The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಅಡಾಲ್ಫ್ ಹಿಟ್ಲರ್ (German pronunciation: [ˈadɔlf ˈhɪtlɐ], ೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (German: Nationalsozialistische Deutsche Arbeiterparteiಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ (Führer und Reichskanzler ) ಆಡಳಿತ ನಡೆಸಿದನು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಐರ್ಲೆಂಡ್ ಗಣರಾಜ್ಯ (ಐರಿಷ್:Poblacht na hÉireann) ಎಂದೂ ಕರೆಯಲಾದ ಐರ್ಲೆಂಡ್ (pronounced /ˈaɪərlənd/ ( listen), ಟೆಂಪ್ಲೇಟು:IPA2, ಐರಿಷ್:Éire, pronounced [ˈeːɾʲə] ( )),ಐರಿಷ್:Poblacht na hÉireann ವಾಯುವ್ಯ ಯುರೋಪ್ನ ಒಂದು ದೇಶ. ಆಧುನಿಕ ಸಾರ್ವಭೌಮ ದೇಶವು ಐರ್ಲೆಂಡ್ ದ್ವೀಪದ ಸುಮಾರು ಆರನೆಯ ಐದು ಭಾಗದಷ್ಟಿದೆ. 1921ರಲ್ಲಿ ಈ ದ್ವೀಪವನ್ನು ಎರಡು ಅಧಿಕಾರ ವ್ಯಾಪ್ತಿಗಳನ್ನಾಗಿ ಇಬ್ಭಾಗ ಮಾಡಲಾಯಿತು.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಷ್ಯಾ (ರಷ್ಯನ್: Россия), ಅಧಿಕೃತವಾಗಿ ರಸಿಸ್ಕಾಯಾ ಫೇಡರಾಟ್ಸಿಯ (ರಷ್ಯನ್: Российская Федерация - ರಷ್ಯಾದ ಒಕ್ಕೂಟ), ಉತ್ತರ ಯುರೇಷಿಯಾ (ಯುರೋಪ್ ಹಾಗೂ ಏಷ್ಯಾ ಒಟ್ಟಿಗೆ)ದಲ್ಲಿರುವ ಒಂದು ದೇಶ. ಇದೊಂದು 83 ಬಿಡಿ ಸಂಸ್ಥಾನಗಳನ್ನು ಹೊಂದಿರುವ ಅರೆ-ಅಧ್ಯಕ್ಷೀಯ ಒಕ್ಕೂಟವಾಗಿದೆ. ರಷ್ಯಾ ತನ್ನ ಭೂಗಡಿಗಳನ್ನು ಈ ದೇಶಗಳೊಂದಿಗೆ ಹಂಚಿಕೊಂಡಿದೆ (ವಾಯುವ್ಯದಿಂದ ಆಗ್ನೇಯದವರೆಗೆ) : ನಾರ್ವೆ, ಫಿನ್ಲ್ಯಾಂಡ್, ಎಸ್ಟೊನಿಯಾ, ಲಾಟ್ವಿಯಾ, ಲಿಥುವೇನಿಯಾ (ಕಲಿನಿನ್ಗ್ರಾಡ್ ಓಬ್ಲಸ್ಟ್ ಮೂಲಕ), ಪೋಲೆಂಡ್ (ಕಲಿನಿನ್ಗ್ರಾಡ್ ಓಬ್ಲಸ್ಟ್ ಮೂಲಕ), ಬೆಲಾರೂಸ್, ಉಕ್ರೇನ್, ಜಾರ್ಜಿಯಾ, ಅಜರ್ಬೈಜಾನ್, ಕಜಕ್ಸ್ತಾನ್, ಚೀನಾ, ಮಂಗೋಲಿಯಾ ಮತ್ತು ಉತ್ತರ ಕೊರಿಯಾ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕಂಪ್ಯೂಟರ್ ಪ್ರೋಗ್ರಾಮಿಂಗ್(ಗಣಕಯಂತ್ರ ಕಾರ್ಯತಂತ್ರ) ಗಣಕ ವಿಜ್ಞಾನದ ಅತಿ ಮುಖ್ಯ ಭಾಗ. ಅದು ಒಂದು ಗಣಕ ಸಮಸ್ಯೆಯ ಮೂಲ ಸೂತ್ರದಿಂದ ಕಾರ್ಯಗತಗೊಳ್ಳುವ ಕಂಪ್ಯೂಟರ್ ಪ್ರೋಗ್ರಾಂ ಗೆ ಕೊಂಡೊಯ್ಯುವ ಒಂದು ಪ್ರಕ್ರಿಯೆ. ಪ್ರೋಗ್ರಾಮಿಂಗ್ ನಲ್ಲಿ ವಿಶ್ಲೇಷಣೆ, ತಿಳುವಳಿಕೆ ಅಭಿವೃದ್ಧಿ, ಕ್ರಮಾವಳಿಗಳ ಉತ್ಪಾದನೆ, ಅವುಗಳ ಅಗತ್ಯಗಳ ಪರಿಶೀಲನೆ, ಆ ಅಗತ್ಯಗಳ ಮತ್ತು ಕ್ರಮಾವಳಿಯ ಸಂಪನ್ಮೂಲಗಳ ಬಳಕೆ, ಹಾಗೂ ಆ ಕ್ರಮಾವಳಿಯನ್ನು ಒಂದು ಗುರುತ್ತಿಸಿರುವ ಪ್ರೋಗ್ರಾಮಿಂಗ್ ಭಾಷೆಯಲ್ಲಿ ಅನುಷ್ಠಾನ ಪಡೆಸುವ ಇಷ್ಟು ಚಟುವಟಿಕೆಗಳು ಒಳಗೊಂಡಿವೆ.ಸೋರ್ಸ್ ಕೋಡನ್ನು ಬಹುತೇಕ ಪ್ರೋಗ್ರಾಮಿಂಗ್ ಭಾಷೆಗಳಲ್ಲಿ ಬರೆಯಲಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಹಸಿರು ಕಳ್ಳಿಪೀರ ("ಮೆರಾಪ್ಸ್ ಓರಿಯೆಂಟಲಿಸ್") ಕಳ್ಳಿಪೀರ ಕುಟುಂಬದ ಒಂದು ಪ್ಯಾಸರೀನ್ ಪಕ್ಷಿಯಾಗಿದೆ.ಇದು ವ್ಯಾಪಕವಾಗಿ ಉಪ ಸಹಾರಾ ಆಫ್ರಿಕಾದ ಸೆನೆಗಲ್ ಮತ್ತು ಗ್ಯಾಂಬಿಯಾದಿಂದ ಇಥಿಯೋಪಿಯದವರೆಗೆ,ನೈಲ್ ಕಣಿವೆಯಲ್ಲಿ,ಪಶ್ಚಿಮ ಅರೇಬಿಯಾ,ಮತ್ತು ಏಷ್ಯಾದ ಭಾರತದಿಂದ ವಿಯೆಟ್ನಾಮ್ ವರೆಗೆ ಹಬ್ಬಿದೆ. ಈ ಜಾತಿ ಮುಖ್ಯವಾಗಿ ಕೀಟ ತಿನ್ನುವ ಮತ್ತು ಅವು ಹುಲ್ಲುಗಾವಲು, ತೆಳುವಾದ ಪೊದೆಗಳು ಮತ್ತು ಸಾಮಾನ್ಯವಾಗಿ ತೀರಾ ನೀರಿಲ್ಲದ ಕಾಡಿನಲ್ಲಿ ಕಂಡುಬಂದಿಲ್ಲ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
"ಕಾರ್ಮಿಕ ಕಾನೂನು (ಅಥವಾ"ಲೇಬೊರ್", ಅಥವಾ"ಉದ್ಯೋಗ" ಕಾನೂನು) ಇದನ್ನು ಕಾನೂನಿನ ರಚನೆಗಳು ಎನ್ನಲಾಗುತ್ತದೆ.ಅಲ್ಲದೇ ಆಡಳಿತಾತ್ಮಕ ನಿಯಮಗಳು,ಅದಲ್ಲದೇ ಕಾನೂನು ಹಕ್ಕುಗಳ ವಿವರಣೆ ಮಾಡುವ,ನಿಬಂಧನೆಗಳುಕಾರ್ಯನಿರತ ಜನರು ಅಲ್ಲದೇ ಅವರ ಸಂಘಟನೆಗಳ ವಿವರವನ್ನೊಳಗೊಂಡಿದೆ. ಇದು ಟ್ರೇಡ್ ಯುನಿಯನ್,ಕಾರ್ಮಿಕ ಸಂಘಟನೆಗಳ ಸಂಬಂಧಿಸಿದ ಹಲವಾರು ಅಂಶಗಳನ್ನು,ಉದ್ಯೋಗದಾತರು ಮತ್ತು ಕಾರ್ಮಿಕರು ಇವರ ಬಗ್ಗೆ ವಿವರಗಳನ್ನು ತಿಳಿಸುತ್ತದೆ. ಕೆನಡಾದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಕಾನೂನುಗಳು ಒಟ್ಟುಗೂಡಿದ ಕೆಲಸದ ತಾಣಗಳ ಬಗ್ಗೆ ಹೇಳುತ್ತವೆಯೇ ವಿನಹ ವ್ಯಕ್ತಿಗಳ ವಿಷಯವನ್ನಲ್ಲ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ೧೯೬೧ದಲ್ಲಿ ಸ್ಥಾಪಿಸಲಾಯಿತು. ೧೯೬೧ರಲ್ಲಿ ೧೭೯೨ ಬಸ್ಸುಗಳಿದ್ದವು. ಸಂಸ್ಥೆಯು ಕರ್ನಾಟಕ ಸರ್ಕಾರದ ಮಾಲೀಕತ್ವದಲ್ಲಿದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.