The most-visited English Wikipedia articles, updated daily. Learn more...
ಚಾರ್ಲ್ಸ್ ಮಿಲ್ಲೆಸ್ ಮ್ಯಾನ್ಸನ್ (ಜನನ: 1934ರ ನವೆಂಬರ್ 12ರಂದು) ಅಮೆರಿಕಾದ ಓರ್ವ ಅಪರಾಧಿಯಾಗಿದ್ದು, ಮ್ಯಾನ್ಸನ್ ಕುಟುಂಬ ಎಂದೇ ಹೆಸರಾದ ಒಂದು ಮೇಲ್ನೋಟದ-ಸಮುದಾಯದ ನೇತೃತ್ವವನ್ನು ವಹಿಸಿದ; ಈ ಸಮುದಾಯವು 1960ರ ದಶಕದ ಅಂತ್ಯಭಾಗದಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಪ್ರವರ್ಧಮಾನಕ್ಕೆ ಬಂದಿತು. ಅವನ ಸೂಚನೆಯ ಅನುಸಾರ, ಅವನ ಗುಂಪಿನ ಸದಸ್ಯರಿಂದ ಮಾಡಲ್ಪಟ್ಟ ಟೇಟ್/ಲೇಬಿಯಾಂಕಾ ಕೊಲೆಗಳನ್ನು ಎಸಗಲು ಒಳಸಂಚು ಹೂಡಿದ್ದಕ್ಕೆ ಅವನನ್ನು ತಪ್ಪಿತಸ್ಥ ಎಂದು ಪರಿಗಣಿಸಲಾಗಿತ್ತು. ಜಂಟಿ-ಹೊಣೆಗಾರಿಕೆಯ ನಿಯಮದ ಮೂಲಕ ಅವನು ತಪ್ಪಿತಸ್ಥನೆಂದು ರುಜುವಾತು ಪಡಿಸಲ್ಪಟ್ಟ; ಒಳಸಂಚಿನ ಉದ್ದೇಶದ ಮುಂದುವರಿಕೆಯಲ್ಲಿ, ಅವನ ಸಹವರ್ತಿ ಪಿತೂರಿಗಾರರು ಎಸಗುವ ಅಪರಾಧಗಳಿಗೆ ಸಂಬಂಧಿಸಿದಂತೆ ಒಳಸಂಚೊಂದರ ಪ್ರತಿಯೋರ್ವ ಸದಸ್ಯವನ್ನು ತಪ್ಪಿತಸ್ಥನನ್ನಾಗಿಸುವುದು ಈ ಜಂಟಿ-ಹೊಣೆಗಾರಿಕೆಯ ನಿಯಮದ ವೈಶಿಷ್ಟ್ಯ.
Nokia Corporation (pronounced /ˌnoʊˈkiːə/; Finnish pronunciation: [ˈnɔkiɑ]) (OMX: NOK1V, NYSE: NOK, FWB: NOA3) ಒಂದು ಫಿನ್ನಿಶ್ ಬಹುರಾಷ್ಟ್ರೀಯ ಸಂಪರ್ಕ ಕಾರ್ಪೊರೇಶನ್ ಆಗಿದ್ದು ಇದರ ಪ್ರಧಾನ ಕಚೇರಿಯು ಫಿನ್ಲಂಡಿನ ರಾಜಧಾನಿಯಾದ ಹೆಲ್ಸಿಂಕಿಯ ನೆರೆಯಲ್ಲಿರುವ ಕೀಲನೀಮೀ, ಎಸ್ಪೂನಲ್ಲಿದೆ. Nokiaವು ಮೊಬೈಲ್ ಸಾಧನಗಳನ್ನು ತಯಾರಿಸುವುದು ಮತ್ತು ಇಂಟರ್ನೆಟ್ ಹಾಗೂ ಸಂಪರ್ಕ ಉದ್ಯಮಗಳನ್ನು ತಳುಕು ಹಾಕಿರುವುದು ಮಾತ್ರವಲ್ಲದೆ 120 ದೇಶಗಳ 128,445 ಜನರಷ್ಟು ಸಿಬ್ಬಂದಿವರ್ಗವನ್ನು ಹೊಂದಿದ್ದು 150ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲ್ಲಿ ಮಾರುಕಟ್ಟೆ ಹೊಂದಿರುವುದಲ್ಲದೆ EUR 50.7 ಬಿಲಿಯನ್ನಷ್ಟು ಜಾಗತಿಕ ವಾರ್ಷಿಕ ಆದಾಯವನ್ನು ಗಳಿಸುತ್ತಿದೆ ಮತ್ತು 2008ರ ಅಂಕಿ ಅಂಶಗಳ ಪ್ರಕಾರ 5.0 ಬಿಲಿಯನ್ನಷ್ಟು ಲಾಭ ಗಳಿಸಿದೆ. ಇದು ಪ್ರಪಂಚದ ಮೊಬೈಲ್ ಫೋನುಗಳ ಅತಿ ದೊಡ್ಡ ತಯಾರಕನೆನಿಸಿಕೊಂಡಿದೆ: Q3 2008 ಮತ್ತು Q2 2009ರಲ್ಲ್ಲಿಜಾಗತಿಕವಾಗಿ ಅದರ ಸಾಧನಗಳ ಮಾರುಕಟ್ಟೆ ಶೇರುಹೆಚ್ಚೂಕಡಿಮೆ 38%ನಷ್ಟಿದ್ದಿತು.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಚಾರ್ಲ್ಸ್ ಜಾನ್ ಹಫಾಮ್ ಡಿಕನ್ಸ್ , FRSA (pronounced /ˈtʃɑrlz ˈdɪkɪnz/; 7 ಫೆಬ್ರವರಿ 1812–9 ಜೂನ್ 1870), ಕಾವ್ಯನಾಮ "ಬೋಝ್", ವಿಕ್ಟೋರಿಯಾ ಯುಗದ ಅತ್ಯಂತ ಜನಪ್ರಿಯ ಇಂಗ್ಲಿಷ್ ಕಾದಂಬರಿಕಾರನಾಗಿದ್ದ ಮತ್ತು ಸಾರ್ವಕಾಲಿಕವಾಗಿರುವ ಅತ್ಯಂತ ಜನಪ್ರಿಯರ ಪೈಕಿ ಒಬ್ಬನಾಗಿದ್ದ. ಸಾಮಾಜಿಕ ಸುಧಾರಣೆಯ ವಸ್ತುವು ಆತನ ಕೃತಿಯಾದ್ಯಂತ ಪ್ರವಹಿಸುವುದರೊಂದಿಗೆ, ಸಾಹಿತ್ಯದ ಅತ್ಯಂತ ಸಾಂಪ್ರದಾಯಿಕ ಮಾದರಿ ಪಾತ್ರಗಳ ಪೈಕಿ ಕೆಲವೊಂದನ್ನು ಆತ ಸೃಷ್ಟಿಸಿದ. ಆತನ ಕಾದಂಬರಿಗಳು ಹಾಗೂ ಕಿರುಗತೆಗಳ ಜನಪ್ರಿಯತೆ ಎಷ್ಟಿದೆಯೆಂದರೆ, ಅವುಗಳ ಮುದ್ರಿತಪ್ರತಿ ಅಲಭ್ಯವಾಗಿದೆ ಎಂಬ ಪರಿಸ್ಥಿತಿ ಎಂದಿಗೂ ನಿರ್ಮಾಣಗೊಂಡಿದ್ದೇ ಇಲ್ಲ.
ಷಿಂಡ್ಲರ್ನ ಪಟ್ಟಿ ಆಸ್ಕರ್ ಷಿಂಡ್ಲರ್ ಎಂಬಾತನ ಕುರಿತಾದ 1993ರ ಅಮೇರಿಕಾದ ದೃಶ್ಯ ನಾಟಕ ಆಗಿದ್ದು, ಆತ ಜರ್ಮನಿಯ ಓರ್ವ ಉದ್ಯಮಿಯಾಗಿದ್ದು, ಸಾಮೂಹಿಕ ನರಮೇಧದ ಸಮಯದಲ್ಲಿ ಸಾವಿರಾರು ಪೋಲೆಂಡ್ನ ಯಹೂದಿ ನಿರಾಶ್ರಿತರನ್ನು ತನ್ನ ಕಾರ್ಖಾನೆಗಳಲ್ಲಿ ಉದ್ಯೋಗ ನೀಡುವ ಮೂಲಕ ಬದುಕಲು ಅವಕಾಶ ಕಲ್ಪಿಸಿಕೊಟ್ಟಿರುತ್ತಾನೆ. ಇದು ಥಾಮಸ್ ಕೆನಿಯಲ್ಲೈ ರಚಿಸಿದ ಷಿಂಡ್ಲರ್ಸ್ ಆರ್ಕ್ ಕಾದಂಬರಿ ಆಧಾರಿತವಾಗಿದ್ದು, ಸ್ಟೀವನ್ ಸ್ಪಿಲ್ಬರ್ಗ್ ಈ ಚಿತ್ರವನ್ನು ನಿರ್ದೇಶಿಸಿರುತ್ತಾರೆ. ಇದರಲ್ಲಿ ಷಿಂಡ್ಲರ್ ಪಾತ್ರದಲ್ಲಿ ಲಿಯಾಂ ನೀಸನ್, ರಾಲ್ಫ್ ಫಿಯೆನ್ನೆಸ್ ಷುಟ್ಜ್ಸ್ಟಾಫೆಲ್ (SS) ಅಧಿಕಾರಿ ಅಮನ್ ಗೋತ್ ಪಾತ್ರದಲ್ಲಿ, ಹಾಗೂ ಬೆನ್ ಕಿಂಗ್ಸ್ಲೆ, ಷಿಂಡ್ಲರ್ನ ಯಹೂದಿ ಕರಣಿಕ ಇಟ್ಜಾಕ್ ಸ್ಟರ್ನ್ ಪಾತ್ರದಲ್ಲಿ ನಟಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಂಕಗಣಿತ(Aritmetic)ವು ಸಂಖ್ಯೆಗಳ ಕೆಲವು ಪರಿಕ್ರಿಯೆ(Operations)ಗಳ ಲಕ್ಷಣಗಳನ್ನು ತಿಳಿಸುವ ಗಣಿತದ ಒಂದು ವಿಭಾಗ.ಇದು ನಮಗೆ 'ಎಷ್ಟು?', 'ಎಷ್ಟು ದೂರ?', 'ಎಷ್ಟು ಉದ್ದ?' ಮುಂತಾದ ಪ್ರಶ್ನೆಗಳಿಗೆ ಉತ್ತರವನ್ನು ನೀಡುತ್ತದೆ.ಅಂಕಗಣಿತವನ್ನು ಕೆಲವೊಮ್ಮೆ ಸಂಖ್ಯೆಗಳ ವಿಜ್ಞಾನ ಎಂದೂ ಕರೆಯುತ್ತಾರೆ. ನಾಗರಿಕತೆಯ ಬೆಳೆವಣಿಗೆಗೆ ಅನಾದಿಕಾಲದಿಂದಲೂ ಅಂಕಗಣಿತ ಅತ್ಯಾವಶ್ಯಕವಾಗಿದ್ದಿತೆಂಬುದು ¸ಸ್ಪಷ್ಟವಾಗಿಯೇ ಇದೆ. ಎಲ್ಲಾ ಜನಾಂಗಗಳ ಪೂವಿರ್ಕರು ಇದಕ್ಕಾಗಿ ಬಹಳ ಶ್ರಮಿಸಿರಬೇಕು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಯಕೃತ್ತು ಕಶೇರುಕಗಳಲ್ಲಿ ಮತ್ತು ಇತರ ಕೆಲವು ಪ್ರಾಣಿಗಳಲ್ಲಿ ಕಂಡುಬರುವ ಒಂದು ಜೀವಧಾರಕ ಅಂಗ. ವಿಷದ ಅಂಶವನ್ನು ತೆಗೆದುಹಾಕುವುದು, ಪ್ರೋಟೀನ್ ಸಂಶ್ಲೇಷಣೆ ಮತ್ತು ಜೀರ್ಣಕ್ರಿಯೆಗೆ ಬೇಕಾಗುವ ಜೀವರಾಸಾಯನಿಕ ವಸ್ತುಗಳನ್ನು ಉತ್ಪತ್ತಿ ಮಾಡುವುದು ಇವೇ ಮೊದಲಾದ ಹಲವಾರು ಕಾರ್ಯಗಳನ್ನು ಇದು ಮಾಡುತ್ತದೆ. ಜೀವದ ಉಳಿವಿಗಾಗಿ ಯಕೃತ್ತು ಅತೀ ಅವಶ್ಯಕ; ಯಕೃತ್ತು ಕಾರ್ಯವನ್ನು ಮಾಡದಿದ್ದರೆ ಅದನ್ನು ಸರಿದೂಗಿಸುವಂತಹ ಬೇರೆ ಯಾವುದೇ ಮಾರ್ಗಗಳು ಪ್ರಸ್ತುತದಲ್ಲಿಲ್ಲ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು
ಈ ಲೇಖನದಲ್ಲಿ ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳ ಪಟ್ಟಿ ಮಾಡಲಾಗಿದೆ. ಭಾರತವು ೨೮ ರಾಜ್ಯ ಮತ್ತು ೭ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ರಾಜ್ಯಗಳು ತಮ್ಮ ಸ್ವಂತ ಸರ್ಕಾರಗಳನ್ನು ರಚಿಸಿಕೊಳ್ಳುತ್ತವೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.