The most-visited ಕನ್ನಡ Wikipedia articles, updated daily. Learn more...
thumb|ಅರ್ಜೆಂಟೀನಾ ಕಛೇರಿಗಳು ಫೇಸ್ಬುಕ್ ಒಂದು ವಿಶ್ವವ್ಯಾಪಕವಾದ ಸಾಮಾಜಿಕ ಸಂಪರ್ಕದ ಜಾಲತಾಣ, ಇದರ ಕಾರ್ಯಾಚರಣೆ ನಿರ್ವಹಿಸುವ ಮತ್ತು ಖಾಸಗಿಯಾಗಿ ಮಾಲಿಕತ್ವ ಹೊಂದಿರುವ ಕಂಪನಿ Facebook, Inc. ಬಳಕೆದಾರರು ತಮ್ಮ ಮಿತ್ರರನ್ನು ಇಲ್ಲಿ ಸೇರಿಸಬಹುದು ಮತ್ತು ಅವರಿಗೆ ಸಂದೇಶಗಳನ್ನು ಕಳುಹಿಸಬಹುದು, ಮತ್ತು ತಮ್ಮ ವೈಯುಕ್ತಿಕ ವ್ಯಕ್ತಿಚಿತ್ರವನ್ನು ಸಹ ನವೀಕರಿಸಿ ಮಿತ್ರರಿಗೆ ತಮ್ಮ ಬಗ್ಗೆ ಪ್ರಕಟಿಸಬಹುದು. ಇದರ ಜೊತೆಗೆ, ಬಳಕೆದಾರರು ಊರು, ಕಾರ್ಯಾಲಯ, ಶಾಲೆ, ಮತ್ತು ಪ್ರದೇಶದವರು ಸಂಘಟಿಸಿದ ಸಂಪರ್ಕಜಾಲದಲ್ಲಿ ಸೇರಬಹುದು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಕಿಸ್ ಇದು ಅಮೇರಿಕಾದ ಹಾರ್ಡ್ ರಾಕ್ ಬ್ಯಾಂಡಿನ ಹೆಸರು. ಇದನ್ನು ನ್ಯೂ ಯಾರ್ಕ್ ನಗರದಲ್ಲಿ ಜನವರಿ 1973 ರಲ್ಲಿ ರಚಿಸಲಾಯಿತು. (ಹಾರ್ಡ್ ರಾಕ್: ಗಂಭೀರ ಲಯದ ಸಂಗೀತ; ಬ್ಯಾಂಡ್:ವಾದ್ಯವೃಂದ/ವಾದ್ಯ ಗೋಷ್ಟಿ/ವಾದ್ಯಮೇಳ) ಈ ತಂಡವನ್ನು ಅದರ ಸದಸ್ಯರ ಮುಖಕ್ಕೆ ಬಣ್ಣ ಹಚ್ಚಿಕೊಳ್ಳುವ ಶೈಲಿಯಿಂದ ಹಾಗು ರಂಗದ (ಸ್ಟೇಜ್) ಮೇಲೆ ಇವರು ಧರಿಸುವ ಆಕರ್ಷಕ ಉಡುಗೆ ತೊಡುಗೆಗಳಿಂದ ಸುಲಭವಾಗಿ ಗುರುತು ಹಚ್ಚಬಹುದು.
ಬೆಥ್ಲೆಹೆಮ್ (ಅರೇಬಿಕ್: بَيْتِ لَحْمٍ, Bayt Laḥm , ನ್ನು ಲಿಟ್ "ಹೌಸ್ ಆಫ್ ಮೀಟ್ "; ಹೀಬ್ರೂ:בֵּית לֶחֶם, ಬಿಯಟ್ ಲೆಹೆಮ್ ,ಅಥವಾ ಲಿಟ್ "ಹೌಸ್ ಆಫ್ ಬ್ರೆಡ್;" Greek: Βηθλεέμ ಎನ್ನಲಾಗುತ್ತದೆ.| ಬೆಥ್ಲೆಹೆಮ್ ) ಒಂದು ೧೦ kilometers (೬ mi)ಪ್ಯಾಲೇಸ್ಟಿನಿಯನ್ನ ಮಧ್ಯದ ಪಶ್ಚಿಮ ದಂಡೆಯಲ್ಲಿರುವ ದಕ್ಷಿಣ ಜೆರುಸಲೆಮ್ ನ ಒಂದು ನಗರವಾಗಿದೆ.ಇದರ ಒಟ್ಟು ಅಂದಾಜು ಜನಸಂಖ್ಯೆಯು 30,000 ರಷ್ಟಿದೆ. ಇದು ಪ್ಯಾಲೇಸ್ಟಿನಿಯನ್ ನ್ಯಾಶನಲ್ ಆಥಾರಿಟಿಯ ಬೆಥ್ ಲೆಹಮ್ ಗವರ್ನೇಟ್ ಗೆ ರಾಜಧಾನಿಯಾಗಿದ್ದು ಅಲ್ಲದೇ ಪ್ಯಾಲೇಸ್ಟೇನಿಯನ್ ಸಂಸ್ಕೃತಿ ಮತ್ತು ಪ್ರವಾಸೋದ್ಯಮಕ್ಕೆ ಕೇಂದ್ರ ತಾಣವಾಗಿದೆ. ದಿ ಹೀಬ್ರೂ ಬೈಬಲ್ ಪ್ರಕಾರ ಬೆಥ್ಲೆಹೆಮ್ ಅನ್ನು ಡೇವಿಡ್ ಎಂಬಾತ ಆಳುತ್ತಿದ್ದನಲ್ಲದೇ ಅದೇ ಸಂದರ್ಭದಲ್ಲಿ ಆತನಿಗೆ ಕಿಂಗ್ ಆಫ್ ಇಸ್ರೇಲ್ ಎಂಬ ಕಿರೀಟವನ್ನು ಇದೇ ಸ್ಥಳದಲ್ಲಿ ತೊಡಿಸಲಾಗಿತ್ತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ.ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು..ಈ ಗೀತೆಯನ್ನು ಜನವರಿ ೨೪,೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು,ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು.ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು,ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಭಾರತದ ರಾಷ್ಟ್ರೀಯ ಗಾನ - ವಂದೇ ಮಾತರಮ್ .
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ದೇಶದ ಪಂಚ ವಾರ್ಷಿಕ ಯೋಜನೆಗಳು
ಭಾರತ ಸರ್ಕಾರ ಇಲ್ಲಿಯವರೆಗೆ ೧೧ ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪ್ಯಾನ್ ಅಮೆರಿಕನ್ ಕ್ಲಿಪ್ಪರ್-೭೩ ವಿಮಾನದ ಗಗನ ಸಖಿಯರ ಮುಖ್ಯಸ್ಥೆಯಾಗಿದ್ದ ಭಾರತೀಯ ವೀರ ಮಹಿಳೆ, ನೀರಜಾ ಭಾನೋಟ್ ವಿಮಾನಯಾನದ ಇತಿಹಾಸದಲ್ಲಿ ಒಂದು ಮರೆಯಲಾರದ ವಿಕ್ರಮವನ್ನು ಸ್ಥಾಪಿಸಿದ್ದರು. ಅವರ ಪ್ರೀತಿಯ ತಂದೆ, ಹರೀಶ್ ಭಾನೋಟ್ ರವರು ಮಗಳನ್ನು 'ಲಾಡೋ'(ಪ್ರೀತಿಪಾತ್ರಳು ಎಂಬರ್ಥದಲ್ಲಿ),ಎಂದು ಸಂಬೋಧಿಸುತ್ತಿದ್ದರು. ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಬಂಧಿತವಾಗಿದ್ದ ಪ್ಯಾನ್ ಅಮೆರಿಕನ್ ವಿಮಾನದ ಪರಿಚಾರಿಕೆಯಾಗಿದ್ದ ನೀರಜರವರ ಹಣೆಗೆ ಗುಂಟಿಟ್ಟು ನಿಂತಿದ್ದ ೪ ಜನ ಭಯೋತ್ಪಾದಕರಿಂದ ೩೦೦ ಕ್ಕೂ ಅಧಿಕಮಂದಿ ಪ್ರಯಾಣಿಕರಿಗೆ ಪುನರ್ಜನ್ಮಕೊಟ್ಟು ತಮ್ಮ ತಮ್ಮ ಜೀವವನ್ನೇ ಆಹುತಿಯಾಗಿ ಅರ್ಪಿಸಿದ 'ನೀರಜಾ ಭಾನೋಟ್', ತಮ್ಮ ೨೪ ನೇ ವರ್ಷದ ಹುಟ್ಟುಹಬ್ಬದಂದು ಈ ಶೌರ್ಯದ ಕಾರ್ಯವೆಸಗಿ ಅಮರರಾದರು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ಕರ್ನಾಟಕ ಏಕೀಕರಣ : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ.
ದಿ ರೆಸ್ಕ್ಯೂವರ್ಸ್ ೧೯೭೭ರ ಅಮೇರಿಕಾದ ಒಂದು ಆನಿಮೇಟಡ್ ಚಲನಚಿತ್ರ ವಾಲ್ಟ್ ಡಿಸ್ನಿ ಪ್ರೊಡಕ್ಷನ್ಸ್ ನಿರ್ಮಾಣದ ಮೊದಲ ಜೂನ್ ೨೨, ೧೯೭೭ ರಂದು ಬಿಡುಗಡೆ. ವಾಲ್ಟ್ ಡಿಸ್ನಿ ಅನಿಮೇಟೆಡ್ ಶಾಸ್ತ್ರೀಯ ಸರಣಿಯಲ್ಲಿ ೨೩ ಚಿತ್ರ ಚಿತ್ರ ದೊಡ್ಡ ಜಗತ್ತಿನ ಸುತ್ತ ಅಪಹರಣ ಬಲಿಪಶುಗಳು ಸಹಾಯ ಮೀಸಲಿಟ್ಟ ಪಾರುಗಾಣಿಕಾ ಚಿಕಿತ್ಸೆ ಸೊಸೈಟಿ, ನ್ಯೂ ಯಾರ್ಕ್ ಪ್ರಧಾನ ಕಚೇರಿಯನ್ನು ಮತ್ತು ಯುನೈಟೆಡ್ ನೇಷನ್ಸ್ ನೆರಳು ಅಂತಾರಾಷ್ಟ್ರೀಯ ಮೌಸ್ ಸಂಘಟನೆ, ಸುಮಾರು. ಈ ಇಲಿಗಳ ಎರಡು, ಭಯಗ್ರಸ್ತ ದ್ವಾರಪಾಲಕ ಬರ್ನಾರ್ಡ್ (ಬಾಬ್ ನ್ಯೂಹಾರ್ಟ್) ಮತ್ತು ಅವರ ಸಹ-ದಳ್ಳಾಲಿ, ಸೊಗಸಾದ ಮಿಸ್ ಬಿಯಾಂಕಾ (ಇವಾ ಗ್ಯಾಬೊರ್), ಪೆನ್ನಿ (ಮಿಷೆಲ್ ಸ್ಟೇಸಿ), ನಿಧಿ ಹಂಟ್ರೆಸ್ ಮೂಲಕ ಡೆವಿಲ್ಸ್ ಬೇಊ ರಲ್ಲಿ ಖೈದಿ ಬಂಧಿಗಳಾಗಿದ್ದ ಒಂದು ಅನಾಥ ಹುಡುಗಿಯ ರಕ್ಷಿಸಲು ಔಟ್ ಸೆಟ್ ಮೇಡಮ್ ಮೆಡ್ಯುಸಾ (ಜೆರಾಲ್ಡೀನ್ ಪುಟ).