The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ತುಳಸಿ (ಒಸಿಮಮ್ ಬೆಸಿಲಿಕಂ )(pronounced /ˈbæzəl/ಅಥವಾ/ˈbeɪzəl/), ಲಾಮಿಯಾಸಿಯೆ(ಪುದೀನ ಸಸ್ಯಗಳು) ಸಸ್ಯ ಜಾತಿಯ, ಎಳೆಯದಾದ, ಬಹಳ ಕಡಿಮೆ ಎತ್ತರದಲ್ಲಿ ಬೆಳೆಯುವ ಸಸ್ಯವಾಗಿದೆ. ತುಳಸಿ ನಳಪಾಕಕ್ಕೆ ಯೋಗ್ಯ ಸಸ್ಯವಾಗಿದ್ದು ಇಟಾಲಿಯನ್ ಪಾಕದಲ್ಲಿ ಪ್ರಮುಖವಾಗಿ ಬಳಸಲ್ಪಡುತ್ತದೆ. ಜೊತೆಗೆ ಇದು ತೈವಾನ್ ನಂತಹ ಈಶಾನ್ಯ ಏಷಿಯಾ ಹಾಗು ಥೈಲ್ಯಾಂಡ್, ವಿಯೆಟ್ನಾಂ, ಕಾಂಬೋಡಿಯ, ಹಾಗು ಲಾವೋಸ್ ನಂತಹ ಆಗ್ನೇಯ ಏಷಿಯಾದ ಪಾಕಪದ್ದತಿಗಳಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟೆಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಶಬ್ದ ಮಾಲಿನ್ಯ (ಅಥವಾ ವಾತಾವರಣದಲ್ಲಿನ ಸದ್ದು) ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ very good ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮೈಸೂರು ರಾಜ್ಯವು 1948 ರಿಂದ 1956 ರವರೆಗೂ ಭಾರತದ ಒಕ್ಕೂಟದಲ್ಲಿ ಒಂದು ಪ್ರತ್ಯೇಕ ರಾಜ್ಯವಾಗಿತ್ತು.ಮೈಸೂರು ಇದರ ರಾಜಧಾನಿಯಾಗಿತ್ತು.1956 ರಲ್ಲಿ ಈ ರಾಜ್ಯ ಗಣನೀಯವಾಗಿ ವಿಸ್ತರಿಸಲ್ಪಟ್ಟಿತು. ಇದು 1956ರಲ್ಲಿ ಭಾಷಾವಾರು ರಾಜ್ಯ ವಿಂಗಡಣೆ ಪರಿಣಾಮ ಕೂರ್ಗ್ ರಾಜ್ಯ, ಪಶ್ಚಿಮ ಮದ್ರಾಸ್ ಪ್ರೆಸಿಡೆನ್ಸಿಯಿಂದ ಕನ್ನಡ ಮಾತನಾಡುವ ಜಿಲ್ಲೆಗಳು,ದಕ್ಷಿಣ ಬಾಂಬೆ ಪ್ರೆಸಿಡೆನ್ಸಿ,ಮತ್ತು ಪಶ್ಚಿಮ ಹೈದರಾಬಾದ್ ರಾಜ್ಯಗಳ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲಾಯಿತು ರಾಜ್ಯ ಏಕರೂಪದ ಕನ್ನಡ-ಮಾತನಾಡುವ ರಾಜ್ಯವಾಯಿತು.
ಪರಿಸರ ಇದೇ ಲೇಖನ. ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..