The most-visited English Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸಿಂಧೂ ನದಿ (ಆಂಗ್ಲ ಭಾಷೆ: ಇಂಡಸ್ ; ಟಿಬೆಟ್ ಭಾಷೆ: ಸೆಂಗೆ ಚೂ;) ಪಾಕಿಸ್ತಾನ ಮತ್ತು ಉತ್ತರ ಭಾರತದಲ್ಲಿ ಹರಿಯುವ ಒಂದು ಪ್ರಮುಖ ನದಿ. ಟಿಬೆಟ್ಟಿನ ಪ್ರಸ್ಥಭೂಮಿಯಲ್ಲಿರುವ ಮಾನಸಸರೋವರದ ಹತ್ತಿರ ಉಗಮಿಸುವ ಈ ನದಿ ಕಶ್ಮೀರದ ಮೂಲಕ ಉತ್ತರ ಪಾಕಿಸ್ತಾನಕ್ಕೆ ಹರಿದು, ನಂತರ ದಕ್ಷಿಣ ಮುಖಕ್ಕೆ ತಿರುಗಿ ಇಡಿ ಪಾಕಿಸ್ತಾನದ ಉದ್ದಕ್ಕೆ ಹರಿದು, ಕರಾಚಿ ನಗರದ ಬಳಿ ಅರಬ್ಬಿ ಸಮುದ್ರವನ್ನು ಸೇರುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ದೂರದರ್ಶನ - ಚಂದನ (ಡಿ.ಡಿ.೯) - ಬೆಂಗಳೂರು ದೂರದರ್ಶನ ಕೇಂದ್ರದ ೨೪/೭ ಕಿರುತೆರೆಯ ಕನ್ನಡ ವಾಹಿನಿ. ಭಾರತದಲ್ಲಿ 'ದೂರದರ್ಶನ' ಬಿತ್ತರಿಸುವ ಕಾರ್ಯಕ್ರಮಗಳು ಯಾವುದೇ ಭಾಷೆಯದಾದರೂ ಅವು ಮುಟ್ಟುವ ಜನಸಮುದಾಯ ಅಪಾರ. ಇದನ್ನು ಗಮನದಲ್ಲಿಟ್ಟುಕೊಂಡು ಸರಕಾರ ಸಮರ್ಥ ತಾಂತ್ರಿಕ ವರ್ಗ, ಹಾಗೂ ಅದಕ್ಕೆ ಸರಿಹೊಂದುವ ಪರಿಣಿತರನ್ನು ತಯಾರುಮಾಡಿ ಖಾಸಗೀ ವಲಯಗಳ ಜೊತೆಗೆ ಭುಜಕ್ಕೆ ಭುಜ ಕೊಟ್ಟು ಮುನ್ನಡೆಯಬೇಕಾಗಿದೆ.
ವೃತ್ತಪತ್ರಿಕೆಯು ಪ್ರಚಲಿತ ಘಟಣೆಗಳು, ಮಾಹಿತಿಯುಳ್ಳ ಲೇಖನಗಳು, ಬಗೆಬಗೆಯ ವಿಶೇಷ ಲೇಖನಗಳು ಮತ್ತು ಜಾಹೀರಾತುಗಳನ್ನು ಒಳಗೊಂಡ ನಿಯತವಾಗಿ ನಿಗದಿತವಾದ ಒಂದು ಪ್ರಕಟಣೆ. ಅದನ್ನು ಸಾಮಾನ್ಯವಾಗಿ ವೃತ್ತಪತ್ರಿಕೆ ಕಾಗದದಂತಹ ತುಲನಾತ್ಮಕವಾಗಿ ಅಗ್ಗವಾದ, ಕಡಿಮೆ ಗುಣಮಟ್ಟದ ಕಾಗದದ ಮೇಲೆ ಮುದ್ರಿಸಲಾಗುತ್ತದೆ. ೨೦೦೭ರ ವೇಳೆಗೆ, ವಿಶ್ವದಲ್ಲಿ ದಿನಂಪ್ರತಿ ೩೯೫ ಮಿಲಿಯ ಪ್ರತಿಗಳಷ್ಟು ಮಾರಾಟವಾಗುತ್ತಿದ್ದ ೬೫೮೦ ದೈನಿಕ ವೃತ್ತಪತ್ರಿಕೆಗಳಿದ್ದವು.
ವರ್ಣಾಶ್ರಮ ಪದ್ಧತಿಯು ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಗಗಳನ್ನು ಹೊಂದಿದ ಹಿಂದೂ ಧರ್ಮದ ಒಂದು ಪದ್ಧತಿ.ಇದನ್ನು ಸ್ಥೂಲವಾಗಿ ಬುದ್ಧಿ,ಪರಾಕ್ರಮ,ಸಂಪತ್ತು ಹಾಗೂ ಪರಿಶ್ರಮಗಳ ಆಧಾರದ ಮೇಲೆ ಮಾಡಿದ್ದು.ಪ್ರತಿಯೊಂದು ವರ್ಣದವರೂ ಕೂಡಾ ಒಂದೇ ಪುರುಷನ ಅಂದರೆ ಜಗದ ಕುಟುಂಬದ ವಿವಿಧ ಅಂಗಗಳೇ ಆಗಿದ್ದು ಯಾರು ಯಾರಿಗೆ ಮೇಲಾಗಲೀ ಕೀಳಾಗಲೀ ಆಗಿರುವುದಿಲ್ಲ ಮತ್ತು ಈ ವರ್ಗ ವಿಭಾಗಗಳನ್ನು ವ್ಯಕ್ತಿಯ ಗುಣ-ಕರ್ಮಗಳಿಗೆ ಅನುಸಾರವಾಗಿ ಮಾಡಲಾಗಿದೆ ಎಂಬುದನ್ನು ಹಿಂದೂ ಧರ್ಮದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಭಗವದ್ಗೀತೆಯಲ್ಲಿ ಬರುವ 'ಚಾತುರ್ವರ್ಣ್ಯಂ ಮಯಾ ಸೃಷ್ಟಂ ಗುಣಕರ್ಮವಿಭಾಗತ:'ಎಂಬ ಶ್ಲೋಕ ಹಾಗೂ ಮಹಾಭಾರತದ ವನಪರ್ವದ ಒಂದು ಶ್ಲೋಕ "ನ ಯೋನಿ: ನಾಪಿ ಸಂಸ್ಕಾರೋ ನ ಶ್ರುತಂ ಚ ಸಂತತಿ:| ಕಾರಣಾನಿ ದ್ವಿಜತ್ವಸ್ಯ ವೃತ್ತಮೇವ ತು ಕಾರಣಮ್ ||" ಎಂದರೆ ಬ್ರಾಹ್ಮಣತ್ವದ ಕಾರಣವು ಜನ್ಮವಲ್ಲ,ಸಂಸ್ಕಾರವಲ್ಲ,ವೇದಾಧ್ಯಯನವಲ್ಲ,ಕುಲವೂ ಅಲ್ಲ.ಅದರ ಕಾರಣವು ಸದಾಚಾರ ಮಾತ್ರವಾಗಿರುತ್ತದೆ.ಆದುದರಿಂದ ಹಿಂದೂಧರ್ಮದ ಮೂಲ ವರ್ಣಾಶ್ರಮ ವಿಭಾಗವು ಈಗಿನ ಜಾತಿ ಪದ್ಧತಿಗಿಂತ ಸಂಪೂರ್ಣವಾಗಿ ಭಿನ್ನವಾಗಿತ್ತೆಂದು ತಿಳಿದುಬರುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಅಜೆರ್ಬೈಜಾನ್ (Azərbaycan), ಅಧಿಕೃತವಾಗಿ ಅಜೆರ್ಬೈಜಾನ್ ಗಣರಾಜ್ಯ (ಅಜೆರ್ಬೈಜಾನಿ ಭಾಷೆಯಲ್ಲಿ: Azərbaycan Respublikası), ಪಶ್ಚಿಮ ಏಷ್ಯಾ ಮತ್ತು ಪೂರ್ವ ಯುರೋಪ್ಗಳ ಸಮ್ಮಿಲನದ ಜಾಗದಲ್ಲಿ ಇರುವ ಒಂದು ದೇಶ. ಪೂರ್ವಕ್ಕೆ ಕ್ಯಾಸ್ಪಿಯನ್ ಸಮುದ್ರ, ಉತ್ತರಕ್ಕೆ ರಷ್ಯಾ, ಪಶ್ಚಿಮಕ್ಕೆ ಟರ್ಕಿ ಮತ್ತು ಅರ್ಮೇನಿಯ, ಈಶಾನ್ಯಕ್ಕೆ ಜಾರ್ಜಿಯ ಮತ್ತು ದಕ್ಷಿಣಕ್ಕೆ ಇರಾನ್ಗಳೊಂದಿಗೆ ಗಡಿಯನ್ನು ಹೊಂದಿದೆ. ನೈಋತ್ಯ ಏಷ್ಯ ಮತ್ತು ಯುರೋಪ್ನಲ್ಲಿ ಇರುವ ಒಂದು ಸ್ವತಂತ್ರ ಗಣರಾಜ್ಯ.
ಬಹ್ರೇನ್ , ಅಧಿಕೃತವಾದ ಬಹ್ರೇನ್ ರಾಜ್ಯ (ಅರೇಬಿಕ್: مملكة البحرين, Mamlakat al-Baḥrayn, ವಾಸ್ತವವಾಗಿ: "ಎರಡು ಸಮುದ್ರಗಳ ರಾಜ್ಯ") ಒಂದು ಸಣ್ಣ ದ್ವೀಪಗಳ ರಾಷ್ಟ್ರ ಪರ್ಷಿಯನ್ ಗಲ್ಫ್ನಲ್ಲಿ ಅಲ್ ಖಲೀಫಾ ರಾಯಲ್ ಪ್ಯಾಮಿಲಿ ಯಿಂದ ಆಳಲ್ಪಡುತ್ತಿತ್ತು. ಸೌದಿ ಅರೇಬಿಯಾ ಪಶ್ಚಿಮಕ್ಕೆ ನೆಲೆನಿಂತಿದೆ ಮತ್ತು ಕಿಂಗ್ ಫಾಹ್ದ ಕಾಸ್ವೇ ಮಾರ್ಗವು ಬಹ್ರೇನ್ಗೆ ಸಂಪರ್ಕಿಸುತ್ತದೆ, ಅದನ್ನು 25 ನವೆಂಬರ್ 1986 ರಂದು ಅಧಿಕೃತವಾಗಿ ತೆರೆಯಲಾಯಿತು. ಖತಾರ್ ಗೆ ಆಗ್ನೇಯ ದಿಕ್ಕಿಗೆ ಬಹ್ರೇನ್ ಗಲ್ಫ್ ಇದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.