The most-visited ಕನ್ನಡ Wikipedia articles, updated daily. Learn more...
ಮದ್ಯದ ಗೀಳು ಅಥವಾ ಮದ್ಯಪಾನದ ವ್ಯಸನವೆಂದರೆ ಮದ್ಯದ ಮೇಲಿನ ಅವಲಂಬನೆ ,ಇದು ಹವ್ಯಾಸವನ್ನು ಚಟವಾಗಿಸುತ್ತದೆ;ಇದರಿಂದಾಗಿ ಮನುಷ್ಯ ತನ್ನ ನಿಯಂತ್ರಣ ಕಳೆದುಕೊಂಡು ಮದ್ಯಪಾನದಿಂದಾಗಿ ತನ್ನ ಆರೋಗ್ಯ,ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುತ್ತಾನೆ.ತನ್ನ ಬದುಕಿನ ಮೌಲ್ಯಗಳಿಗೂ ಆತ ಎರವಾಗುತ್ತಾನೆ. ಮಾದಕ ವಸ್ತುಗಳ ದುರಭ್ಯಾಸದಂತೆ ಮದ್ಯದ ಗೀಳನ್ನು ಸಹ ವೈದ್ಯಕೀಯವಾಗಿ ಗುಣಪಡಿಸಬಹುದಾದ ಕಾಯಿಲೆ ಯಾಗಿದೆ. ಸುಮಾರು 19 ಮತ್ತು 20ನೆಯ ಶತಮಾನದ ಆರಂಭದಲ್ಲಿ ಇದನ್ನು ಮದ್ಯದ ದುರ್ವ್ಯಸನ ಎಂದು ಕರೆಯಲಾಗುತಿತ್ತು.ಈಗ ಆಶಬ್ದವನ್ನು ಮದ್ಯದ ಗೀಳು ಅಥವಾ ಅಲ್ಕೊಹಾಲಿಸಮ್ ಆಕ್ರಮಿಸಿದೆ.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
೧೯೭೦ : ಭಾರತೀಯ ವಿಜ್ಞಾನಿ ಸರ್ ಚಂದ್ರಶೇಖರ ವೆಂಕಟ ರಾಮನ್ ರವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು. ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ ೧೯೩೦ ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ. ೧೯೮೭ ರಲ್ಲಿ, 'ರಾಮನ್ ಅವರ ಶತಮಾನೋತ್ಸವದ ಸಂದರ್ಭ'ದಲ್ಲಿ ಕೃತಜ್ಞತೆಯಿಂದ ಕೂಡಿದ ಭಾರತ, ಫೆಬ್ರುವರಿ, ೨೮ ನ್ನು 'ರಾಷ್ಟ್ರೀಯ ವಿಜ್ಞಾನ ದಿನ'ವೆಂದು ಘೋಷಿಸಿ, ಆ ದಿನವನ್ನು `ರಾಷ್ಟ್ರೀಯ ವಿಜ್ಞಾನ ದಿನ' ವಾಗಿ ಆಚರಿಸಲಾಗುತ್ತಿದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಈರುಳ್ಳಿಯು (ಆಲಿಯಮ್ ಕೆಪಾ ಜಾತಿ ಆಲಿಯಮ್) ಒಂದು ತರಕಾರಿಯಾಗಿ ಬಳಸಲಾಗುವ ಬೆಳೆ. ಅದು ಸಸ್ಯದ ನೆಲದಡಿಯಲ್ಲಿ ಆಹಾರ ಸಂಗ್ರಹಕ್ಕಾಗಿ ಬಳಕೆಯಾಗುವ ಒಂದು ಲಂಬವಾದ ಕುಡಿಯಾಗಿ ಬೆಳೆಯುತ್ತದೆ, ಹಾಗಾಗಿ ಇದನ್ನು ಒಂದು ಗೆಡ್ಡೆಯೆಂದು ತಪ್ಪಾಗಿ ತಿಳಿಯಬಹುದು, ಆದರೆ ಇದು ಗೆಡ್ಡೆಯಲ್ಲ. ಆಲಿಯಮ್ ಕೆಪಾ ಸಾಗುವಳಿಯಲ್ಲಿ ಮಾತ್ರ ಪರಿಚಿತವಾಗಿದೆ ಆದರೆ ಸಂಬಂಧಿತ ಕಾಡು ಜಾತಿಗಳು ಮಧ್ಯ ಏಷ್ಯಾದಲ್ಲಿ ಕಾಣುತ್ತವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು
ಕೆಂಪು ತೋಟ ಅಥವಾ ಲಾಲ್ಬಾಗ್ ಅಥವಾ ಲಾಲ್ಬಾಗ್ ಸಸ್ಯೋದ್ಯಾನ ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ. ಇದು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದೆ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ವೃತ್ತಪತ್ರಿಕೆಯು ಪ್ರಚಲಿತ ಘಟಣೆಗಳು, ಮಾಹಿತಿಯುಳ್ಳ ಲೇಖನಗಳು, ಬಗೆಬಗೆಯ ವಿಶೇಷ ಲೇಖನಗಳು ಮತ್ತು ಜಾಹೀರಾತುಗಳನ್ನು ಒಳಗೊಂಡ ನಿಯತವಾಗಿ ನಿಗದಿತವಾದ ಒಂದು ಪ್ರಕಟಣೆ. ಅದನ್ನು ಸಾಮಾನ್ಯವಾಗಿ ವೃತ್ತಪತ್ರಿಕೆ ಕಾಗದದಂತಹ ತುಲನಾತ್ಮಕವಾಗಿ ಅಗ್ಗವಾದ, ಕಡಿಮೆ ಗುಣಮಟ್ಟದ ಕಾಗದದ ಮೇಲೆ ಮುದ್ರಿಸಲಾಗುತ್ತದೆ. ೨೦೦೭ರ ವೇಳೆಗೆ, ವಿಶ್ವದಲ್ಲಿ ದಿನಂಪ್ರತಿ ೩೯೫ ಮಿಲಿಯ ಪ್ರತಿಗಳಷ್ಟು ಮಾರಾಟವಾಗುತ್ತಿದ್ದ ೬೫೮೦ ದೈನಿಕ ವೃತ್ತಪತ್ರಿಕೆಗಳಿದ್ದವು.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.