The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಅಡಾಲ್ಫ್ ಹಿಟ್ಲರ್ (German pronunciation: [ˈadɔlf ˈhɪtlɐ], ೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (German: Nationalsozialistische Deutsche Arbeiterparteiಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ (Führer und Reichskanzler ) ಆಡಳಿತ ನಡೆಸಿದನು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅರ್ಥಶಾಸ್ತ್ರವು ಸರಕುಗಳ ಮತ್ತು ಸೇವೆಗಳ ಉತ್ಪಾದನೆ, ಹಂಚುವಿಕೆ ಮತ್ತು ಬಳಕೆಗಳನ್ನು ಅಧ್ಯಯನ ಮಾಡುವ ಒಂದು ಸಮಾಜ ವಿಜ್ಞಾನ. ಪ್ರಚಲಿತ ಆರ್ಥಿಕ ವಿನ್ಯಾಸಗಳು, ಭೌತಿಕ ವಿಜ್ಞಾನಗಳಿಗೆ ಹೆಚ್ಚಿನ ಸಮಾನ ಧರ್ಮವುಳ್ಳ ಒಂದು ಪ್ರಾಯೋಗಿಕ ಹಾದಿ ಬಳಸುವ ಒಂದು ಅಪೇಕ್ಷೆಗೆ ಬದ್ಧವಾಗಿ, ೧೯ನೇ ಶತಮಾನದಲ್ಲಿ ತಡವಾಗಿ ರಾಜಕೀಯ ಆರ್ಥಿಕ ವ್ಯವಸ್ಥೆಯ ವಿಶಾಲವಾದ ವ್ಯಾಪ್ತಿಯಿಂದ ಹೊರಹೊಮ್ಮಿದವು. ಆಧುನಿಕ ಅರ್ಥಶಾಸ್ತ್ರದ ಬಹಳಷ್ಟನ್ನು ನಿರೂಪಿಸುವ ಒಂದು ವ್ಯಾಖ್ಯಾನ ಲಾಯನಲ್ ರಾಬಿನ್ಸ್ರ ಒಂದು ೧೯೩೨ರ ಪ್ರಬಂಧದಲ್ಲಿದೆ: "ಮಾನವೀಯ ವರ್ತನೆಯನ್ನು ಪರ್ಯಾಯ ಉಪಯುಕ್ತತೆಗಳಿರುವ ಮಿತಿಗಳು ಮತ್ತು ದುರ್ಲಭವಾದ ಸಾಧನಗಳ ನಡುವಣ ಒಂದು ಸಂಬಂಧವಾಗಿ ಅಧ್ಯಯನಮಾಡುವ ವಿಜ್ಞಾನ." ವಿರಳತೆಯು ಲಭ್ಯವಾದ ಸಂಪನ್ಮೂಲಗಳು ಎಲ್ಲ ಬೇಕುಗಳನ್ನು ಮತ್ತು ಆವಶ್ಯಕತೆಗಳನ್ನು ನೆರವೇರಿಸಲು ಸಾಕಾಗುವುದಿಲ್ಲ ಎಂದು ಸೂಚಿಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಎಲೆಕ್ಟ್ರಾನಿಕ್ ವ್ಯಾಪಾರ(ಉದ್ಯಮ), ಅಥವಾ ಇ-ವ್ಯಾಪಾರ, ವ್ಯಾಪಾರ ಎಲ್ಲಾ ಚಟುವಟಿಕೆಗಳನ್ನು ಬೆಂಬಲವಾಗಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಬಳಕೆಯಾಗಿದೆ. ವಾಣಿಜ್ಯ ವ್ಯವಹಾರಗಳು, ತಂಡಗಳು ಮತ್ತು ವ್ಯಕ್ತಿಗಳು ಮತ್ತು ಯಾವುದೇ ವ್ಯಾಪಾರ ಅಗತ್ಯ ಚಟುವಟಿಕೆಗಳಲ್ಲಿ ಒಂದಾಗಿದೆ ಕಾಣಬಹುದು ನಡುವೆ ಉತ್ಪನ್ನಗಳು ಮತ್ತು ಸೇವೆಗಳ ವಿನಿಮಯವನ್ನು ಒಳಗೊಂಡಿದೆ. ಎಲೆಕ್ಟ್ರಾನಿಕ್ ಇಂಟರ್ನೆಟ್ ಜಾಲದ ಸಹಾಯದಿಂದ ವ್ಯವಹಾರವನ್ನು ಅಂದರೆ ಇಂಟರ್ನೆಟ್ ಸಹಾಯದಿಂದ ವ್ಯಾಪಾರ ಸೂಚಿಸುತ್ತದೆ ಬಾಹ್ಯ ಚಟುವಟಿಕೆಗಳನ್ನು ಮತ್ತು ವ್ಯಕ್ತಿಗಳು, ಗುಂಪುಗಳು ಮತ್ತು ಇತರ ವ್ಯವಹಾರಗಳಿಗೆ ಅಥವಾ ಇ ವ್ಯಾಪಾರ ವ್ಯವಹಾರ ಸಂಬಂಧಗಳನ್ನು ಸಕ್ರಿಯಗೊಳಿಸಲು ಐಸಿಟಿ ಬಳಕೆ ಕೇಂದ್ರೀಕರಿಸುತ್ತದೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ವಿಕಿಪೀಡಿಯ (ಇಂಗ್ಲಿಷ್: Wikipedia ) ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
[[File:Nutrition label.gif|right|300px|thumb| "ಪೌಷ್ಟಿಕತೆಯ ನಿಜಾಂಶಗಳು" ಟೆಬಲ್ನಲ್ಲಿ ನೀವು ಎಷ್ಟು ಪ್ರಮಾಣದ ಪೌಷ್ಟಿಕಾಂಶವನ್ನು ಸೀಮಿತಗೊಳಿಸಬೇಕು ಅಥವಾ ಬೇಕಿರುವ ಪ್ರಮಾಣದಲ್ಲಿ ಸೇವಿಸಬೇಕೆಂದು ಪರಿಣಿತರು ಸಲಹೆ ನೀಡಿರುವುದನ್ನು ಸೂಚಿಸುತ್ತದೆ.ಪೋಷಣೆ (ಪೋಷಕಾಹಾರ ಅಥವಾ ಪೌಷ್ಟಿಕಾಹಾರ )ವು ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು(ಆಹಾರದ ರೂಪದಲ್ಲಿ) ಕೋಶಗಳಿಗೆ ಮತ್ತು ಜೀವಿಗಳಿಗೆ ಒದಗಿಸುತ್ತದೆ. ಆರೋಗ್ಯಕರ ಆಹಾರಪದ್ಧತಿಯ ಮೂಲಕ ಅನೇಕ ಸಾಮಾನ್ಯ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಒಂದು ಜೀವಿಯ ಆಹಾರಪದ್ಧತಿ ಎಂದರೆ ಅದು ಏನನ್ನು ಸೇವಿಸುತ್ತದೆ ಎಂಬುದು ಹಾಗೂ ಅದನ್ನು ಹೆಚ್ಚಾಗಿ, ಆಹಾರದ ಸ್ವಾದವನ್ನರಿಯುವ ಅರ್ಹತೆಯನ್ನು ತಿಳಿಯುವ ಮೂಲಕ ನಿರ್ಧರಿಸಲಾಗುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಸಂವಹನ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಮಿದುಳು ಎಲ್ಲ ಕಶೇರುಕ ಮತ್ತು ಬಹುತೇಕ ಅಕಶೇರುಕ ಪ್ರಾಣಿಗಳಲ್ಲಿ (ಸ್ಪಂಜ್ಗಳು, ಲೋಳೆ ಮೀನು, ವಯಸ್ಕ ಕಡಲ ಚಿಮ್ಮುಗಗಳು ಹಾಗೂ ನಕ್ಷತ್ರ ಮೀನಿನಂತಹ ಕೆಲವೇ ಕೆಲವು ಅಕಶೇರುಕಗಳು ಮಿದುಳನ್ನು ಹೊಂದಿರುವುದಿಲ್ಲ, ಆದರೆ ವಿಕೀರ್ಣ ನರ ಅಂಗಾಂಗ ಇರುತ್ತದೆ) ನರಮಂಡಲದ ಕೇಂದ್ರವಾಗಿ ಕಾರ್ಯನಿರ್ವಹಿಸುವ ಒಂದು ಅಂಗ. ಅದು ತಲೆಯಲ್ಲಿ ಇರುತ್ತದೆ, ಸಾಮಾನ್ಯವಾಗಿ ಪ್ರಾಥಮಿಕ ಜ್ಞಾನೇಂದ್ರಿಯಗಳ ನಿಕಟ ದೃಷ್ಟಿ, ಶ್ರವಣ, ಸಮತೋಲನ, ರುಚಿ, ವಾಸನೆಯಂತಹ ಇಂದ್ರಿಯಕ್ಕಾಗಿ. ಒಂದು ಕಶೇರುಕದ ಶರೀರದಲ್ಲಿ ಮಿದುಳು ಅತ್ಯಂತ ಸಂಕೀರ್ಣವಾದ ಅಂಗವಾಗಿರುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಲಿಂಗಾಯತ ಧರ್ಮ:ಸಮಾನತೆ, ಭ್ರಾತೃತ್ವ ನೈತಿಕತೆ, ಪ್ರಗತಿ, ಸಮೃದ್ಧಿ ಮತ್ತು ಜ್ಞಾನದ ಸಂಕೇತ! ಭಾರತವು ಹಲವು ಧರ್ಮಗಳ ಜನ್ಮ ಸ್ಥಳವಾಗಿದೆ ಅಲ್ಲದೆ, ಹೊರ ದೇಶದ ಹಲವು ಧರ್ಮಗಳಿಗೆ ಆಶ್ರಯದಾತವಾಗಿದೆ. ಭಾರತದಲ್ಲಿ ಜನಿಸಿದ ಹಲವು ಧರ್ಮಗಳ ಪೈಕಿ, ವೀರಶೈವ ಧರ್ಮವು ಸನಾತನ ಕಾಲದಲ್ಲಿ ಪಂಚಾಚಾರ್ಯರಿಂದ ಸ್ಥಾಪಿತವಾದ ಸಮಾನತೆ ಸಾರಿದ, ಬಹು ಪ್ರಗತಿಶೀಲ ಸ್ವತಂತ್ರ ಸ್ವಾವಲಂಬಿ ಮತ್ತು ಪರಿಪೂರ್ಣ ಧರ್ಮವಾಗಿದೆ.