The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ ..ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಬಿಮ್(ಭಾರತ್ ಇಂಟರ್ಫೇಸ್ ಫಾರ್ ಮನಿ) ಎನ್ನುವುದು ಏಕೀಕೃತ ಪಾವತಿ ವ್ಯವಸ್ಥೆ (ಉನಿಫೈಡ್ ಪೆಮೆಂಟ್ ಇಂಟರ್ಫೇಸ್(Unified Payment Interface (UPI))) ಆಧಾರಿತ ಭಾರತೀಯ ರಾಷ್ಟ್ರೀಯ ಪಾವತಿ ಸಂಸ್ಥೆ(ನ್ಯಾಷನಲ್ ಪೆಮೆಂಟ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ(National Payments Corporation of India (NPCI)))ಯಿಂದ ಅಭಿವೃದ್ಧಿಸಲ್ಪಟ್ಟ ಒಂದು ಮೊಬೈಲ್ ಆಪ್ ಅಗಿದೆ. ಈ ಆಪ್ ನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ದಿ. ೩೦.೧೦.೨೦೧೬ ರಂದು ನವದೆಹಲಿಯ ಟಲ್ಕೊಟರ ಸ್ಟೇಡಿಯಂನಲ್ಲಿ ಒಂದು ಡಿಜಿಧನ್ ಕಾರ್ಯಕ್ರಮದಲ್ಲಿ ಬಿಡುಗಡೆಮಾಡಿದರು.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಪರಿಸರ ಇದೇ ಲೇಖನ. ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation (ಹಿಂದಿ:महेन्द्र सिंह धोनी) (ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು) (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಪ್ರಸ್ತುತ ನಾಯಕರಾಗಿದ್ದಾರೆ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ ಸಹ, ನಂತರ ಧೋನಿಯು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಸಂಸ್ಕೃತದ ಮೂಲ ಪದ ಮತ್ತು ಅದಕ್ಕೆ ಸಮಾನಾರ್ಥಕವಾದ, ಅದೇ ಪದದ ಅಪಭ್ರಂಶವಾದ ಕನ್ನಡ ಪದ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ. ಸಂಸ್ಕೃತದಲ್ಲಿ ವ್ಯತ್ಯಾಸ ಹೊಂದದೆ ಕನ್ನಡದಲ್ಲಿ ಬಳಸಲ್ಪಡುವ ಶಬ್ದಗಳಿಗೆ ತತ್ಸಮ ಎಂದು ಹೆಸರು . ಉದಾಹರಣೆಗಳು :- ಸೂರ್ಯ , ಚಿತ್ರ , ಕ್ಷೀರ , ಯಮ , ಶ್ರೀ , ಆಶಾ , ಧ್ವನಿ , ಸ್ವರ , ಕೆಲವು ಪದಗಳು ಸಂಸ್ಕೃತದಿಂದ ಕನ್ನಡಕ್ಕೆ ಬರುವಾಗ ಅಲ್ಪ ಸ್ವಲ್ಪ ವ್ಯತ್ಯಾಸ ಹೊಂದುತ್ತದೆ ಅಥವಾ ಪೂರ್ಣ ವ್ಯತ್ಯಾಸವಾಗುತ್ತವೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಭಾರತದ ಕೇಂದ್ರ ಸರ್ಕಾರದ ಬಜೆಟ್ 2016-17
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಡವರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು, ಮಧ್ಯಮ ವರ್ಗದವರಿಗೆ ಲಾಭವಿಲ್ಲದ , ಶ್ರೀಮಂತರಿಂದ ಹೆಚ್ಚು ತೆರಿಗೆ ಸಂಗ್ರಹಿಸುವ ಉದ್ದೇಶದಿಂದ ಮೂರನೇ ಬಾರಿ 2016-17ರ ಕೇಂದ್ರ ಆಯವ್ಯಯವನ್ನು, 2016 ಫೆಬ್ರವರಿ 29ರಂದು, ಸೋಮವಾರ ಮಂಡಿಸಿದ್ದಾರೆ.