The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಶಿಲೀಂಧ್ರ ವು ಕಾರ್ಯೋಟಿಕ್ ಜೀವಿಗಳ ಒಂದು ದೊಡ್ದ ಗುಂಪಿನ ಒಂದು ಸದಸ್ಯ ಜೀವಿಯಾಗಿದೆ. ಇದು ಯೀಸ್ಟ್ಗಳು (ಕಿಣ್ವ ಬೂಸ್ಟ್ಗಳು) ಮತ್ತು ಮೊಲ್ಡ್ಗಳಂತಹ ಸೂಕ್ಷಾಣುಜೀವಿಗಳು, ಹಾಗೆಯೇ ಹೆಚ್ಚು ಜನಪ್ರಿಯವಾದ ಅಣಬೆಗಳನ್ನೂ ಒಳಗೊಳ್ಳುತ್ತದೆ. ಈ ಜೀವಿಗಳು ಕಿಂಗ್ಡಮ್, ಶಿಲೀಂಧ್ರಗಳು ಎಂಬುದಾಗಿ ವಿಂಗಡಿಸಲ್ಪಟ್ಟಿವೆ, ಇವು ಸಸ್ಯಗಳು, ಪ್ರಾಣಿಗಳು ಮತ್ತು ಬ್ಯಾಕ್ಟೀರೀಯಾಗಳಿಂದ ವಿಭಿನ್ನವಾಗಿರುತ್ತವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪುನೀತ್ ರಾಜಕುಮಾರ್ (ಇಂಗ್ಲಿಷ್: Puneet Rajkumar) (ಜನನ 1975 17 ಮಾರ್ಚ್) ಭಾರತೀಯ ಚಿತ್ರನಟ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತಾ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸಂಸ್ಕೃತದ ಮೂಲ ಪದ ಮತ್ತು ಅದಕ್ಕೆ ಸಮಾನಾರ್ಥಕವಾದ, ಅದೇ ಪದದ ಅಪಭ್ರಂಶವಾದ ಕನ್ನಡ ಪದ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ. ಸಂಸ್ಕೃತದಲ್ಲಿ ವ್ಯತ್ಯಾಸ ಹೊಂದದೆ ಕನ್ನಡದಲ್ಲಿ ಬಳಸಲ್ಪಡುವ ಶಬ್ದಗಳಿಗೆ ತತ್ಸಮ ಎಂದು ಹೆಸರು . ಉದಾಹರಣೆಗಳು :- ಸೂರ್ಯ , ಚಿತ್ರ , ಕ್ಷೀರ , ಯಮ , ಶ್ರೀ , ಆಶಾ , ಧ್ವನಿ , ಸ್ವರ , ಕೆಲವು ಪದಗಳು ಸಂಸ್ಕೃತದಿಂದ ಕನ್ನಡಕ್ಕೆ ಬರುವಾಗ ಅಲ್ಪ ಸ್ವಲ್ಪ ವ್ಯತ್ಯಾಸ ಹೊಂದುತ್ತದೆ ಅಥವಾ ಪೂರ್ಣ ವ್ಯತ್ಯಾಸವಾಗುತ್ತವೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
REDIRECT Template:Infobox laboratory equipment ಈ ಸೂಕ್ಷ್ಮ ದರ್ಶಕ ವು ( Greek: μικρός, ಮೈಕ್ರೋಸ್ , "ಸೂಕ್ಷ್ಮ" ಮತ್ತುσκοπεῖν, ಸ್ಕೋಪೆನ್ , "ವೀಕ್ಷಿಸು" ಅಥವಾ "ನೋಡು" ನಿಂದ) ಬರಿಯ ಕಣ್ಣಿಗೆ ಕಾಣಿಸದ ಸೂಕ್ಷ್ಮ ವಸ್ತುಗಳನ್ನು ನೋಡಲು ಬಳಸುವ ಉಪಕರಣವಾಗಿದೆ. ಈ ಉಪಕರಣ ಉಪಯೋಗಿಸಿ ಸಣ್ಣ ವಸ್ತುಗಳನ್ನು ಪರೀಕ್ಷಿಸುವ ವಿಜ್ಞಾನಕ್ಕೆ (ವಿಧಾನಕ್ಕೆ)ಸೂಕ್ಷ್ಮ ದರ್ಶನ (ಮೈಕ್ರೋಸ್ಕೋಪಿ) ಎಂದು ಕರೆಯಲಾಗುತ್ತದೆ. ಸೂಕ್ಷ್ಮದರ್ಶಕೀಯ(ಮೈಕ್ರೋಸ್ಕೋಪಿಕ್) ಎಂದರೆ ಸೂಕ್ಷ್ಮ ದರ್ಶಕದ ಸಹಾಯವಿಲ್ಲದೇ ಕಣ್ಣಿಗೆ ಕಾಣಿಸದಿರುವುದು.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.