The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಚಾರ್ಲ್ಸ್ ರಾಬರ್ಟ್ ಡಾರ್ವಿನ್ (ಫೆಬ್ರುವರಿ ೧೨ ೧೮೦೯ — ಏಪ್ರಿಲ್ ೧೯ ೧೮೮೨) ಇಂಗ್ಲೆಂಡ್ ದೇಶದ ಪ್ರಸಿದ್ಧ ಜೀವವಿಜ್ಞಾನಿ. ಈತನು ೧೮೫೮ರಲ್ಲಿ ಮಂಡಿಸಿದ ಜೀವ ವಿಕಾಸವಾದವು ಆಧುನಿಕ ಜೀವವಿಜ್ಞಾನದ ಬುನಾದಿಯಾಗಿದೆ. ಎಡಿನ್ಬ್ರೊ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ನಡಿಸಿದ ಇವರು ೧೮೩೧ರಿಂದ ೧೮೩೬ರ ಮಧ್ಯದಲ್ಲಿ ಎಚ್ ಎಮ್ ಎಸ್ ಬೀಗಲ್ ಹಡಗಿನಲ್ಲಿ ಭೂರಚನಶಾಸ್ತ್ರ ವಿಜ್ಞಾನಿಯಾಗಿ ಪ್ರವಾಸ ಕೈ ಗೊಂಡಾಗ ನಡೆಸಿದ ಸಂಶೊಧನೆಯಿಂದ ಮೊದಲು ಪ್ರಖ್ಯಾತರಾದರು.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅನಿಲ್ ಬಿಸ್ವಾಸ್ (अनिल विश्वास) (7 ಜುಲೈ 1914 - 31 ಮೇ 2003) ಅವರು 1935 ರಿಂದ 1965ರ ಅವಧಿಯ ಭಾರತೀಯ ಚಲನಚಿತ್ರರಂಗದ ಪ್ರಸಿದ್ಧ ಸಂಗೀತ ಸಂಯೋಜಕರಾಗಿದ್ದರು, ಅದರ ಜೊತೆಗೆ ಅವರು ಮುಂಚೂಣಿಯಲ್ಲಿದ್ದ ಹಿನ್ನೆಲೆ ಗಾಯಕರಲ್ಲಿ ಒಬ್ಬರಾಗಿದ್ದರು, ಹನ್ನೆರಡು ಜನರ ಮೊದಲ ಭಾರತೀಯ ಆರ್ಕೆಸ್ಟ್ರಾದಲ್ಲಿ ಒಬ್ಬರಾಗಿದ್ದರು ಹಾಗೂ ಆರ್ಕೇಸ್ಟ್ರಾದ ಸಂಗೀತ ಮತ್ತು ಜೋರಾದ ಕೋರಲ್ ಪರಿಣಾಮಗಳನ್ನು ಭಾರತೀಯ ಚಲನಚಿತ್ರ ರಂಗಕ್ಕೆ ಪರಿಚಯಿಸಿದರು . ಪಾಶ್ಚಿಮಾತ್ಯ ಸಿಂಫೋನಿಕ್ ಮ್ಯೂಸಿಕ್ನಲ್ಲಿ ಪರಿಣತಿ ಪಡೆದಿದ್ದರು, ಭಾರತೀಯ ಶಾಸ್ತ್ರೀಯ ಅಥವಾ ವಿಶೇಷವಾಗಿ ಬೌಲ್ ಹಾಗೂ ಭಟಿಯಾಲಿಗಳಂತಹ ಜಾನಪದ ಸಂಗೀತವನ್ನು ಕೂಡಾ ಬಲ್ಲವರಾಗಿದ್ದರು . ಅವರ 90 ಚಲನಚಿತ್ರಗಳಲ್ಲಿ, ಅತ್ಯಂತ ನೆನಪಿನಲ್ಲಿಯುಳಿಯುವಂತಹವೆಂದರೆ, ರೋಟಿ (1942), ಕಿಸ್ಮತ್ (1943 ಚಲನಚಿತ್ರ) (1943), ಅನೋಕಾ ಪ್ಯಾರ್ (1948), ತರಾನಾ (1951), ವಾರಿಸ್ (1954), ಪರ್ದೇಸಿ (1957) ಹಾಗೂ ಚಾರ್ ದಿಲ್ ಚಾರ್ ರಾಹೇ (1959).
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
Bhovi / Waddar 'ಒಡ್ಡರು / ಭೋವಿ ಜನಾಂಗ /' ಮೇನೆಯವರ ಸಂಸ್ಕೃತಿ ಸ್ವರೂಪ, ಪ್ರಾಚೀನತೆ, ಜನಬಾಹುಳ್ಯ: ಭಾರತ ದೇಶ ಹಲವು ಧರ್ಮ, ಜಾತಿ-ಜನಾಂಗ-ಪಂಗಡಗಳನ್ನು ತನ್ನ ತೆಕ್ಕೆಯಲ್ಲಿ ಪೋಷಿಸುತ್ತ ಬಂದಿದೆ. ವಿಭಿನ್ನತೆಯಲ್ಲಿ ಏಕತೆಯನ್ನು ಪಡೆದ ನಮ್ಮ ದೇಶ ’ಸರ್ವಜನಾಂಗದ ಶಾಂತಿಯ ತೋಟ’ವಾಗಿ ಬದುಕಿಗೆ ನೆಮ್ಮದಿಯನ್ನು ನೀಡಿದರೆ ’ರಸಿಕರ ಕಂಗಳನ್ನು ಸೆಳೆದು ಸವಿಯ ಸುಂದರ ನೋಟ’ವನ್ನು ಕೊಟ್ಟು ಮನಸ್ಸಿಗೆ ತೃಪ್ತಿ ಕೊಡುತ್ತದೆ. ಈ ದಿಸೆಯಲ್ಲಿ ಹೊರಟಾಗ ಪ್ರಾಕೃತಿಕ ಸೌಂದರ್ಯದೊಡನೆ ಮಾನವ ನಿರ್ಮಿತ ಅದ್ಭುತ ಕಲಾಪ್ರಪಂಚವು ನಮ್ಮನ್ನು ಕೈಬೀಸಿ ಕರೆಯುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಅಬ್ದುಲ್ ರಷೀದ್ ಸಲೀಮ್ ಸಲ್ಮಾನ್ ಖಾನ್ (ಹಿಂದಿ:सलमान ख़ान, ಉರ್ದು: سلمان خان, ಎಂದು ಉಚ್ಚರಿಸಲಾಗುವ ಬಾಲಿವುಡ್ ಚಲನಚಿತ್ರಗಳಲ್ಲಿ ಅಭಿನಯಿಸಿದ ಭಾರತೀಯ ಚಿತ್ರ ನಟನಜನ್ಮ ದಿನ ಡಿಸೆಂಬರ್ 27ಡಿಸೆಂಬರ್ 27 1965. ಸಲ್ಮಾನ್ ಖಾನ್ ಅಭಿನಯಿಸಿದ ಮೊದಲ ಚಿತ್ರ 'ಬಿವಿ ಹೊ ತೊ ಐಸಿ' (1988).ಖಾನ್ನ ಮೊದಲ ಯಶಸ್ವೀ ಚಿತ್ರ ಮೈನೆ ಪ್ಯಾರ್ ಕಿಯಾ (1989) ಗಳಿಕೆಯಲ್ಲಿ ಭರ್ಜರಿ ಯಶಸ್ವಿಯಾಗಿ, ಚಿತ್ರದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಮೊದಲ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ಸಾಜನ್ (1991), ಹಮ್ ಅಪ್ಕೆ ಹೈ ಕೌನ್ (1994), ಬೀವಿ ನಂ.1 (1999) ಅಂತಹ ಕೆಲವು ಬಾಲಿವುಡ್ನ ಅತ್ಯಂತ ಯಶಸ್ವೀ ಚಿತ್ರಗಳಲ್ಲಿ ಅಭಿನಯಿಸಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಅಬ್ಯಾಕಸ್ ಅನ್ನು(ಲೆಕ್ಕದ ಮಣಿ ಚೌಕಟ್ಟು), ಎಣಿಕೆಯ ಚೌಕಟ್ಟು ಎಂದೂ ಕೂಡ ಕರೆಯಲಾಗುತ್ತದೆ, ಇದು ಪ್ರಾಥಮಿಕವಾಗಿ ಏಶಿಯಾದ ಕೆಲವು ಭಾಗಗಳಲ್ಲಿ ಅಂಕಗಣಿತದ ಪ್ರಕ್ರಿಯೆಯ ನಿರ್ವಹಣೆಗಾಗಿ ಬಳಸಿಕೊಂಡ, ಎಣಿಕೆಮಾಡುವ ಒಂದು ಸಾಧನವಾಗಿತ್ತು. ಇಂದಿನ ದಿನಗಳಲ್ಲಿ, ಅಬ್ಯಾಕಸ್ಗಳನ್ನು ಯಾವಾಗಲೂ ಒಂದು ಬಿದಿರಿನ ಚೌಕಟ್ಟಿನೊಳಗೆ ಮಣಿಗಳನ್ನು ದಾರದಲ್ಲಿ ಪೋಣಿಸಿ ರಚಿಸಲಾಗುತ್ತದೆ, ಆದರೆ ಮೂಲತಹವಾಗಿ ಅವುಗಳು ಮರಳಿನಲ್ಲಿ ಕೊರೆದು ಅಥವಾ ಮರದ ಹಲಗೆಗಳ ಮೇಲೆ, ಕಲ್ಲುಗಳ ಮೇಲೆ, ಅಥವಾ ಲೋಹಗಳ ಮೇಲೆ ಜೋಡಿಸಲ್ಪಟ್ಟ ಹುರುಳಿಕಾಯಿ ಅಥವಾ ಕಲ್ಲುಗಳಾಗಿದ್ದವು. ಅಬ್ಯಾಕಸ್ಗಳು, ಬರವಣಿಗೆಯ ರೂಪದಲ್ಲಿರುವ ಆಧುನಿಕ ಸಂಖ್ಯಾವಾಚಕ ವಿಧಾನವನ್ನು ಅಳವಡಿಸಿಕೊಳ್ಳುವ ಒಂದು ಶತಮಾನಕ್ಕಿಂತ ಮೋದಲು ಬಳಕೆಯಲ್ಲಿದ್ದವು ಮತ್ತು ಇದು ಇಂದಿಗೂ ವರ್ತಕರಿಂದ, ವ್ಯಾಪಾರಿಗಳಿಂದ ಮತ್ತು ಏಶಿಯಾ, ಆಫ್ರಿಕಾ ಮತ್ತು ಜಗತ್ತಿನ ಹಲವಾರು ಗುಮಾಸ್ತರುಗಳಿಂದ ವ್ಯಾಪಕವಾಗಿ ಬಳಕೆಯಾಗುತ್ತಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
Bulleted list item ಭಾರತದಲ್ಲಿ ಬಡತನ ಬಹುವ್ಯಾಪಕವಾಗಿದ್ದು, ವಿಶ್ವದ ಒಟ್ಟು ಬಡವರ ಸಂಖ್ಯೆಯಲ್ಲಿ ಮೂರನೇ ಒಂದು ಭಾಗ ರಾಷ್ಟ್ರದಲ್ಲಿದ್ದಾರೆಂದು ಅಂದಾಜು ಮಾಡಲಾಗಿದೆ. ಭಾರತದ ಯೋಜನಾ ಆಯೋಗ ಬಳಸಿದ ಮಾನದಂಡದ ಅನ್ವಯ 2004-2005ರಲ್ಲಿ ಜನಸಂಖ್ಯೆಯ 27.5% ಬಡತನ ರೇಖೆ ಕೆಳಗೆ(ಕಡುಬಡತನ)ವಾಸಿಸಿದ್ದು, 1977-1978ರಲ್ಲಿ 51.3%ಗಿಂತ ಮತ್ತು 1993-1994ರಲ್ಲಿ 36%ಗಿಂತ ಕೆಳಮುಖದಲ್ಲಿದೆ. UN ಅಭಿವೃದ್ಧಿ ಕಾರ್ಯಕ್ರಮ, ಮಾನವ ಅಭಿವೃದ್ಧಿ ಸೂಚ್ಯಂಕದ(HDI)ಪ್ರಕಾರ,ಭಾರತದ ಜನಸಂಖ್ಯೆಯಲ್ಲಿ 75.6% ದಿನಕ್ಕೆ $2ಗಿಂತ ಕಡಿಮೆ ಆದಾಯದಲ್ಲಿ ಜೀವಿಸುತ್ತಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೆ.ಎಸ್.ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ.