The most-visited ಕನ್ನಡ Wikipedia articles, updated daily. Learn more...
ರುಕ್ಮಿಣಿ ದೇವಿ ಅರುಂಡೇಲ್ (ತಮಿಳು:ருக்மிணி தேவி அருண்டேல்) (1904 ರ ಫೆಬ್ರವರಿ 29–1986 ರ ಫೆಬ್ರವರಿ 24, )ಇವರು ಭಾರತೀಯ ಧಾರ್ಮಿಕ,ಆಧ್ಯಾತ್ಮಿಕ ತತ್ವಗಳ ಬ್ರಹ್ಮವಿದ್ಯಾವಾದಿ ತತ್ವದ ಪ್ರತಿಪಾದಕಿ, ನೃತ್ಯಗಾರ್ತಿ ಹಾಗು ಭರತನಾಟ್ಯದ ರೂಪವಾದ ಭಾರತೀಯ ಶಾಸ್ತ್ರೀಯ ನೃತ್ಯದ ಸಂಯೋಜಕಿಯಾಗಿದ್ದರು. ಅಲ್ಲದೇ ಪ್ರಾಣಿಗಳ ಹಕ್ಕುಗಳು ಮತ್ತು ಅಭಿವೃದ್ಧಿಗಾಗಿ ಹೋರಾಡುವ ಕಾರ್ಯಕರ್ತೆಯಾಗಿದ್ದರು. ಇವರನ್ನು ಮೂಲ 'ಸಾಧಿರ್' ಶೈಲಿಯಿಂದ, ಭರತನಾಟ್ಯದ ರೂಪವಾದ ಭಾರತೀಯ ಶಾಸ್ತ್ರೀಯ ನೃತ್ಯದಲ್ಲಿ ಜೀರ್ಣೋದ್ದಾರ ಮಾಡಿದವರು ಎಂದು ಪರಿಗಣಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
೧೯೭೦ : ಭಾರತೀಯ ವಿಜ್ಞಾನಿ ಸರ್ ಚಂದ್ರಶೇಖರ ವೆಂಕಟ ರಾಮನ್ ರವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು. ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ ೧೯೩೦ ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ. ೧೯೮೭ ರಲ್ಲಿ, 'ರಾಮನ್ ಅವರ ಶತಮಾನೋತ್ಸವದ ಸಂದರ್ಭ'ದಲ್ಲಿ ಕೃತಜ್ಞತೆಯಿಂದ ಕೂಡಿದ ಭಾರತ, ಫೆಬ್ರುವರಿ, ೨೮ ನ್ನು 'ರಾಷ್ಟ್ರೀಯ ವಿಜ್ಞಾನ ದಿನ'ವೆಂದು ಘೋಷಿಸಿ, ಆ ದಿನವನ್ನು `ರಾಷ್ಟ್ರೀಯ ವಿಜ್ಞಾನ ದಿನ' ವಾಗಿ ಆಚರಿಸಲಾಗುತ್ತಿದೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ಕರ್ನಾಟಕ ಏಕೀಕರಣ : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ.
ಮೊಬೈಲ್ ಫೋನ್ (ಚರ ದೂರವಾಣಿ) (ಇದನ್ನು ಸೆಲ್ಫೋನ್ ಅಥವಾ ಹ್ಯಾಂಡ್ಫೋನ್ ಎಂತಲೂ ಕರೆಯಲಾಗಿದೆ)ಎಂಬುದು ಸಂವಹನಕ್ಕೆ ಬಳಸಲಾಗುವ ಒಂದು ವಿದ್ಯುನ್ಮಾನ ಉಪಕರಣ ಸಾಧನ. ಸೆಲ್ ಸೈಟ್ಸ್ ಎನ್ನಲಾದ 'ವಿಶಿಷ್ಟ ಬೇಸ್ ಸ್ಟೇಷನ್'ಗಳ 'ಸೆಲ್ಯುಲರ್ ಜಾಲ'ದ ಮೂಲಕ ಮೊಬೈಲ್ ದೂರಸಂವಹನ(ಸೆಲ್ ಸೈಟ್ಸ ಎಂದೂ ಕರೆಯಲಾಗುತ್ತದೆ) ( ಮೊಬೈಲ್ ಫೋನ್ ವ್ಯವಸ್ಥೆ, [[]]ಪಠ್ಯ ಸಂದೇಶ,ಮಾಹಿತಿ ಅಥವಾ ದತ್ತಾಂಶ ರವಾನೆ) ಮಾಡಲು ಈ ದೂರವಾಣಿಯನ್ನು ಬಳಸಲಾಗುತ್ತದೆ. ಮೊಬೈಲ್ಗಳು ನಿಸ್ತಂತು (ಕಾರ್ಡ್ಲೆಸ್) ದೂರವಾಣಿಗಳಿಗಿಂತ ಭಿನ್ನವಾಗಿವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಕರ್ನಾಟಕ ಸರ್ಕಾರದ ಮುಂಗಡ ಪತ್ರ-2015-2016
ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಖ್ಯಮಂತ್ರಿಯಾದ ಹಣಕಾಸು ಸಚಿವ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ಬಜೆಟ್ 2015-16ರಲ್ಲಿ ಈ ಅವಧಿಯ ಮೂರನೇ ಹಾಗೂ ಒಟ್ಟಾರೆಯಾಗಿ ಹತ್ತನೆ ಬಜೆಟ್ಅನ್ನು 2015 ಮಾರ್ಚ್ 13ರಂದು ಮಂಡಿಸಿದ್ದಾರೆ.