The most-visited English Wikipedia articles, updated daily. Learn more...
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
೧೯೪೭ ಅಗಸ್ಟ ೧೫ರಂದು ಭಾರತ ಸ್ವತಂತ್ರವಾಯಿತು.ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ" ) ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ಹಲವು ವರ್ಷಗಳು ಮೊದಲಿನಿಂದ, ನಿಜಾಮ್ "ಸೋಲರಿಯದ ಅಲ್ಲಾಹುವಿನ ಸೈನಿಕರು" ಎಂದು ಕರೆದು ಕೊಳ್ಳುತ್ತಿದ್ದ ತನ್ನ ಸೇನೆಗೆ ಮತ್ತು ನಿಜಾಂ ಪೋಲಿಸರಿಗೆ ಬ್ರಿಟಿಷರ ಸೇನಾಧಿಕಾರಿಗಳಿಂದ ತರಬೇತಿ ಶಿಬಿರಗಳನ್ನು ನೆಡೆಸಿದ್ದ ಮತ್ತು ಆಗ ಪ್ರಸಿದ್ಧವಾಗಿದ್ದ ಸಿಡ್ನಿ ಕಾಟನ್ ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದ.ಆ ಕಾಲಲ್ಲಿ ವಿಶ್ವದ ಗಣನೀಯ ಶ್ರೀಮಂತರಲ್ಲಿ ಒಬ್ಬನಾಗಿದ್ದ ನಿಜಾಮ್ ಮೀರ್ ಉಸ್ಮಾನ್ ಅಲಿಗೆ, ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಲು ಬ್ರಿಟಿಷ್ ಹಾಗು ಪಾಕಿಸ್ತಾನಿ ರಾಜಕಾರಣಿಗಳ ಪ್ರತ್ಯಕ್ಷ ಮತ್ತು ಪರೋಕ್ಷ ಬೆಂಬಲವಿತ್ತು.
೧೨ನೆ ಶತಮಾನದ ಬಸವಣ್ಣನ ಕಾಲದ ಕ್ರೌರ್ಯಕ್ಕಿಂತ ಇಮ್ಮಡಿ, ಮುಮ್ಮಡಿಯಾದ ಕ್ರೌರ್ಯ, ದೌರ್ಜನ್ಯ, ಹಿಂಸೆ, ಬುದ್ಧಿ ಜೀವಿಗಳ ನಾಡಾದ ಕೇರಳದಲ್ಲಿ ೧೯ನೆ ಶತಮಾನದ ಅಂತ್ಯ ಮತ್ತು ೨೦ನೆ ಶತಮಾನದ ಆರಂಭದಲ್ಲಿ ನಡೆದಿತ್ತು. ಆಗಿನ ಕೇರಳದಲ್ಲಿ ಇಡೀ ಭಾರತದಲ್ಲಿಯೇ ಕಂಡರಿಯದ ಅಮಾನುಷ ವರ್ತನೆ ನಂಬೂದರಿ ಎಂಬ ಬ್ರಾಹ್ಮಣ ವರ್ಗದಿಂದ ಶೂದ್ರರ ಮೇಲೆ, ಅಸ್ಪ್ರಷ್ಯರ ಮೇಲೆ ಮತ್ತು ಸ್ತ್ರೀಯರ ಮೇಲೆ ನಡೆದಿತ್ತು. ಅಂತಹ ಜಾತೀಯತೆ, ಅಸ್ಪ್ರಶ್ಯತೆ ಎಂಬ ವಿಷ ವೃಕ್ಷವು ಇವೀ ಶೂದ್ರ ಜನಸಮೂಹವನ್ನು ಉಸಿರುಗಟ್ಟಿ ಸಾಯುಸಿತ್ತಿರುವ ಘೋರ ಕ್ರೌರ್ಯದ ತುರಿಯಾವಸ್ಥೆಯಲ್ಲಿ `ಈಳವ' ಎಂಬ ಅಸ್ಪ್ರಶ್ಯ ಜಾತಿಯಲ್ಲಿ ನಾರಾಯಣ ಗುರು ಎಂಬ ಪವಿತ್ರಾತ್ಮನ ಜನ್ಮವಾಯಿತು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಮಾಹಿತಿ ಹಕ್ಕು ಕಾಯಿದೆ 2005 (RTI ) ಎಂಬುದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ. ಇದು ಭಾರತದಲ್ಲಿ ಮಾಹಿತಿಯ ಸ್ವಾತಂತ್ರ್ಯದ ಶಾಸನದ ಒಂದು ರಾಷ್ಟ್ರೀಯ ಮಟ್ಟದ ಕಾರ್ಯಗತಗೊಳಿಸುವಿಕೆಯಾಗಿದ್ದು, "ಮಾಹಿತಿ ಹಕ್ಕಿನ ಕಾರ್ಯಸಾಧ್ಯ ಆಡಳಿತ ಪದ್ಧತಿಯನ್ನು ನಾಗರಿಕರಿಗಾಗಿ ಸಜ್ಜುಗೊಳಿಸುವುದಕ್ಕೆ" ಸಂಬಂಧಿಸಿದ ಉದ್ದೇಶವು ಇದರ ಹಿಂದೆ ಅಡಗಿದೆ. ರಾಜ್ಯ-ಮಟ್ಟ ಕಾನೂನೊಂದರ ಅಡಿಯಲ್ಲಿ ಪರಿಗಣಿಸಿ ಚರ್ಚಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿದ, ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾಯಿದೆಯು ಅನ್ವಯಿಸುತ್ತದೆ.
ಭಾರತದ ಸಾಮಾಜಿಕ -ಧಾರ್ಮಿಕ ಸುಧಾರಣ ಕ್ರಿಯೆಯಲ್ಲಿ ,ಹೆಚ್ಚು ತೊಡಗಿಸಿಕೊಂಡ ಬ್ರಹ್ಮ ಸಮಾಜ ವನ್ನು ೧೮೨೮ ರಲ್ಲಿ ಹುಟ್ಟು ಹಾಕಿದ್ದು, ರಾಜ ರಾಮ್ ಮೋಹನ್ ರೋಯ್ (ಆಗಸ್ಟ್ ೧೪, ೧೭೭೪ – ಸೆಪ್ಟೆಂಬರ್ ೨೭, ೧೮೩೩),ಬ್ರಾಹ್ಮೋ ಸಭಾ ದ ಸಂಸ್ಥಾಪಕರು , (ಜೊತೆಗೆ ದ್ವಾರಕನಾಥ್ ಟ್ಯಾಗೋರ್ ಮತ್ತು ಇತರ ಬೆಂಗಾಲಿ ಬ್ರಾಹ್ಮಣರು ). ರಾಜನೀತಿ , ಸಾರ್ವಜನಿಕ ಆಡಳಿತ ಮತ್ತು ವಿದ್ಯಾಭ್ಯಾಸ ಹಾಗೆ ಧರ್ಮದೊಂದಿಗೆ ,ಅವರ ಪ್ರಭಾವ ಪಾರದರ್ಶಕವಾಗಿತ್ತು. ಹಿಂದೂ ಧರ್ಮದ ಉತ್ತರ ಕ್ರಿಯಾ ಪದ್ಧತಿಯಲ್ಲಿ , ಸತಿಪದ್ಧತಿಯನ್ವಯ ವಿಧವೆಯನ್ನು ಗಂಡಂದಿರ ಅಗ್ನಿ ಚಿತೆಯ ಮೇಲೆ ಬಲವಂತವಾಗಿ ಸುಡುತ್ತಿದ್ದ 'ಸತಿ' ಪದ್ಧತಿಯನ್ನು ರದ್ದು ಮಾಡುವ ಹೋರಾಟದಲ್ಲಿ ಹೆಚ್ಚು ಕ್ರಿಯಾಶಿಳರಾಗಿದ್ದರು.
ಓಝೋನ್ ಪದರು ಸವಕಳಿ(ಸಾಮರ್ಥ್ಯ ಕುಂದು)
ಓಝೋನ್ ಸವಕಳಿ ಯು ಎರಡು ಪ್ರತ್ಯೇಕ ಆದರೆ ಪರಸ್ಪರ ಸಂಬಂಧವಿರುವ ಹೇಳಿಕೆಗಳನ್ನು ವಿವರಿಸುತ್ತದೆ: ಓಝೋನ್ ಈ ಪೃಥ್ವಿಯ ಸಂರಕ್ಷಣಾ ಕವಚ. ವಿಷಾದದ ಸಂಗತಿಯೆಂದ್ರೆ ಇದು ಸದ್ಯ ಮಾನವ ನಿರ್ಮಿತ ತಪ್ಪುಗಳಿಂದಾಗಿ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದೆ. ವಾಯು ಮಾಲಿನ್ಯ ಮತ್ತು ಪರಿಸರ ನಾಶದಿಂದಾಗಿ ರಕ್ಷಣಾ ಕವಚ ಕಳೆಗುಂದುತ್ತಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
೨೦೧೬ ಬೇಸಿಗೆ ಒಲಿಂಪಿಕ್ಸ್, ಅಧಿಕೃತವಾಗಿ XXXI ಒಲಿಂಪಿಯಾಡ್ ಆಟಗಳು ಎಂದು ಕರೆಯಲಾಗುತ್ತದೆ ಮತ್ತು ಸಾಮಾನ್ಯವಾಗಿ ರಿಯೊ ೨೦೧೬ ಎಂದು ಕರೆಯಲಾಗುತ್ತದೆ, ಇದು ಬ್ರೆಜಿಲ್ನ ರಿಯೊ ಡಿ ಜನೈರೊನಲ್ಲಿ ೫ ಆಗಸ್ಟ್ ರಿಂದ ಆಗಸ್ಟ್ ೨೧ ೨೦೧೬ರ ವರಗೆ ನಡೆದ ಪ್ರಮುಖ ಅಂತಾರಾಷ್ಟ್ರೀಯ ಬಹು-ಕ್ರೀಡಾಕೂಟವಾಗಿದೆ. ಮೊದಲ ಬಾರಿಗೆ ಪ್ರವೇಶಿಸಿದ ಕೊಸೊವೊ, ದಕ್ಷಿಣ ಸೂಡಾನ್ ಮತ್ತು ನಿರಾಶ್ರಿತರ ಒಲಿಂಪಿಕ್ ತಂಡ ಸೇರಿ ೨೦೭ ರಾಷ್ಟ್ರೀಯ ಒಲಿಂಪಿಕ್ ಸಮಿತಿಗಳಿಂದ ೧೧,೦೦೦ ಕ್ರೀಡಾಪಟುಗಳು ಪಾಲ್ಗೊಂಡಿದ್ದರು, ೩೦೬ಜೊತೆ ಪದಕಗಳೊಂದಿಗೆ, ೨೦೦೯ರಲ್ಲಿ ಸೇರಿಸಿದ ರಗ್ಬಿ ಸೆವೆನ್ಸ್ ಮತ್ತು ಗಾಲ್ಫ್ ಆಟಗಳು ಸೇರಿದಂತೆ ೨೯ ಒಲಿಂಪಿಕ್ ಕ್ರೀಡಾಸ್ಪರ್ಧೆಗಳು ನಡೆದವು, ಈ ಸ್ಪರ್ಧೆಗಳು ಹೋಸ್ಟ್ ನಗರದಲ್ಲಿ ೩೩ ಸ್ಥಳಗಳಲ್ಲಿ ಮತ್ತು ಸಾವೊ ಪಾಲೊ, ಬೆಲೊ ಹಾರಿಜಾಂಟೆ, ಸಾಲ್ವಡಾರ್, ಬ್ರೆಸಿಲಿಯಾ ಮಾನಾಸ್ ನಲ್ಲಿ ೫ ಸ್ಥಳಗಳಲ್ಲಿ ನೆಡೆಯಿತು. ಇದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಧಾಮಸ್ ಬ್ಯಾಚ್ ಅಧ್ಯಕ್ಷತೆಯಲ್ಲಿ ನೆಡೆದ ಮೊದಲ ಬೇಸಿಗೆ ಒಲಿಂಪಿಕ್ಸ್.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ . ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಏಷ್ಯನ್ ಕ್ರೀಡಾಕೂಟ, ಹಾಗೂ ಏಷ್ಯಾಡ್, ಎಂದೂ ಕರೆಯಲಾಗುವ ಬಹು-ಕ್ರೀಡೆಗಳ ಕ್ರೀಡಾಕೂಟವು ನಾಲ್ಕು ವರ್ಷಕ್ಕೊಮ್ಮೆ ಏಷ್ಯಾದ ಎಲ್ಲಾ ದೇಶಗಳ ಕ್ರೀಡಾಪಟುಗಳ ನಡುವೆ ಆಡಲಾಗುತ್ತದೆ. ಏಷ್ಯನ್ ಕ್ರೀಡಾಕೂಟವು ಭಾರತದ ನವದೆಹಲಿಯ ಮೊದಲ ಕ್ರೀಡಕೂಟದಿಂದ ೧೯೭೮ರ ಕ್ರೀಡಕೂಟದ ತನಕ ಏಷ್ಯನ್ ಗೇಮ್ಸ್ ಫೆಡೆರೆಷನ್ನಿಂದ ನಿಯಂತ್ರಸಲ್ಪಟ್ಟಿತ್ತು. ೧೯೮೨ರ ಕ್ರೀಡಕೂಟದಿಂದ ಒಲಂಪಿಕ್ ಕೌನ್ಸಿಲ್ ಆಫ್ ಏಷ್ಯಾ ದಿಂದ ಆಯೋಜಿಸಲ್ಪಡಲಾಗುತ್ತಿದೆ.
ಪುಸರ್ಲಾ ವೆಂಕಟ(ವಂಶದ ಹೆಸರು) ಸಿಂಧು (ಜನನ ೫ ಜುಲೈ ೧೯೯೫)( ತೆಲುಗು : సింధూ ) ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. ೧೦ ಆಗಸ್ಟ್ ೨೦೧೩ ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ ೧೯೮೩ ರಲ್ಲಿ ಕಂಚು ಗೆದ್ದಿದ್ದಾರೆ.