತೆ, ಮುಂತಾದ ಆಳವಾದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಮಾನವನ ಯತ್ನವನ್ನು ತತ್ತ್ವಶಾಸ್ತ್ರ ಎಂದು ಪರಿಗಣಿಸಬಹುದು. ಪ್ರಪಂಚವನ್ನು ಪರಿಶೀಲಿಸುವ ಇತರ ಮಾನವ ಯತ್ನಗಳು ವಿಜ್ಞಾನ ಮತ್ತು ಧಾರ್ಮಿಕತೆ. ಆದರೆ ತತ್ತ್ವಶಾಸ್ತ್ರದಲ್ಲಿ ವಾದಗಳನ್ನು ವಿಜ್ಞಾನದಂತೆ ಪ್ರಯೋಗ ಅಥವ ಅನುಭವದಿಂದ ಧೃಡಪಡಿಸಲಾಗುವುದಿಲ್ಲ ಮತ್ತು ಧಾರ್ಮಿಕತೆಯಲ್ಲಿರುವಂತೆ ನಂಬಿಕೆ ಅಥವ ದೈವಪ್ರೇರಣೆಯನ್ನು ಅವಲಂಬಿಸುವುದಿಲ್ಲ.
ದಕ್ಷಿಣ ಏಷ್ಯಾವನ್ನು , ದಕ್ಷಿಣಾರ್ಧ ಏಷ್ಯಾ , ಎಂದು ಕೂಡ ಕರೆಯುತ್ತಾರೆ ಇದು ಏಷ್ಯಾ ಖಂಡದ ದಕ್ಷಿಣ ಪ್ರಾಂತ್ಯಗಳಾದ ಹಿಮಾಲಯದ ದಕ್ಷಿಣದಲ್ಲಿರುವ ದೇಶಗಳು ಹಾಗು ಕೆಲವು ಸ್ವತಂತ್ರ ಪ್ರಭುತ್ವ (ಮುಂದೆ ಓದಿ ) , ಇದರೊಂದಿಗೆ ಅಕ್ಕಪಕ್ಕದ ಪಶ್ಚಿಮ ಹಾಗು ಪೂರ್ವದಲ್ಲಿರುವ ಕೆಲವು ನೆರೆಯ ರಾಷ್ಟ್ರಗಳನ್ನು ಒಳಗೊಂಡಿದೆ. ಈ ಪ್ರದೇಶದ ಸ್ವರೂಪಕ್ಕೆ ಸಂಬಂಧಿಸಿದಂತೆ, ಹಿಮಾಲಯ ಹಾಗು ಹಿಂದುಕುಶ್ ಪರ್ವತದ ದಕ್ಷಿಣಕ್ಕೆ ಸಮುದ್ರದ ಮೇಲ್ಮಟ್ಟದಲ್ಲಿ ಎದ್ದಿರುವ ಭಾರತೀಯ ಉಪಖಂಡದ ರೂಪದಲ್ಲಿ ಚಾಚಿ ಕೊಂಡಿರುವ, ಭಾರತೀಯ ಮೇಲ್ಮೈ ಪ್ರದೇಶ (ಇಂಡಿಯನ್ ಪ್ಲೇಟ್) ಪ್ರಧಾನವಾಗಿದೆ. ದಕ್ಷಿಣ ಏಷ್ಯಾವು (ಪ್ರದಕ್ಷಿಣಕಾರವಾಗಿ, ಪಶ್ಚಿಮದಿಂದ ಪೂರ್ವಕ್ಕೆ) ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ, ಪೂರ್ವ ಏಷ್ಯಾ, ದಕ್ಷಿಣ-ಪೂರ್ವ ಏಷ್ಯಾ ಹಾಗು ಹಿಂದು ಮಹಾಸಾಗರದಿಂದ ಆವರಿಸಲ್ಪಟ್ಟಿದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.