The most-visited ಕನ್ನಡ Wikipedia articles, updated daily. Learn more...
ABN AMRO ಬ್ಯಾಂಕ್ N.V. ಎಂಬುದು ಒಂದು ಡಚ್ ಬ್ಯಾಂಕು ಆಗಿದ್ದು, ಆಮ್ಸ್ಟರ್ಡ್ಯಾಮ್ನಲ್ಲಿ ಅದು ತನ್ನ ಕೇಂದ್ರ ಕಾರ್ಯಾಲಯವನ್ನು ಹೊಂದಿದೆ. ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ ಗ್ರೂಪ್ ನೇತೃತ್ವದ ಒಂದು ಬ್ಯಾಂಕಿಂಗ್ ಒಕ್ಕೂಟದಿಂದ ಇದು ಸ್ವಾಧೀನಕ್ಕೊಳಗಾದ, ಮತ್ತು ನಂತರದಲ್ಲಿ ವೈಫಲ್ಯಕ್ಕೆ ಈಡಾಗುವುದನ್ನು ತಪ್ಪಿಸಲೆಂದು ಡಚ್ ಸರ್ಕಾರದಿಂದ ಭಾಗಶಃವಾಗಿ ರಾಷ್ಟ್ರೀಕರಿಸಲ್ಪಟ್ಟ ಒಂದು ಹಠಾತ್ತಾದ ಬದಲಾವಣೆಯ ನಂತರ 2009ರಲ್ಲಿ ಇದು ಮರು-ಸ್ಥಾಪಿಸಲ್ಪಟ್ಟಿತು. 1765ರ ಕಾಲದಿಂದಲೂ ಈ ಬ್ಯಾಂಕು ಸ್ವಾಧೀನಗಳು ಮತ್ತು ವಿಲೀನಗಳ ಒಂದು ಸುದೀರ್ಘ ಇತಿಹಾಸವನ್ನೇ ಹೊಂದಿದೆ.
ಬಹ್ರೇನ್ , ಅಧಿಕೃತವಾದ ಬಹ್ರೇನ್ ರಾಜ್ಯ (ಅರೇಬಿಕ್: مملكة البحرين, Mamlakat al-Baḥrayn, ವಾಸ್ತವವಾಗಿ: "ಎರಡು ಸಮುದ್ರಗಳ ರಾಜ್ಯ") ಒಂದು ಸಣ್ಣ ದ್ವೀಪಗಳ ರಾಷ್ಟ್ರ ಪರ್ಷಿಯನ್ ಗಲ್ಫ್ನಲ್ಲಿ ಅಲ್ ಖಲೀಫಾ ರಾಯಲ್ ಪ್ಯಾಮಿಲಿ ಯಿಂದ ಆಳಲ್ಪಡುತ್ತಿತ್ತು. ಸೌದಿ ಅರೇಬಿಯಾ ಪಶ್ಚಿಮಕ್ಕೆ ನೆಲೆನಿಂತಿದೆ ಮತ್ತು ಕಿಂಗ್ ಫಾಹ್ದ ಕಾಸ್ವೇ ಮಾರ್ಗವು ಬಹ್ರೇನ್ಗೆ ಸಂಪರ್ಕಿಸುತ್ತದೆ, ಅದನ್ನು 25 ನವೆಂಬರ್ 1986 ರಂದು ಅಧಿಕೃತವಾಗಿ ತೆರೆಯಲಾಯಿತು. ಖತಾರ್ ಗೆ ಆಗ್ನೇಯ ದಿಕ್ಕಿಗೆ ಬಹ್ರೇನ್ ಗಲ್ಫ್ ಇದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶುಭ್ರವಾದ ರಾತ್ರಿಯಲ್ಲಿ ಆಕಾಶದ ಕಡೆ ಕಣ್ಣು ಹಾಯಿಸಿದರೆ ಅಸಂಖ್ಯಾತ ಸಣ್ಣ ಸಣ್ಣ್ಣ ಪುಟ್ಟ ಪುಟ್ಟ ಮಿನುಗುವ ಸಾವಿರಾರು ತಾರೆಗಳು ಅಂದರೆ ನಕ್ಷತ್ರಗಳು ಕಣ್ಣಿಗೆ ಬೀಳುತ್ತವೆ. ವೈಜ್ಞಾನಿಕ ಭಾಷೆಯಲ್ಲಿ ಹೇಳುವುದಾದರೆ ನಕ್ಷತ್ರವೆಂದರೆ ಅಂತರಿಕ್ಷದಲ್ಲಿ ನೆಲೆಸುವ ಸೂರ್ಯನಂತಹ ಅನಿಲದಿಂದ ಕೂಡಿದ ಸದೃಢ ಕಾಯಕ. ನಮಗೆ ದಿನ ನಿತ್ಯ ಬೆಳಕು,ಶಾಖ ನೀಡುವ ಸೂರ್ಯ ಕೂಡಾ ಒಂದು ಮಧ್ಯಮ ಗಾತ್ರದ ನಕ್ಷತ್ರ.
ಒಂದು ರಾಕೆಟ್ ಅಥವಾ ಆಕಾಶ ಬಾಣ ಇಲ್ಲವೆ ರಾಕೆಟ್ ವಾಹನ ಎಂದರೆ ಕ್ಷಿಪಣಿ,ಅಂತರಿಕ್ಷ ವಾಹನ ಅಥವಾ ವಾಯುನೌಕೆ ಇಲ್ಲವೆ ರಾಕೆಟ್ ಎಂಜಿನ್ ನಿಂದ ಶಕ್ತಿ ಪಡೆಯುವ ಇನ್ನಿತರ ವಾಹನಗಳು ಎನ್ನಲಾಗುತ್ತದೆ. ಎಲ್ಲಾ ಆಕಾಶ ಬಾಣಗಳಲ್ಲಿನ ಅಲಗುಳ್ಳ ತಿರುಗಣಿ ಗಳು ಅದರ ಒಳಗಿನ ಅಂತರದಹನ ಒತ್ತಡವನ್ನು ಹೊರಹಾಕಲು ಅಳವಡಿಸಲಾಗಿರುತ್ತದೆ. ರಾಕೆಟ್ ಎಂಜಿನ್ ಗಳು ಯಾವಾಗಲೂ ಕ್ರಿಯೆ ಮತ್ತು ಪ್ರತಿಕ್ರಿಯೆ ಮೂಲಕ ಕಾರ್ಯನಿರ್ವಹಿಸುತ್ತವೆ.
ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ರು (೨೭ ಜೂನ್ ೧೮೩೮ – ೮ ಏಪ್ರಿಲ್ ೧೮೯೪ ಬಂಗಾಳಿ:বঙ্কিম চন্দ্র চট্টোপাধ্যায় ಬೋಂಗ್ಕಿಂ ಚೋಂದ್ರೊ ಚೋಟ್ಟೋಪಾದ್ಧೇ ) (ಮೂಲ ಬಂಗಾಳಿಯಲ್ಲಿ ಈ ಹೆಸರು 'ಚಟ್ಟೋಪಾಧ್ಯಾಯ' ಎಂದಿದ್ದರೂ ಸಹ, ಬ್ರಿಟಿಷರು ಇದನ್ನು 'ಚಟರ್ಜಿ' ಎಂದು ಉಚ್ಚರಿಸುತ್ತಿದ್ದರು) ಭಾರತದ ಓರ್ವ ಬಂಗಾಳಿ ಕವಿ, ಕಾದಂಬರಿಕಾರ, ಪ್ರಬಂಧಕಾರ ಮತ್ತು ಪತ್ರಕರ್ತರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಿದ ವಂದೇ ಮಾತರಮ್ ಗೀತೆಯ ಕವಿಯಾಗಿ ಇವರು ಅತ್ಯಂತ ಪ್ರಸಿದ್ಧರಾಗಿದ್ದರು. ಇದೇ ಗೀತೆಯು ನಂತರದಲ್ಲಿ ಭಾರತದ ರಾಷ್ಟ್ರೀಯ ಗೀತೆಯಾಗಿ ಘೋಷಿಸಲ್ಪಟ್ಟಿತು.
ARM (ಎಆರ್ಎಂ) ಎನ್ನುವುದು ARM ಹೋಲ್ಡಿಂಗ್ಸ್ ಎನ್ನುವ ಕಂಪನಿ ಅಭಿವೃದ್ಧಿಪಡಿಸಿರುವ 32 ಬಿಟ್ ರಿಡ್ಯೂಸ್ಡ್ ಇನಸ್ಟ್ರಕ್ಷನ್ ಸೆಟ್ ಕಂಪ್ಯೂಟರ್ (RISC) ಇನಸ್ಟ್ರಕ್ಷನ್ ಸೆಟ್ ಆರ್ಕಿಟೆಕ್ಚರ್(ISA). (ರೆಡ್ಯೂಸಡ್ ಇನ್ಸ್ಟ್ರಕ್ಷನ್ ಸೆಟ್ ಕಂಪ್ಯೂಟಿಂಗ್ - ಸಂಕ್ಷಿಪ್ತವಾಗಿ RISC ಎಂದು ಕೆರಯಲಾಗುವ- ಇದು CPU ರಚನೆ ವ್ಯವಸ್ಥೆ ಪ್ರತಿನಿಧಿಸುತ್ತದೆ ಇದರಿಂದಾಗಿ ಸೂಚನೆಗಳನ್ನು ಸರಳಿಕರಸಿಬಹುದಾಗಿದ್ದು, ಇದರಿಂದ ಸೂಚನೆಗಳನ್ನು ಕಡಿಮೆ ಪ್ರಮಾಣದಲ್ಲಿ ಆದರೆ ವೇಗವಾಗಿ ಅನುಷ್ಠಾನಗೊಳ್ಳುವುದರಿಂದ ಹೆಚ್ಚಿನ ಕಾರ್ಯಕ್ಷಮತೆಯನ್ನು ಪಡೆಯಬಹುದು.). ಹಿಂದೆ ಇದನ್ನು, ಅಡ್ವಾನ್ಸಡ್ RISC ಮಷೀನ್ ಎಂದೂ ಹಾಗು ಅದಕ್ಕೂ ಹಿಂದೆ ಇದನ್ನು ಆಕ್ರಾನ್ RISC ಮಷೀನ್ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ , ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.