The most-visited ಕನ್ನಡ Wikipedia articles, updated daily. Learn more...
ಅಡಾಲ್ಫ್ ಹಿಟ್ಲರ್ (German pronunciation: [ˈadɔlf ˈhɪtlɐ], ೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (German: Nationalsozialistische Deutsche Arbeiterparteiಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ (Führer und Reichskanzler ) ಆಡಳಿತ ನಡೆಸಿದನು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಕಂಪ್ಯೂಟರ್ ಪ್ರೋಗ್ರಾಮಿಂಗ್(ಗಣಕಯಂತ್ರ ಕಾರ್ಯತಂತ್ರ) ಗಣಕ ವಿಜ್ಞಾನದ ಅತಿ ಮುಖ್ಯ ಭಾಗ. ಅದು ಒಂದು ಗಣಕ ಸಮಸ್ಯೆಯ ಮೂಲ ಸೂತ್ರದಿಂದ ಕಾರ್ಯಗತಗೊಳ್ಳುವ ಕಂಪ್ಯೂಟರ್ ಪ್ರೋಗ್ರಾಂ ಗೆ ಕೊಂಡೊಯ್ಯುವ ಒಂದು ಪ್ರಕ್ರಿಯೆ. ಪ್ರೋಗ್ರಾಮಿಂಗ್ ನಲ್ಲಿ ವಿಶ್ಲೇಷಣೆ, ತಿಳುವಳಿಕೆ ಅಭಿವೃದ್ಧಿ, ಕ್ರಮಾವಳಿಗಳ ಉತ್ಪಾದನೆ, ಅವುಗಳ ಅಗತ್ಯಗಳ ಪರಿಶೀಲನೆ, ಆ ಅಗತ್ಯಗಳ ಮತ್ತು ಕ್ರಮಾವಳಿಯ ಸಂಪನ್ಮೂಲಗಳ ಬಳಕೆ, ಹಾಗೂ ಆ ಕ್ರಮಾವಳಿಯನ್ನು ಒಂದು ಗುರುತ್ತಿಸಿರುವ ಪ್ರೋಗ್ರಾಮಿಂಗ್ ಭಾಷೆಯಲ್ಲಿ ಅನುಷ್ಠಾನ ಪಡೆಸುವ ಇಷ್ಟು ಚಟುವಟಿಕೆಗಳು ಒಳಗೊಂಡಿವೆ.ಸೋರ್ಸ್ ಕೋಡನ್ನು ಬಹುತೇಕ ಪ್ರೋಗ್ರಾಮಿಂಗ್ ಭಾಷೆಗಳಲ್ಲಿ ಬರೆಯಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಪ್ಯಾನ್ ಅಮೆರಿಕನ್ ಕ್ಲಿಪ್ಪರ್-೭೩ ವಿಮಾನದ ಗಗನ ಸಖಿಯರ ಮುಖ್ಯಸ್ಥೆಯಾಗಿದ್ದ ಭಾರತೀಯ ವೀರ ಮಹಿಳೆ, ನೀರಜಾ ಭಾನೋಟ್ ವಿಮಾನಯಾನದ ಇತಿಹಾಸದಲ್ಲಿ ಒಂದು ಮರೆಯಲಾರದ ವಿಕ್ರಮವನ್ನು ಸ್ಥಾಪಿಸಿದ್ದರು. ಅವರ ಪ್ರೀತಿಯ ತಂದೆ, ಹರೀಶ್ ಭಾನೋಟ್ ರವರು ಮಗಳನ್ನು 'ಲಾಡೋ'(ಪ್ರೀತಿಪಾತ್ರಳು ಎಂಬರ್ಥದಲ್ಲಿ),ಎಂದು ಸಂಬೋಧಿಸುತ್ತಿದ್ದರು. ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಬಂಧಿತವಾಗಿದ್ದ ಪ್ಯಾನ್ ಅಮೆರಿಕನ್ ವಿಮಾನದ ಪರಿಚಾರಿಕೆಯಾಗಿದ್ದ ನೀರಜಾರವರ ಹಣೆಗೆ ಗುಂಡಿಟ್ಟು ನಿಂತಿದ್ದ ೪ ಜನ ಭಯೋತ್ಪಾದಕರಿಂದ ೩೦೦ ಕ್ಕೂ ಅಧಿಕಮಂದಿ ಪ್ರಯಾಣಿಕರಿಗೆ ಪುನರ್ಜನ್ಮಕೊಟ್ಟು ತಮ್ಮ ತಮ್ಮ ಜೀವವನ್ನೇ ಆಹುತಿಯಾಗಿ ಅರ್ಪಿಸಿದ 'ನೀರಜಾ ಭಾನೋಟ್', ತಮ್ಮ ೨೪ ನೇ ವರ್ಷದ ಹುಟ್ಟುಹಬ್ಬದಂದು ಈ ಶೌರ್ಯದ ಕಾರ್ಯವೆಸಗಿ ಅಮರರಾದರು.
ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ಕರ್ನಾಟಕ ಏಕೀಕರಣ : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಗಳು ಶಾಶ್ವತವಾಗಿರಬಹುದು ಅಥವಾ ತಾತ್ಕಾಲಿಕವಾಗಿರಬಹುದು.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.